ಉಪವರ್ಗಗಳು

ಹದೀಸ್‌ಗಳ ಪಟ್ಟಿ

"ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?*" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
“ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ*” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮಾಟಗಾರಿಕೆ (ವಾಮಾಚಾರ) ಮಾಡುವುದು; ಅಲ್ಲಾಹು (ಹತ್ಯೆ ಮಾಡುವುದು) ನಿಷೇಧಿಸಿದ ಮನುಷ್ಯ ಜೀವಿಯನ್ನು ನೈತಿಕ ಹಕ್ಕಿನಿಂದಲ್ಲದೆ ಹತ್ಯೆ ಮಾಡುವುದು; ಬಡ್ಡಿ ತಿನ್ನುವುದು; ಅನಾಥರ ಆಸ್ತಿಯನ್ನು ತಿನ್ನುವುದು; ಯುದ್ಧಭೂಮಿಯಿಂದ ಪಲಾಯನ ಮಾಡುವುದು; ಮತ್ತು ಪರಿಶುದ್ಧ, ಮುಗ್ಧ ಹಾಗೂ ಸತ್ಯವಿಶ್ವಾಸಿಗಳಾದ ಮಹಿಳೆಯರ ಮೇಲೆ ದುರಾರೋಪ ಹೊರಿಸುವುದು.”
عربي ಆಂಗ್ಲ ಉರ್ದು
"ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ*." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಕೊಲೆಗಾರನು ನರಕಕ್ಕೆ ಹೋಗುವುದು ಸರಿ. ಆದರೆ ಕೊಲೆಯಾದವನು ಏಕೆ ನರಕಕ್ಕೆ ಹೋಗಬೇಕು?" ಅವರು ಉತ್ತರಿಸಿದರು: "ಏಕೆಂದರೆ ಅವನಿಗೆ ತನ್ನ ಎದುರಾಳಿಯನ್ನು ಕೊಲ್ಲಬೇಕೆಂಬ ಅತೀವ ಉತ್ಸಾಹವಿತ್ತು."
عربي ಆಂಗ್ಲ ಉರ್ದು
"ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ.* ಕಸ್ತೂರಿ ಮಾರುವವನು ನಿನಗೆ ಸ್ವಲ್ಪ ಕಸ್ತೂರಿಯನ್ನು ಕೊಡಬಹುದು. ಅಥವಾ ನೀನು ಅವನಿಂದ ಅದನ್ನು ಖರೀದಿಸಬಹುದು. ಅಥವಾ ನಿನಗೆ ಅವನಿಂದ ಉತ್ತಮ ಸುವಾಸನೆಯನ್ನು ಅನುಭವಿಸಬಹುದು. ಆದರೆ ತಿದಿ ಊದುವವನು ನಿನ್ನ ಬಟ್ಟೆಯನ್ನು ಸುಟ್ಟು ಹಾಕಬಹುದು. ಅಥವಾ ನಿನಗೆ ಅವನಿಂದ ಕೆಟ್ಟ ವಾಸನೆಯನ್ನು ಅನುಭವಿಸಬೇಕಾಗಬಹುದು."
عربي ಆಂಗ್ಲ ಉರ್ದು
"ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು.* ಬಹಿರಂಗವಾಗಿ ಪಾಪ ಮಾಡುವ ಒಂದು ರೂಪ ಹೇಗೆಂದರೆ, ಒಬ್ಬ ವ್ಯಕ್ತಿ ರಾತ್ರಿಯಲ್ಲಿ ಒಂದು ಪಾಪವನ್ನು ಮಾಡುತ್ತಾನೆ. ನಂತರ ಅಲ್ಲಾಹು ಅದನ್ನು ಅವನಿಗಾಗಿ ಮುಚ್ಚಿಟ್ಟರೂ, ಮರುದಿನ ಬೆಳಗ್ಗೆ ಅವನು ಹೇಳುತ್ತಾನೆ: "ಓ ಇಂತಿಂತಹವರೇ! ನಾನು ನಿನ್ನೆ ರಾತ್ರಿ ಇಂತಿಂತಹ ಪಾಪ ಮಾಡಿದ್ದೇನೆ. ಅವನ ಪರಿಪಾಲಕನು (ಅಲ್ಲಾಹು) ಅವನ ಪಾಪವನ್ನು ಮುಚ್ಚಿಟ್ಟ ಸ್ಥಿತಿಯಲ್ಲಿ ಅವನು ರಾತ್ರಿಯನ್ನು ಕಳೆದಿದ್ದನು. ಆದರೆ ಬೆಳಗಾದಾಗ ಅವನು ಆ ಮುಚ್ಚಿಗೆಯನ್ನು ತೆರೆದು ಬಿಡುತ್ತಾನೆ."
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು