ಉಪವರ್ಗಗಳು

ಹದೀಸ್‌ಗಳ ಪಟ್ಟಿ

"ಅಸರ್ ನಮಾಜನ್ನು ಬೇಗನೆ ನಿರ್ವಹಿಸಿರಿ. ಏಕೆಂದರೆ ಪ್ರವಾದಿಯವರು ಹೇಳಿದರು: "@ಯಾರು ಅಸರ್ ನಮಾಝನ್ನು ತೊರೆಯುತ್ತಾರೋ ಅವರ ಕರ್ಮಗಳು ನಿಷ್ಪಲವಾಗುತ್ತವೆ."
عربي ಆಂಗ್ಲ ಉರ್ದು
"ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ*. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ದಾಸರು ಮತ್ತು ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವುದು, ನಮಾಝ್ ಸಂಸ್ಥಾಪಿಸುವುದು, ಝಕಾತ್ ನೀಡುವುದು, ಹಜ್ಜ್ ನಿರ್ವಹಿಸುವುದು ಮತ್ತು ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಒಬ್ಬ ವ್ಯಕ್ತಿ ಮತ್ತು ಶಿರ್ಕ್ (ದೇವಸಹಭಾಗಿತ್ವ) ಹಾಗೂ ಕುಫ್ರ್ (ಸತ್ಯನಿಷೇಧ) ನ ನಡುವಿನ ಅಂತರವು ನಮಾಝನ್ನು ತೊರೆಯುವುದಾಗಿದೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಮಕ್ಕಳಿಗೆ ಏಳು ವರ್ಷ ಪ್ರಾಯವಾದಾಗ ನಮಾಝ್ ನಿರ್ವಹಿಸಲು ಆದೇಶಿಸಿರಿ, ಹತ್ತು ವರ್ಷ ಪ್ರಾಯವಾದಾಗ ಅದಕ್ಕಾಗಿ ಹೊಡೆಯಿರಿ ಮತ್ತು ಮಲಗುವ ಸ್ಥಳದಲ್ಲಿ ಅವರನ್ನು ಬೇರ್ಪಡಿಸಿರಿ."
عربي ಆಂಗ್ಲ ಉರ್ದು
ಒಮ್ಮೆ ನಾವು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಸೀದಿಯಲ್ಲಿ ಕುಳಿತಿರುವಾಗ, ಒಬ್ಬ ವ್ಯಕ್ತಿ ಒಂಟೆಯಲ್ಲಿ ಸವಾರಿ ಮಾಡುತ್ತಾ ಅಲ್ಲಿಗೆ ಬಂದರು. ಅವರು ಒಂಟೆಯನ್ನು ಮಸೀದಿಯೊಳಗೆ ಮಂಡಿಯೂರಿಸಿ ಕಟ್ಟಿಹಾಕಿದರು. ನಂತರ ನಮ್ಮೊಡನೆ ಕೇಳಿದರು: "ನಿಮ್ಮಲ್ಲಿ ಮುಹಮ್ಮದ್ ಯಾರು?" ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮ್ಮ ನಡುವೆ ಒರಗಿ ಕುಳಿತಿದ್ದರು. ನಾವು ಹೇಳಿದೆವು: "ಒರಗಿ ಕುಳಿತಿರುವ ಈ ಬೆಳ್ಳಗಿನ ವ್ಯಕ್ತಿ." ಆಗ ಆ ವ್ಯಕ್ತಿ, "ಓ ಅಬ್ದುಲ್ ಮುತ್ತಲಿಬರ ಮಗನೇ!" ಎಂದು ಕರೆದರು. ಪ್ರವಾದಿಯವರು, "ನಾನು ನಿನಗೆ ಉತ್ತರ ನೀಡಲು ಇಲ್ಲಿದ್ದೇನೆ" ಎಂದು ಉತ್ತರಿಸಿದರು. ಆಗ ಆ ವ್ಯಕ್ತಿ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನಾನು ತಮ್ಮಲ್ಲಿ ಕೆಲವು ಕಠಿಣ ಪ್ರಶ್ನೆಗಳನ್ನು ಕೇಳುತ್ತೇನೆ. ತಾವು ನನ್ನ ಮೇಲೆ ಕೋಪ ಮಾಡಿಕೊಳ್ಳಬಾರದು." ಆಗ ಪ್ರವಾದಿಯವರು ಹೇಳಿದರು: "ನಿಮಗೆ ಕೇಳಲಿರುವುದನ್ನು ಕೇಳಿ." ಆ ವ್ಯಕ್ತಿ ಕೇಳಿದರು: "ತಮ್ಮ ಮತ್ತು ತಮ್ಮ ಪೂರ್ವಜರ ಪರಿಪಾಲಕನನ್ನು (ಅಲ್ಲಾಹನನ್ನು) ಮುಂದಿಟ್ಟು ಕೇಳುತ್ತೇನೆ. ತಮ್ಮನ್ನು ಸಂಪೂರ್ಣ ಮನುಕುಲದ ಕಡೆಗೆ ಕಳುಹಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ದಿನರಾತ್ರಿಯಲ್ಲಿ ನಾವು ಐದು ವೇಳೆಯ ನಮಾಝ್‌ಗಳನ್ನು ನಿರ್ವಹಿಸಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ವರ್ಷದಲ್ಲಿ ಈ ತಿಂಗಳು ನಾವು ಉಪವಾಸ ಆಚರಿಸಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?" ಅವರು ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಅವರು ಕೇಳಿದರು: "ಅಲ್ಲಾಹನನ್ನು ಮುಂದಿಟ್ಟು ಕೇಳುತ್ತೇನೆ. ನಮ್ಮಲ್ಲಿನ ಶ್ರೀಮಂತರಿಂದ ಈ ದಾನವನ್ನು ಪಡೆದು ನಮ್ಮಲ್ಲಿರುವ ಬಡವರಿಗೆ ಹಂಚಬೇಕೆಂದು ತಮಗೆ ಆದೇಶಿಸಿದ್ದು ಅಲ್ಲಾಹನೋ?” ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅಲ್ಲಾಹನಾಣೆ! ಹೌದು." ಆಗ ಆ ವ್ಯಕ್ತಿ ಹೇಳಿದರು: "ತಾವು ತಂದ ಸಂದೇಶದಲ್ಲಿ ನಾನು ವಿಶ್ವಾಸವಿಟ್ಟಿದ್ದೇನೆ. ನಾನು ನನ್ನ ಗೋತ್ರದ ದೂತನಾಗಿ ಇಲ್ಲಿಗೆ ಬಂದಿದ್ದೇನೆ. @ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ."
عربي ಆಂಗ್ಲ ಉರ್ದು