ಹದೀಸ್‌ಗಳ ಪಟ್ಟಿ

ಯಾರು ನಾನಿಲ್ಲಿ ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ, ಇಹಲೋಕದ ಯಾವುದೇ ವಿಷಯದ ಬಗ್ಗೆ ಏನೂ ಯೋಚಿಸದೆ ಎರಡು ರಕಅತ್ ನಮಾಝ್ ನಿರ್ವಹಿಸುತ್ತಾರೋ ಅವರ ಗತ ಪಾಪಗಳನ್ನು ಅಲ್ಲಾಹು ಕ್ಷಮಿಸುತ್ತಾನೆ
عربي ಆಂಗ್ಲ ಉರ್ದು
ನಿಮ್ಮಲ್ಲೊಬ್ಬರಿಗೆ ಅಶುದ್ಧಿಯುಂಟಾದರೆ ಅವರು ವುದೂ ನಿರ್ವಹಿಸುವ ತನಕ ಅಲ್ಲಾಹು ಅವರ ನಮಾಝನ್ನು ಸ್ವೀಕರಿಸುವುದಿಲ್ಲ
عربي ಆಂಗ್ಲ ಉರ್ದು
ಯಾರು ಉತ್ತಮ ರೀತಿಯಲ್ಲಿ ವುದೂ ನಿರ್ವಹಿಸುತ್ತಾರೋ ಅವರ ಪಾಪಗಳು ಅವರ ದೇಹದಿಂದ ಹೊರಟುಹೋಗುತ್ತವೆ; ಎಲ್ಲಿಯವರೆಗೆಂದರೆ, ಅವರ ಉಗುರುಗಳ ಅಡಿಭಾಗದಿಂದಲೂ ಸಹ
عربي ಆಂಗ್ಲ ಉರ್ದು
“ಶುದ್ಧೀಕರಣವು ಸತ್ಯವಿಶ್ವಾಸದ ಅರ್ಧ ಭಾಗವಾಗಿದೆ. ‘ಅಲ್-ಹಮ್ದುಲಿಲ್ಲಾಹ್’ ಎಂಬ ವಚನವು ತಕ್ಕಡಿಯನ್ನು ತುಂಬುತ್ತದೆ. ‘ಸುಬ್‌ಹಾನಲ್ಲಾಹ್ ವಲ್-ಹಮ್ದುಲಿಲ್ಲಾಹ್’ ಎಂಬ ವಚನಗಳು ತಕ್ಕಡಿಯನ್ನು ತುಂಬುತ್ತವೆ, ಅಥವಾ ಭೂಮ್ಯಾಕಾಶಗಳ ನಡುವಿನ ಭಾಗವನ್ನು ತುಂಬುತ್ತವೆ
عربي ಆಂಗ್ಲ ಉರ್ದು
ಹಿಮ್ಮಡಿಗಳಿಗೆ ನರಕಾಗ್ನಿಯಿಂದ ವಿನಾಶವಿದೆ. ಪೂರ್ಣವಾಗಿ ವುದೂ ನಿರ್ವಹಿಸಿರಿ
عربي ಆಂಗ್ಲ ಉರ್ದು
ನಿಮ್ಮಲ್ಲೊಬ್ಬರು ವುದೂ (ಅಂಗಸ್ನಾನ) ಮಾಡುವಾಗ, ಮೂಗಿಗೆ ನೀರನ್ನು ಎಳೆದು ಹೊರಬಿಡಲಿ. ನಿಮ್ಮಲ್ಲೊಬ್ಬನು ಇಸ್ತಿಜ್ಮಾರ್ (ಕಲ್ಲು ಮುಂತಾದ ವಸ್ತುಗಳಿಂದ ಶುಚಿ) ಮಾಡುವಾಗ ಬೆಸ ಸಂಖ್ಯೆಯಲ್ಲಿ ಮಾಡಲಿ
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವುದೂ ನಿರ್ವಹಿಸಿದಂತೆ ವುದೂ ನಿರ್ವಹಿಸಿ ತೋರಿಸಿದರು
عربي ಆಂಗ್ಲ ಉರ್ದು
ಒಬ್ಬ ವ್ಯಕ್ತಿ ವುದೂ ನಿರ್ವಹಿಸಿದರು ಮತ್ತು ತನ್ನ ಪಾದದಲ್ಲಿ ಉಗುರಿನ ಗಾತ್ರದ ಸ್ಥಳವನ್ನು ಬಿಟ್ಟುಬಿಟ್ಟರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅದನ್ನು ನೋಡಿ ಹೇಳಿದರು: "ಹಿಂದಿರುಗಿ ಹೋಗು ಮತ್ತು ಅತ್ಯುತ್ತಮವಾಗಿ ವುದೂ ನಿರ್ವಹಿಸು." ಆ ವ್ಯಕ್ತಿ ಹಿಂದಿರುಗಿ ಹೋಗಿ, ನಂತರ ನಮಾಝ್ ನಿರ್ವಹಿಸಿದರು
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳಿಗೂ ಪ್ರತ್ಯೇಕವಾಗಿ ವುದೂ ಮಾಡುತ್ತಿದ್ದರು
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂಗಗಳನ್ನು ಒಂದೊಂದು ಬಾರಿ ತೊಳೆಯುವ ಮೂಲಕ ವುದೂ ನಿರ್ವಹಿಸಿದರು
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಂಗಗಳನ್ನು ಎರಡೆರಡು ಬಾರಿ ತೊಳೆಯುವ ಮೂಲಕ ವುದೂ ನಿರ್ವಹಿಸಿದರು
عربي ಆಂಗ್ಲ ಉರ್ದು
ನಿಮ್ಮಲ್ಲೊಬ್ಬನಿಗೆ ತನ್ನ ಹೊಟ್ಟೆಯೊಳಗೆ ಏನೋ ಅನುಭವವಾಗಿ, ಅದರಿಂದ ಏನಾದರೂ ಹೊರ ಬಂದಿದೆಯೋ ಇಲ್ಲವೋ ಎಂದು ಸಂಶಯವಾದರೆ, ಸದ್ದು ಕೇಳುವ ತನಕ ಅಥವಾ ವಾಸನೆ ಅನುಭವವಾಗುವ ತನಕ ಅವನು ಮಸೀದಿಯಿಂದ ಹೊರಹೋಗಬಾರದು
عربي ಆಂಗ್ಲ ಉರ್ದು