ಉಪವರ್ಗಗಳು

ಹದೀಸ್‌ಗಳ ಪಟ್ಟಿ

ಇಬ್ನ್ ಝುಬೈರ್ ಪ್ರತಿಯೊಂದು ನಮಾಝ್‌ನಲ್ಲೂ ಸಲಾಂ ಹೇಳಿದ ನಂತರ ಇದನ್ನು ಪಠಿಸುತ್ತಿದ್ದರು: "ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್. ಲಾ ಇಲಾಹ ಇಲ್ಲಲ್ಲಾಹು, ವಲಾ ನಅ್‌ಬುದು ಇಲ್ಲಾ ಇಯ್ಯಾಹು, ಲಹು ನ್ನಿಅ್‌‌ಮತು ವಲಹುಲ್ ಫದ್ಲು, ವಲಹು ಸ್ಸನಾಉಲ್ ಹಸನು, ಲಾ ಇಲಾಹ ಇಲ್ಲಲ್ಲಾಹು ಮುಖ್ಲಿಸೀನ ಲಹು ದ್ದೀನ ವಲವ್ ಕರಿಹಲ್ ಕಾಫಿರೂನ್." (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ. ಅಲ್ಲಾಹನ ಹೊರತು ಶಕ್ತಿಯಾಗಲಿ ಸಾಮರ್ಥ್ಯವಾಗಲಿ ಇಲ್ಲ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ನಾವು ಅವನನ್ನಲ್ಲದೆ ಇನ್ನಾರನ್ನೂ ಆರಾಧಿಸುವುದಿಲ್ಲ. ಅನುಗ್ರಹವು ಅವನದ್ದು, ಔದಾರ್ಯವು ಅವನದ್ದು ಮತ್ತು ಉತ್ತಮವಾದ ಪ್ರಶಂಸೆಯು ಅವನಿಗೆ. ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಸತ್ಯನಿಷೇಧಿಗಳು ಅಸಹ್ಯಪಟ್ಟರೂ ಸಹ ನಾವು ಧರ್ಮವನ್ನು ಅವನಿಗೆ ನಿಷ್ಕಳಂಕಗೊಳಿಸುತ್ತೇವೆ). ನಂತರ ಅವರು ಹೇಳಿದರು: "@ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ನಮಾಝ್‌ಗಳ ನಂತರ ಇವುಗಳ ಮೂಲಕ ತಹ್ಲೀಲ್ (ಲಾಇಲಾಹ ಇಲ್ಲಲ್ಲಾಹ್) ಪಠಿಸುತ್ತಿದ್ದರು."
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎರಡು ಸುಜೂದ್‌ಗಳ ಮಧ್ಯೆ "ಅಲ್ಲಾಹುಮ್ಮಗ್ಫಿರ್ ಲೀ, ವರ್‌ಹಮ್‌ನೀ, ವಆಫಿನೀ, ವಹ್ದಿನೀ, ವರ್‌ಝುಕ್‌ನೀ" (ಓ ಅಲ್ಲಾಹ್! ನನ್ನನ್ನು ಕ್ಷಮಿಸು, ನನಗೆ ದಯೆತೋರು, ನನಗೆ ಸೌಖ್ಯವನ್ನು ನೀಡು, ನನಗೆ ಸನ್ಮಾರ್ಗವನ್ನು ತೋರಿಸು ಮತ್ತು ನನಗೆ ಜೀವನೋಪಾಯವನ್ನು ದಯಪಾಲಿಸು) ಎಂದು ಹೇಳುತ್ತಿದ್ದರು.
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝ್ ಮುಗಿಸಿದರೆ ಮೂರು ಬಾರಿ ಇಸ್ತಿಗ್ಫಾರ್ (ಕ್ಷಮೆಯಾಚನೆ) ಮಾಡುತ್ತಿದ್ದರು. ನಂತರ ಹೀಗೆ ಹೇಳುತ್ತಿದ್ದರು: "@ಅಲ್ಲಾಹುಮ್ಮ ಅನ್ತ ಸ್ಸಲಾಂ, ವಮಿನ್ಕ ಸ್ಸಲಾಂ, ತಬಾರಕ್ತ ದಲ್ ಜಲಾಲಿ ವಲ್ ಇಕ್ರಾಮ್*" (ಓ ಅಲ್ಲಾಹ್! ನೀನು ಅಸ್ಸಲಾಂ (ಶಾಂತಿ) ಮತ್ತು ನಿನ್ನಿಂದಲೇ ಶಾಂತಿ. ಓ ಮಹಿಮೆ ಪ್ರತಿಷ್ಠೆಗಳನ್ನು ಹೊಂದಿರುವವನೇ! ನೀನು ಅನುಗ್ರಹಪೂರ್ಣನಾಗಿರುವೆ.” (ವರದಿಗಾರರಲ್ಲಿ ಒಬ್ಬರಾದ) ವಲೀದ್ ಹೇಳುತ್ತಾರೆ: ನಾನು ಔಝಾಈರೊಡನೆ ಕೇಳಿದೆ: "ನಾನು ಕ್ಷಮೆಯಾಚನೆ ಮಾಡುವುದು ಹೇಗೆ?" ಅವರು ಉತ್ತರಿಸಿದರು: "ಅಸ್ತಗ್ಫಿರುಲ್ಲಾಹ್, ಅಸ್ತಗ್ಫಿರುಲ್ಲಾಹ್ ಎಂದು ಹೇಳುವುದು."
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರಾರ್ಥಿಸುತ್ತಾ ಹೇಳುತ್ತಿದ್ದರು: "@ಓ ಅಲ್ಲಾಹ್! ನಾನು ನಿನ್ನಲ್ಲಿ ಸಮಾಧಿಯ ಶಿಕ್ಷೆಯಿಂದ, ನರಕ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಪರೀಕ್ಷೆಯಿಂದ ರಕ್ಷೆ ಬೇಡುತ್ತೇನೆ.*" ಮುಸ್ಲಿಂರ ಇನ್ನೊಂದು ವರದಿಯಲ್ಲಿ: "ನಿಮ್ಮಲ್ಲೊಬ್ಬನು ಕೊನೆಯ ತಶಹ್ಹುದ್ ಪಠಿಸಿದ ನಂತರ ನಾಲ್ಕು ವಿಷಯಗಳಿಂದ ಅಲ್ಲಾಹನಲ್ಲಿ ರಕ್ಷೆ ಬೇಡಲಿ. ನರಕ ಶಿಕ್ಷೆಯಿಂದ, ಸಮಾಧಿಯ ಶಿಕ್ಷೆಯಿಂದ, ಜೀವನ ಮತ್ತು ಮರಣದ ಪರೀಕ್ಷೆಗಳಿಂದ ಮತ್ತು ದಜ್ಜಾಲ್‌ನ ಕೆಡುಕಿನಿಂದ."
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: @ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು.* ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."
عربي ಆಂಗ್ಲ ಉರ್ದು
. :
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
: .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಯಾರು ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಆಯತುಲ್-ಕುರ್ಸಿ ಪಠಿಸುತ್ತಾರೋ, ಅವರನ್ನು ಸಾವಿನ ಹೊರತು ಬೇರೇನೂ ಸ್ವರ್ಗ ಪ್ರವೇಶಿಸದಂತೆ ತಡೆಯುವುದಿಲ್ಲ."
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಎಲ್ಲಾ ಕಡ್ಡಾಯ ನಮಾಝ್‌ಗಳ ನಂತರ ಹೀಗೆ ಹೇಳುತ್ತಿದ್ದರು*: “ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು, ವಹುವ ಅಲಾ ಕುಲ್ಲಿ ಶೈಇನ್ ಕದೀರ್. ಅಲ್ಲಾಹುಮ್ಮ ಲಾ ಮಾನಿಅ ಲಿಮಾ ಅಅ್‌ತಯ್ತ ವಲಾ ಮುಅ್‌ತಿಯ ಲಿಮಾ ಮನಅ್‌ತ, ವಲಾ ಯನ್‌ಫಉ ದಲ್-ಜದ್ದಿ ಮಿನ್ಕಲ್ ಜದ್ದ್."
عربي ಆಂಗ್ಲ ಉರ್ದು
. : . .
عربي ಆಂಗ್ಲ ಉರ್ದು