ಉಪವರ್ಗಗಳು

ಹದೀಸ್‌ಗಳ ಪಟ್ಟಿ

"ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?*" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.
عربي ಆಂಗ್ಲ ಉರ್ದು
“ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ*” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮಾಟಗಾರಿಕೆ (ವಾಮಾಚಾರ) ಮಾಡುವುದು; ಅಲ್ಲಾಹು (ಹತ್ಯೆ ಮಾಡುವುದು) ನಿಷೇಧಿಸಿದ ಮನುಷ್ಯ ಜೀವಿಯನ್ನು ನೈತಿಕ ಹಕ್ಕಿನಿಂದಲ್ಲದೆ ಹತ್ಯೆ ಮಾಡುವುದು; ಬಡ್ಡಿ ತಿನ್ನುವುದು; ಅನಾಥರ ಆಸ್ತಿಯನ್ನು ತಿನ್ನುವುದು; ಯುದ್ಧಭೂಮಿಯಿಂದ ಪಲಾಯನ ಮಾಡುವುದು; ಮತ್ತು ಪರಿಶುದ್ಧ, ಮುಗ್ಧ ಹಾಗೂ ಸತ್ಯವಿಶ್ವಾಸಿಗಳಾದ ಮಹಿಳೆಯರ ಮೇಲೆ ದುರಾರೋಪ ಹೊರಿಸುವುದು.”
عربي ಆಂಗ್ಲ ಉರ್ದು
“ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ.* ನೀವು ಒಬ್ಬರನ್ನೊಬ್ಬರು ಬೇಹುಗಾರಿಕೆ ಮಾಡಬೇಡಿ, ಒಬ್ಬರು ಇನ್ನೊಬ್ಬರ ಖಾಸಗಿ ವಿಚಾರಗಳನ್ನು ಕೆದಕಬೇಡಿ, ಒಬ್ಬರನ್ನೊಬ್ಬರು ಅಸೂಯೆ ಪಡಬೇಡಿ, ಒಬ್ಬರಿಗೊಬ್ಬರು ಮುಖ ತಿರುಗಿಸಬೇಡಿ, ಒಬ್ಬರನ್ನೊಬ್ಬರು ದ್ವೇಷಿಸಬೇಡಿ. ಓ ಅಲ್ಲಾಹನ ದಾಸರೇ, ನೀವು ಸಹೋದರರಾಗಿರಿ."
عربي ಆಂಗ್ಲ ಉರ್ದು
“ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
عربي ಆಂಗ್ಲ ಉರ್ದು
"ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ."
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ."
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
"ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?"* ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ ಮತ್ತು ಝಕಾತ್‌ಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇತರರನ್ನು ನಿಂದಿಸಿ, ಇತರರ ಮೇಲೆ ಸುಳ್ಳಾರೋಪ ಹೊರಿಸಿ, ಇತರರ ರಕ್ತ ಚೆಲ್ಲಿ ಮತ್ತು ಇತರರಿಗೆ ಥಳಿಸಿದಂತಹ ಪಾಪಗಳೊಂದಿಗೂ ಬರುತ್ತಾನೆ. ಆಗ ಅವನ ಸತ್ಕರ್ಮಗಳಿಂದ ಕೆಲವನ್ನು ನೀಡಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅವರ ಕೆಲವು ಪಾಪಗಳನ್ನು ತೆಗೆದು ಇವನ ಮೇಲೆ ಹೊರಿಸಲಾಗುವುದು. ನಂತರ ಅವನನ್ನು ನರಕಕ್ಕೆ ಎಸೆಯಲಾಗುವುದು."
عربي ಆಂಗ್ಲ ಉರ್ದು
"ಒಬ್ಬ ಪುರುಷನು ಇನ್ನೊಬ್ಬ ಪುರುಷನ ಖಾಸಗಿ ಭಾಗಗಳನ್ನು ಮತ್ತು ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಖಾಸಗಿ ಭಾಗಗಳನ್ನು ನೋಡಬಾರದು.* ಒಬ್ಬ ಪುರುಷನು ಇನ್ನೊಬ್ಬ ಪುರುಷನ ಜೊತೆಗೆ ಒಂದೇ ಬಟ್ಟೆಯಲ್ಲಿ ಮಲಗಬಾರದು. ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಜೊತೆಗೆ ಒಂದೇ ಬಟ್ಟೆಯಲ್ಲಿ ಮಲಗಬಾರದು."
عربي ಆಂಗ್ಲ ಉರ್ದು
"ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."
عربي ಆಂಗ್ಲ ಉರ್ದು