ಉಪವರ್ಗಗಳು

ಹದೀಸ್‌ಗಳ ಪಟ್ಟಿ

“ಒಬ್ಬ ದಾಸ ಅನಾರೋಗ್ಯ ಪೀಡಿತನಾದರೆ ಅಥವಾ ಪ್ರಯಾಣದಲ್ಲಿದ್ದರೆ, ಅವನು ನಿವಾಸಿಯಾಗಿದ್ದಾಗ ಮತ್ತು ಆರೋಗ್ಯವಂತನಾಗಿದ್ದಾಗ ಏನೆಲ್ಲಾ ಕರ್ಮಗಳನ್ನು ಮಾಡುತ್ತಿದ್ದನೋ ಅವೆಲ್ಲವನ್ನೂ ಅವನ ಹೆಸರಿಗೆ ದಾಖಲಿಸಲಾಗುತ್ತದೆ.”
عربي ಆಂಗ್ಲ ಉರ್ದು
"ಸೂರ್ಯ ಉದಯವಾಗುವ ಎಲ್ಲಾ ದಿನಗಳಲ್ಲೂ ಮನುಷ್ಯನ ದೇಹದ ಎಲ್ಲಾ ಸಂಧಿಗಳಿಗೂ ದಾನ ನೀಡಬೇಕಾಗಿದೆ.* ಇಬ್ಬರು ಮನುಷ್ಯರ ನಡುವೆ ನ್ಯಾಯ ಪಾಲಿಸುವುದು ದಾನವಾಗಿದೆ. ಒಬ್ಬ ವ್ಯಕ್ತಿಗೆ ಅವನ ಸವಾರಿಯನ್ನೇರಲು ಸಹಾಯ ಮಾಡುವುದು ಅಥವಾ ಅವನ ಸಾಮಾನುಗಳನ್ನು ಎತ್ತಿ ಅದರ ಮೇಲಿಡುವುದು ದಾನವಾಗಿದೆ. ಉತ್ತಮವಾದ ಮಾತು ದಾನವಾಗಿದೆ. ನಮಾಝ್ ನಿರ್ವಹಿಸುವುದಕ್ಕಾಗಿ ಇಡುವ ಪ್ರತಿಯೊಂದು ಹೆಜ್ಜೆಯೂ ದಾನವಾಗಿದೆ. ರಸ್ತೆಯಿಂದ ತೊಂದರೆಗಳನ್ನು ನಿವಾರಿಸುವುದು ದಾನವಾಗಿದೆ."
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಮಕ್ಕಾ ವಿಜಯದ ದಿನದಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರವಚನ ನೀಡುತ್ತಾ ಹೇಳಿದರು: "@ಓ ಜನರೇ! ಅಲ್ಲಾಹು ನಿಮ್ಮಿಂದ ಅಜ್ಞಾನಕಾಲದ ದರ್ಪ ಮತ್ತು ಪೂರ್ವಜರ ಹೆಸರಿನಲ್ಲಿ ಜಂಭಕೊಚ್ಚುವುದನ್ನು ತೆಗೆದುಹಾಕಿದ್ದಾನೆ*. ಜನರಲ್ಲಿ ಎರಡು ವಿಧಗಳಿವೆ: ಅಲ್ಲಾಹನ ಗೌರವಕ್ಕೆ ಪಾತ್ರರಾದ ಧರ್ಮನಿಷ್ಠ, ನೀತಿವಂತ ಜನರು ಮತ್ತು ಅಲ್ಲಾಹು ತುಚ್ಛವಾಗಿ ಪರಿಗಣಿಸುವ ಕೆಟ್ಟ, ನತದೃಷ್ಟ ಜನರು. ಮನುಷ್ಯರೆಲ್ಲರೂ ಆದಮರ ಮಕ್ಕಳು. ಅಲ್ಲಾಹು ಆದಮರನ್ನು ಮಣ್ಣಿನಿಂದ ಸೃಷ್ಟಿಸಿದನು. ಅಲ್ಲಾಹು ಹೇಳುತ್ತಾನೆ: "ಜನರೇ! ನಿಶ್ಚಯವಾಗಿಯೂ ನಾವು ನಿಮ್ಮನ್ನು ಒಂದು ಗಂಡು ಮತ್ತು ಒಂದು ಹೆಣ್ಣಿನಿಂದ ಸೃಷ್ಟಿಸಿದ್ದೇವೆ. ನೀವು ಪರಸ್ಪರ ಗುರುತಿಸುವುದಕ್ಕಾಗಿ ನಾವು ನಿಮ್ಮನ್ನು ವಿಭಿನ್ನ ಜನಾಂಗ ಮತ್ತು ಗೋತ್ರಗಳನ್ನಾಗಿ ಮಾಡಿದೆವು. ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯಧಿಕ ದೇವಭಯವುಳ್ಳವನು ಯಾರೋ ಅವನೇ ಅಲ್ಲಾಹನ ದೃಷ್ಟಿಯಲ್ಲಿ ಅತ್ಯಂತ ಗೌರವಾನ್ವಿತನು. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ಸೂಕ್ಷ್ಮ ಜ್ಞಾನಿಯಾಗಿದ್ದಾನೆ." [ಹುಜುರಾತ್ 13]."
عربي ಆಂಗ್ಲ ಉರ್ದು