ಉಪವರ್ಗಗಳು

ಹದೀಸ್‌ಗಳ ಪಟ್ಟಿ

ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು
عربي ಆಂಗ್ಲ ಉರ್ದು
ಅಲ್ಲಾಹುಮ್ಮ ಅಸ್ಲಿಹ್ ಲೀ ದೀನೀ ಅಲ್ಲದೀ ಹುವ ಇಸ್ಮತು ಅಮ್ರೀ,
عربي ಆಂಗ್ಲ ಉರ್ದು
ಓ ನನ್ನ ಪರಿಪಾಲಕನೇ! ನನ್ನ ಪಾಪಗಳನ್ನು, ಅವಿವೇಕತನವನ್ನು, ನನ್ನ ಎಲ್ಲಾ ಕೆಲಸ-ಕಾರ್ಯಗಳಲ್ಲಿರುವ ಅಪರಿಮಿತಿಯನ್ನು ಮತ್ತು ನನ್ನ ಬಗ್ಗೆ ನೀನು ನನಗಿಂತ ಹೆಚ್ಚು ತಿಳಿದಿರುವುದೆಲ್ಲವನ್ನೂ ಕ್ಷಮಿಸು. ಓ ಅಲ್ಲಾಹ್! ನನ್ನ ತಪ್ಪುಗಳನ್ನು, ಉದ್ದೇಶಪೂರ್ವಕವಾಗಿ ಮಾಡಿದ್ದನ್ನು, ಅವಿವೇಕತನದಿಂದ ಮಾಡಿದ್ದನ್ನು, ತಮಾಷೆಗಾಗಿ ಮಾಡಿದ್ದನ್ನು ಮತ್ತು ನನ್ನಲ್ಲಿರುವ ಎಲ್ಲಾ ಪಾಪಗಳನ್ನೂ ಕ್ಷಮಿಸು. ಓ ಅಲ್ಲಾಹ್! ನಾನು ಮುಂದಕ್ಕೆ ಕಳುಹಿಸಿರುವ, ಹಿಂದೆ ಬಿಟ್ಟಿರುವ, ಬಹಿರಂಗಪಡಿಸಿರುವ ಮತ್ತು ರಹಸ್ಯವಾಗಿ ಮಾಡಿರುವ ಪಾಪಗಳನ್ನು ಕ್ಷಮಿಸು. ನೀನೇ ಮುಂದಕ್ಕೆ ತರುವವನು ಮತ್ತು ಹಿಂದಕ್ಕೆ ತಳ್ಳುವವನು. ನೀನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನು
عربي ಆಂಗ್ಲ ಉರ್ದು
ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ನಿನ್ನಲ್ಲಿ ಸೌಖ್ಯವನ್ನು ಬೇಡುತ್ತೇನೆ
عربي ಆಂಗ್ಲ ಉರ್ದು
ಓ ಅಲ್ಲಾಹ್! ನಾನು ನಿನ್ನಲ್ಲಿ ತಕ್ಷಣದ ಮತ್ತು ತಡವಾಗಿರುವ ಎಲ್ಲಾ ಒಳಿತುಗಳನ್ನು ಬೇಡುತ್ತೇನೆ. ಅವುಗಳ ಪೈಕಿ ನಾನು ತಿಳಿದಿರುವುದನ್ನು ಮತ್ತು ತಿಳಿಯದಿರುವುದನ್ನು ಕೂಡ. ನಾನು ನಿನ್ನಲ್ಲಿ ತಕ್ಷಣದ ಮತ್ತು ತಡವಾಗಿರುವ ಎಲ್ಲಾ ಕೆಡುಕುಗಳಿಂದ ರಕ್ಷೆ ಬೇಡುತ್ತೇನೆ. ಅವುಗಳ ಪೈಕಿ ನಾನು ತಿಳಿದಿರುವುದರಿಂದ ಮತ್ತು ತಿಳಿಯದಿರುವುದರಿಂದ ಕೂಡ
عربي ಆಂಗ್ಲ ಉರ್ದು
ಓ ಅಲ್ಲಾಹ್! ನಿನ್ನ ಅನುಗ್ರಹಗಳ ನಿವಾರಣೆಯಿಂದ, ನಿನ್ನ ಸೌಖ್ಯದ ಬದಲಾವಣೆಯಿಂದ, ನಿನ್ನ ಹಠಾತ್ ಶಿಕ್ಷೆಯಿಂದ ಮತ್ತು ನಿನ್ನ ಸರ್ವ ಕ್ರೋಧಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ
عربي ಆಂಗ್ಲ ಉರ್ದು
ಓ ಅಲ್ಲಾಹ್! ನಾನು ನಿನ್ನಲ್ಲಿ ಸಾಲದ ಪ್ರಾಬಲ್ಯದಿಂದ, ಶತ್ರುಗಳ ಪ್ರಾಬಲ್ಯದಿಂದ ಮತ್ತು ಶತ್ರುಗಳು ಸಂಭ್ರಮಿಸುವುದರಿಂದ ರಕ್ಷೆ ಬೇಡುತ್ತೇನೆ
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೆಚ್ಚಾಗಿ ಪ್ರಾರ್ಥಿಸುತ್ತಿದ್ದ ಪ್ರಾರ್ಥನೆ ಹೀಗಿತ್ತು: "ಓ ಅಲ್ಲಾಹ್! ನಮಗೆ ಇಹಲೋಕದಲ್ಲಿ ಒಳಿತನ್ನು ದಯಪಾಲಿಸು ಮತ್ತು ಪರಲೋಕದಲ್ಲೂ ಒಳಿತನ್ನು ದಯಪಾಲಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ಪಾರು ಮಾಡು
عربي ಆಂಗ್ಲ ಉರ್ದು
ಓ ಅಲ್ಲಾಹ್! ನನಗೆ ಮಾರ್ಗದರ್ಶನ ನೀಡು ಮತ್ತು ನನ್ನನ್ನು ನೇರವಾಗಿಡು. ಮಾರ್ಗದರ್ಶನವನ್ನು ಬೇಡುವಾಗ ನೇರವಾದ ಮಾರ್ಗದಲ್ಲಿ ಮುನ್ನಡೆಸುವಂತೆ ಬೇಡು ಮತ್ತು ನೇರವಾಗಿರುವುದನ್ನು ಬೇಡುವಾಗ ಬಾಣದಷ್ಟು ನೇರವಾಗಿರುವುದನ್ನು ಬೇಡು
عربي ಆಂಗ್ಲ ಉರ್ದು
“ಹೇಳು: ‘ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಅಲ್ಲಾಹು ಅತ್ಯಂತ ಮಹಾನನು ಮತ್ತು ಸರ್ವೋನ್ನತನು, ಸರ್ವಸ್ತುತಿಗಳು ಹೇರಳವಾಗಿ ಅಲ್ಲಾಹನಿಗೆ, ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಪರಿಶುದ್ಧನಾಗಿದ್ದಾನೆ. ಪ್ರಚಂಡ ಶಕ್ತಿಶಾಲಿ ಮತ್ತು ಪರಮ ಜ್ಞಾನಿಯಾದ ಅಲ್ಲಾಹನ ಹೊರತು ಬೇರೆ ಶಕ್ತಿ ಅಥವಾ ಸಾಮರ್ಥ್ಯವಿಲ್ಲ.’”
عربي ಆಂಗ್ಲ ಉರ್ದು