ಹದೀಸ್‌ಗಳ ಪಟ್ಟಿ

"ಮಹಾಪಾಪಗಳಲ್ಲಿ ಅತಿದೊಡ್ಡ ಪಾಪದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?*" ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಸಹಾಬಿಗಳು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ತಿಳಿಸಿಕೊಡಿ." ಅವರು ಹೇಳಿದರು: "ಅಲ್ಲಾಹನೊಡನೆ ಸಹಭಾಗಿತ್ವ ಮಾಡುವುದು ಮತ್ತು ತಂದೆ-ತಾಯಿಗೆ ಅವಿಧೇಯತೆ ತೋರುವುದು." ಒರಗಿ ಕುಳಿತಿದ್ದ ಅವರು ನೇರವಾಗಿ ಕುಳಿತು ಹೇಳಿದರು: "ಮತ್ತು ಸುಳ್ಳು ಹೇಳಿಕೆ ನೀಡುವುದು." "ಅವರು ಮೌನ ವಹಿಸಿದ್ದರೆ ಚೆನ್ನಾಗಿತ್ತು" ಎಂದು ನಾವು ಹೇಳುವ ತನಕ ಅವರು ಪುನರುಚ್ಛರಿಸುತ್ತಲೇ ಇದ್ದರು.
عربي ಆಂಗ್ಲ ಉರ್ದು
“ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
"ವಿಧವೆ ಮತ್ತು ಬಡವರಿಗಾಗಿ ಪರಿಶ್ರಮಪಡುವವರು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುವವರಿಗೆ, ಅಥವಾ ರಾತ್ರಿಯಿಡೀ ನಮಾಝ್ ಮಾಡುವವರು ಮತ್ತು ಹಗಲಿಡೀ ಉಪವಾಸ ಆಚರಿಸುವವರಿಗೆ ಸಮವಾಗಿದ್ದಾರೆ."
عربي ಆಂಗ್ಲ ಉರ್ದು
“ಏಳು ವಿನಾಶಕಾರಿ ಪಾಪಗಳಿಂದ ದೂರವಿರಿ*” ಅವರು (ಸಂಗಡಿಗರು) ಕೇಳಿದರು: “ಓ ಅಲ್ಲಾಹನ ಸಂದೇಶವಾಹಕರೇ! ಅವು ಯಾವುವು?” ಅವರು ಹೇಳಿದರು: “ಅಲ್ಲಾಹನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡುವುದು; ಮಾಟಗಾರಿಕೆ (ವಾಮಾಚಾರ) ಮಾಡುವುದು; ಅಲ್ಲಾಹು (ಹತ್ಯೆ ಮಾಡುವುದು) ನಿಷೇಧಿಸಿದ ಮನುಷ್ಯ ಜೀವಿಯನ್ನು ನೈತಿಕ ಹಕ್ಕಿನಿಂದಲ್ಲದೆ ಹತ್ಯೆ ಮಾಡುವುದು; ಬಡ್ಡಿ ತಿನ್ನುವುದು; ಅನಾಥರ ಆಸ್ತಿಯನ್ನು ತಿನ್ನುವುದು; ಯುದ್ಧಭೂಮಿಯಿಂದ ಪಲಾಯನ ಮಾಡುವುದು; ಮತ್ತು ಪರಿಶುದ್ಧ, ಮುಗ್ಧ ಹಾಗೂ ಸತ್ಯವಿಶ್ವಾಸಿಗಳಾದ ಮಹಿಳೆಯರ ಮೇಲೆ ದುರಾರೋಪ ಹೊರಿಸುವುದು.”
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
“ನಿಮ್ಮ ಮನೆಗಳನ್ನು ಸಮಾಧಿಗಳನ್ನಾಗಿ ಮಾಡಬೇಡಿ; ನನ್ನ ಸಮಾಧಿಯನ್ನು ಉತ್ಸವ ಸ್ಥಳವಾಗಿ ಮಾಡಬೇಡಿ; ನನ್ನ ಮೇಲೆ ಸ್ವಲಾತ್ ಹೇಳಿರಿ, ನೀವು ಎಲ್ಲಿದ್ದರೂ ನಿಶ್ಚಯವಾಗಿಯೂ ನಿಮ್ಮ ಸ್ವಲಾತ್ ನನ್ನನ್ನು ತಲುಪುತ್ತದೆ.”
عربي ಆಂಗ್ಲ ಉರ್ದು
"ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಮುಹಮ್ಮದ್ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ರವರು ಅವನ ದಾಸ ಮತ್ತು ಸಂದೇಶವಾಹಕರಾಗಿದ್ದಾರೆ, ಯೇಸು (ಅವರ ಮೇಲೆ ಶಾಂತಿಯಿರಲಿ) ಅಲ್ಲಾಹನ ದಾಸರು, ಸಂದೇಶವಾಹಕರು ಮತ್ತು ಅಲ್ಲಾಹು ಮರ್ಯಮರಿಗೆ ಹಾಕಿಕೊಟ್ಟ ಅವನ ವಚನ ಮತ್ತು ಅವನ ವತಿಯ ಆತ್ಮವಾಗಿದ್ದಾರೆ, ಸ್ವರ್ಗ ಸತ್ಯವಾಗಿದೆ, ನರಕ ಸತ್ಯವಾಗಿದೆ ಎಂದು ಯಾರಾದರೂ ಸಾಕ್ಷ್ಯ ವಹಿಸಿದರೆ, @ಅವರ ಕರ್ಮಗಳು ಎಷ್ಟೇ ಕಡಿಮೆಯಾಗಿದ್ದರೂ ಸಹ ಅಲ್ಲಾಹು ಅವರನ್ನು ಸ್ವರ್ಗಕ್ಕೆ ಪ್ರವೇಶ ಮಾಡಿಸುವನು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ತನ್ನ ಎರಡು ದವಡೆಗಳ ನಡುವೆ ಮತ್ತು ತನ್ನ ಎರಡು ಕಾಲುಗಳ ನಡುವೆ ಇರುವುದನ್ನು ನಿಯಂತ್ರಿಸುತ್ತೇನೆಂದು ಯಾರು ನನಗೆ ಖಾತ್ರಿ ನೀಡುತ್ತಾನೋ, ಅವನಿಗೆ ನಾನು ಸ್ವರ್ಗದ ಖಾತ್ರಿ ನೀಡುತ್ತೇನೆ."
عربي ಆಂಗ್ಲ ಉರ್ದು
“ಲಾಇಲಾಹ ಇಲ್ಲಲ್ಲಾಹ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾಗಿ ಅನ್ಯರಿಲ್ಲ) ಅತಿಶ್ರೇಷ್ಠ ಸ್ಮರಣೆಯಾಗಿದೆ ಮತ್ತು ಅಲ್-ಹಮ್ದುಲಿಲ್ಲಾಹ್ (ಅಲ್ಲಾಹನಿಗೆ ಸರ್ವಸ್ತುತಿ) ಅತಿಶ್ರೇಷ್ಠ ಪ್ರಾರ್ಥನೆಯಾಗಿದೆ.”
عربي ಆಂಗ್ಲ ಉರ್ದು
“ನಿಮ್ಮಲ್ಲೊಬ್ಬನಿಗೆ ಸ್ವರ್ಗವು ಅವನ ಚಪ್ಪಲಿಯ ತೊಗಲಪಟ್ಟಿಗಿಂತಲೂ ಹತ್ತಿರದಲ್ಲಿದೆ; ಹಾಗೆಯೇ ನರಕವೂ ಕೂಡ.”
عربي ಆಂಗ್ಲ ಉರ್ದು
“ಐದು ವೇಳೆಯ ನಮಾಝ್‌ಗಳು, ಒಂದು ಜುಮುಅದಿಂದ ಇನ್ನೊಂದು ಜುಮುಅ, ಒಂದು ರಮದಾನ್‌ನಿಂದ ಇನ್ನೊಂದು ರಮದಾನ್, ಅವುಗಳ ನಡುವಿನ ಪಾಪಗಳಿಗೆ ಪರಿಹಾರವಾಗಿದೆ; ಮಹಾಪಾಪಗಳಿಂದ ದೂರವಿದ್ದರೆ.”
عربي ಆಂಗ್ಲ ಉರ್ದು
“ಒಬ್ಬ ಮುಸಲ್ಮಾನನಿಗೆ ಆಯಾಸ, ಅನಾರೋಗ್ಯ, ಆತಂಕ, ದುಃಖ, ಹಾನಿ, ಸಂಕಟ ಮುಂತಾದ ಯಾವುದೇ ಸಂಭವಿಸಿದರೂ, ಎಲ್ಲಿಯವರೆಗೆಂದರೆ ಒಂದು ಸಣ್ಣ ಮುಳ್ಳು ಚುಚ್ಚಿದರೂ ಸಹ, ಅದಕ್ಕೆ ಪರಿಹಾರವಾಗಿ ಅಲ್ಲಾಹು ಅವನ ಕೆಲವು ಪಾಪಗಳನ್ನು ಅಳಿಸದೆ ಇರುವುದಿಲ್ಲ.”
عربي ಆಂಗ್ಲ ಉರ್ದು
“ನರಕವನ್ನು ಮೋಹಗಳಿಂದ ಮರೆಮಾಡಲಾಗಿದೆ ಮತ್ತು ಸ್ವರ್ಗವನ್ನು ಸಂಕಷ್ಟಗಳಿಂದ ಮರೆಮಾಡಲಾಗಿದೆ.”
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
“ಸೌಮ್ಯವಾಗಿ ಮಾರಾಟ ಮಾಡುವ, ಖರೀದಿಸುವ ಮತ್ತು ಸಾಲ ಮರುಪಾವತಿಯನ್ನು ಕೇಳುವ ವ್ಯಕ್ತಿಗೆ ಅಲ್ಲಾಹು ದಯೆ ತೋರಲಿ.”
عربي ಆಂಗ್ಲ ಉರ್ದು
. : .
عربي ಆಂಗ್ಲ ಉರ್ದು
"ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ*." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಕೊಲೆಗಾರನು ನರಕಕ್ಕೆ ಹೋಗುವುದು ಸರಿ. ಆದರೆ ಕೊಲೆಯಾದವನು ಏಕೆ ನರಕಕ್ಕೆ ಹೋಗಬೇಕು?" ಅವರು ಉತ್ತರಿಸಿದರು: "ಏಕೆಂದರೆ ಅವನಿಗೆ ತನ್ನ ಎದುರಾಳಿಯನ್ನು ಕೊಲ್ಲಬೇಕೆಂಬ ಅತೀವ ಉತ್ಸಾಹವಿತ್ತು."
عربي ಆಂಗ್ಲ ಉರ್ದು
"ಹಲಾಲ್ ಅತ್ಯಂತ ಸ್ಪಷ್ಟವಾಗಿದೆ ಮತ್ತು ಹರಾಮ್ ಕೂಡ ಅತ್ಯಂತ ಸ್ಪಷ್ಟವಾಗಿದೆ*. ಇವೆರಡರ ಮಧ್ಯೆ ಸಂಶಯಾಸ್ಪದ ವಿಷಯಗಳಿವೆ. ಜನರಲ್ಲಿ ಹೆಚ್ಚಿನವರಿಗೂ ಅವುಗಳ ಬಗ್ಗೆ ಜ್ಞಾನವಿಲ್ಲ. ಯಾರು ಈ ಸಂಶಯಾಸ್ಪದ ವಿಷಯಗಳಿಂದ ದೂರವಿರುತ್ತಾನೋ, ಅವನು ತನ್ನ ಧರ್ಮ ಮತ್ತು ಘನತೆಯನ್ನು ಕಾಪಾಡಿಕೊಂಡನು. ಯಾರು ಈ ಸಂಶಯಾಸ್ಪದ ವಿಷಯಗಳಲ್ಲಿ ಒಳಪಡುತ್ತಾನೋ ಅವನು ಹರಾಮ್‌ನಲ್ಲಿ ಒಳಪಡುತ್ತಾನೆ. ಅವನ ಸ್ಥಿತಿಯು (ಪ್ರವೇಶಾನುಮತಿಯಿಲ್ಲದ) ಹುಲ್ಲುಗಾವಲಿನ ಅಂಚಿನಲ್ಲಿ ತನ್ನ ಕುರಿಮಂದೆಯನ್ನು ಮೇಯಿಸುವ ಒಬ್ಬ ಕುರಿಗಾಹಿಯಂತೆ. ಅವನ ಕುರಿಗಳು ಹುಲ್ಲುಗಾವಲಿನೊಳಗೆ ನುಗ್ಗಿ ಮೇಯುವ ಸಾಧ್ಯತೆಯಿದೆ. ಎಚ್ಚರಾ! ಪ್ರತಿಯೊಬ್ಬ ರಾಜನಿಗೂ ಒಂದು (ನಿಷೇಧಿತ) ವಲಯವಿದೆ. ಎಚ್ಚರಾ! ಅಲ್ಲಾಹು ನಿಷೇಧಿಸಿದ ಕಾರ್ಯಗಳು ಅವನ (ನಿಷೇಧಿತ) ವಲಯವಾಗಿದೆ. ಎಚ್ಚರಾ! ದೇಹದಲ್ಲಿ ಒಂದು ಮಾಂಸದ ತುಂಡಿದೆ. ಅದು ಸರಿಯಾದರೆ ಸಂಪೂರ್ಣ ದೇಹವು ಸರಿಯಾಗುತ್ತದೆ. ಅದು ಕೆಟ್ಟರೆ ಸಂಪೂರ್ಣ ದೇಹವು ಕೆಡುತ್ತದೆ. ಎಚ್ಚರಾ! ಅದು ಹೃದಯವಾಗಿದೆ."
عربي ಆಂಗ್ಲ ಉರ್ದು
"ನಿಶ್ಚಯವಾಗಿಯೂ ಅಲ್ಲಾಹು ಪ್ರತಿಯೊಂದು ವಿಷಯದಲ್ಲೂ ಉತ್ತಮವಾಗಿ ವರ್ತಿಸುವುದನ್ನು ಕಡ್ಡಾಯಗೊಳಿಸಿದ್ದಾನೆ*. ಆದ್ದರಿಂದ ನೀವು (ಪ್ರತೀಕಾರಕ್ಕಾಗಿ) ಕೊಲ್ಲುವಾಗ ಉತ್ತಮ ರೀತಿಯಲ್ಲಿ ಕೊಲ್ಲಿರಿ. ನೀವು (ಪ್ರಾಣಿಗಳನ್ನು ಮಾಂಸಕ್ಕಾಗಿ) ಕೊಯ್ಯುವಾಗ ಉತ್ತಮ ರೀತಿಯಲ್ಲಿ ಕೊಯ್ಯಿರಿ. ನಿಮ್ಮಲ್ಲೊಬ್ಬನು ಕೊಯ್ಯುವಾಗ ಚೂರಿಯನ್ನು ಹರಿತಗೊಳಿಸಲಿ ಮತ್ತು ಪ್ರಾಣಿಗೆ ನಿರಾಳತೆಯನ್ನು ನೀಡಲಿ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
ಒಬ್ಬ ವ್ಯಕ್ತಿ ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನನಗೆ ಹಿತವಚನ ನೀಡಿರಿ." ಅವರು ಹೇಳಿದರು: "@ಕೋಪಗೊಳ್ಳಬೇಡಿ*." ಆ ವ್ಯಕ್ತಿ ಹಲವು ಬಾರಿ ಅದೇ ಪ್ರಶ್ನೆ ಕೇಳಿದಾಗಲೂ ಪ್ರವಾದಿಯವರು ಹೇಳಿದರು: "ಕೋಪಗೊಳ್ಳಬೇಡಿ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಸೌಮ್ಯತೆಯಿಂದ ವಂಚಿತನಾದವನು ಒಳಿತಿನಿಂದಲೂ ವಂಚಿತನಾಗಿದ್ದಾನೆ."
عربي ಆಂಗ್ಲ ಉರ್ದು
: . :
عربي ಆಂಗ್ಲ ಉರ್ದು
“ನಿಶ್ಚಯವಾಗಿಯೂ ಅಲ್ಲಾಹನ ಆಸ್ತಿಯಲ್ಲಿ ಲಂಗು-ಲಗಾಮಿಲ್ಲದೆ ವ್ಯವಹರಿಸುವ ಜನರು ಯಾರೋ ಅವರಿಗೆ ಪುನರುತ್ಥಾನ ದಿನದಂದು ನರಕಾಗ್ನಿಯಿದೆ.”
عربي ಆಂಗ್ಲ ಉರ್ದು
“ಗುಮಾನಿಯ ಬಗ್ಗೆ ಎಚ್ಚರದಿಂದಿರಿ! ಏಕೆಂದರೆ ಗುಮಾನಿಯು ಅತಿದೊಡ್ಡ ಸುಳ್ಳು ಮಾತಾಗಿದೆ.* ನೀವು ಒಬ್ಬರನ್ನೊಬ್ಬರು ಬೇಹುಗಾರಿಕೆ ಮಾಡಬೇಡಿ, ಒಬ್ಬರು ಇನ್ನೊಬ್ಬರ ಖಾಸಗಿ ವಿಚಾರಗಳನ್ನು ಕೆದಕಬೇಡಿ, ಒಬ್ಬರನ್ನೊಬ್ಬರು ಅಸೂಯೆ ಪಡಬೇಡಿ, ಒಬ್ಬರಿಗೊಬ್ಬರು ಮುಖ ತಿರುಗಿಸಬೇಡಿ, ಒಬ್ಬರನ್ನೊಬ್ಬರು ದ್ವೇಷಿಸಬೇಡಿ. ಓ ಅಲ್ಲಾಹನ ದಾಸರೇ, ನೀವು ಸಹೋದರರಾಗಿರಿ."
عربي ಆಂಗ್ಲ ಉರ್ದು
"ಎಲ್ಲಾ ಒಳ್ಳೆಯ ಕಾರ್ಯಗಳು ದಾನವಾಗಿವೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಹೇಳಿದರು: "ನನ್ನ ಒಂಟೆ ಸುಸ್ತಾಗಿಬಿಟ್ಟಿದೆ. ಆದ್ದರಿಂದ ನನಗೆ ಸವಾರಿ ಮಾಡುವ ಒಂದು ಒಂಟೆಯನ್ನು ಕೊಡಿ." ಅವರು ಹೇಳಿದರು: "ನನ್ನ ಬಳಿ ಒಂಟೆಯಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವನಿಗೆ ಒಂಟೆ ಕೊಡುವ ವ್ಯಕ್ತಿಯನ್ನು ನಾನು ತೋರಿಸುತ್ತೇನೆ." ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಯಾರು ಒಳಿತನ್ನು ತೋರಿಸಿಕೊಡುತ್ತಾರೋ ಅವನಿಗೆ ಆ ಒಳಿತು ಮಾಡಿದ ವ್ಯಕ್ತಿಗೆ ದೊರಕುವಷ್ಟೇ ಪ್ರತಿಫಲ ದೊರಕುತ್ತದೆ*."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
“ಕುಟುಂಬ ಸಂಬಂಧ ಕಡಿಯುವವನು ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
عربي ಆಂಗ್ಲ ಉರ್ದು
“ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
عربي ಆಂಗ್ಲ ಉರ್ದು
“ಯಾರು ತನ್ನ ಜೀವನೋಪಾಯವು ವಿಶಾಲವಾಗಲು ಮತ್ತು ತನ್ನ ಆಯುಷ್ಯವು ದೀರ್ಘವಾಗಲು ಬಯಸುತ್ತಾನೋ ಅವನು ಕುಟುಂಬ ಸಂಬಂಧಗಳನ್ನು ಜೋಡಿಸಲಿ.”
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
“ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ಒಳ್ಳೆಯ ಮಾತನ್ನೇ ಆಡಲಿ ಅಥವಾ ಮೌನವಾಗಿರಲಿ*. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ನೆರೆಮನೆಯವನನ್ನು ಗೌರವಿಸಲಿ. ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವವನು ತನ್ನ ಅತಿಥಿಗಳನ್ನು ಗೌರವಿಸಲಿ.”
عربي ಆಂಗ್ಲ ಉರ್ದು
“ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”
عربي ಆಂಗ್ಲ ಉರ್ದು
"ಅಲ್ಲಾಹು ಜನರ ಪೈಕಿ ಅತಿಯಾಗಿ ದ್ವೇಷಿಸುವುದು ಮಹಾ ಜಗಳಗಂಟನನ್ನಾಗಿದೆ."
عربي ಆಂಗ್ಲ ಉರ್ದು
: .
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
ಒಬ್ಬ ವ್ಯಕ್ತಿ ತನ್ನ ಸಹೋದರನಿಗೆ ಸಂಕೋಚ ಪಡಬಾರದೆಂದು ಬುದ್ಧಿ ಹೇಳುವುದನ್ನು ಕೇಳಿದಾಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಸಂಕೋಚವು ಸತ್ಯವಿಶ್ವಾಸದ ಒಂದು ಭಾಗವಾಗಿದೆ*."
عربي ಆಂಗ್ಲ ಉರ್ದು
"ಪ್ರಾರ್ಥನೆಯೇ ಆರಾಧನೆ*." ನಂತರ ಅವರು ಪಠಿಸಿದರು: “ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದನು: ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ, ನಾನು ನಿಮಗೆ ಉತ್ತರ ನೀಡುತ್ತೇನೆ. ನನ್ನನ್ನು ಆರಾಧಿಸಲು ಯಾರು ಅಹಂಕಾರ ತೋರುತ್ತಾರೋ ಅವರು ನಿಂದನೀಯ ಸ್ಥಿತಿಯಲ್ಲಿ ನರಕವನ್ನು ಪ್ರವೇಶಿಸುವರು.”
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
“ನಾಲಗೆಯಲ್ಲಿ ಹಗುರವಾದ, ತಕ್ಕಡಿಯಲ್ಲಿ ಭಾರವಾದ ಮತ್ತು ಪರಮ ದಯಾಮಯನಿಗೆ (ಅಲ್ಲಾಹನಿಗೆ) ಇಷ್ಟವಾದ ಎರಡು ವಚನಗಳು*: ಸುಬ್‌ಹಾನಲ್ಲಾಹಿಲ್ ಅಝೀಮ್ ಮತ್ತು ಸುಬ್‌ಹಾನಲ್ಲಾಹಿ ವಬಿಹಮ್ದಿಹೀ.”
عربي ಆಂಗ್ಲ ಉರ್ದು
“ಸರ್ವಶಕ್ತನಾದ ಅಲ್ಲಾಹನ ದೃಷ್ಟಿಯಲ್ಲಿ ಪ್ರಾರ್ಥನೆಗಿಂತಲೂ ಹೆಚ್ಚು ಗೌರವಾರ್ಹವಾದ ಬೇರೆ ವಿಷಯವಿಲ್ಲ.”
عربي ಆಂಗ್ಲ ಉರ್ದು
"ಯಾರು ತನ್ನ ಸಹೋದರನ ಘನತೆಯನ್ನು ಕಾಪಾಡುತ್ತಾನೋ, ಅವನ ಮುಖವನ್ನು ಪುನರುತ್ಥಾನ ದಿನದಂದು ಅಲ್ಲಾಹು ನರಕದಿಂದ ಕಾಪಾಡುತ್ತಾನೆ."
عربي ಆಂಗ್ಲ ಉರ್ದು
"ಯಾರು ದಿನಕ್ಕೆ ನೂರು ಬಾರಿ ‘ಸುಬ್‌ಹಾನಲ್ಲಾಹಿ ವಬಿಹಮ್ದಿಹೀ’ ಎಂದು ಹೇಳುತ್ತಾರೋ, ಅವರ ಪಾಪಗಳು ಸಮುದ್ರದ ನೊರೆಯಷ್ಟೇ ಇದ್ದರೂ ಸಹ ಅಳಿಸಿಹೋಗುತ್ತವೆ."
عربي ಆಂಗ್ಲ ಉರ್ದು
"ಯಾರು ಹತ್ತು ಬಾರಿ — ಲಾ ಇಲಾಹ ಇಲ್ಲಲ್ಲಾಹು ವಹ್ದಹೂ ಲಾ ಶರೀಕ ಲಹೂ, ಲಹುಲ್ ಮುಲ್ಕು ವಲಹುಲ್ ಹಮ್ದು ವಹುವ ಅಲಾ ಕುಲ್ಲಿ ಶೈಇನ್ ಕದೀರ್ (ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ, ಅವನು ಏಕೈಕನು ಮತ್ತು ಸಹಭಾಗಿಗಳಿಲ್ಲದವನು, ಆಧಿಪತ್ಯವು ಅವನದ್ದು ಮತ್ತು ಸ್ತುತಿಯು ಅವನಿಗೆ, ಅವನು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ) ಎಂದು ಹೇಳುತ್ತಾನೋ*, ಅವನು ಇಸ್ಮಾಯೀಲರ ಸಂತಾನದಲ್ಲಿ ಸೇರಿದ ನಾಲ್ಕು ಗುಲಾಮರನ್ನು ವಿಮೋಚನೆಗೊಳಿಸಿದವನಂತೆ ಆಗುತ್ತಾನೆ."
عربي ಆಂಗ್ಲ ಉರ್ದು
"ಅಲ್ಲಾಹು ಯಾರಿಗೆ ಒಳಿತನ್ನು ಬಯಸುತ್ತಾನೋ ಅವನಿಗೆ ಧಾರ್ಮಿಕ ವಿಷಯಗಳಲ್ಲಿ ಪಾಂಡಿತ್ಯವನ್ನು ನೀಡುತ್ತಾನೆ*. ನಾನು ಕೇವಲ ಹಂಚುವವನು ಮಾತ್ರ. ಕೊಡುವವನು ಅಲ್ಲಾಹು. ಈ ಸಮುದಾಯವು ಅಲ್ಲಾಹನ ನಿಯಮಗಳನ್ನು ಅನುಸರಿಸುತ್ತಲೇ ಇರುವುದು, ಅವರನ್ನು ವಿರೋಧಿಸುವವರು ಅವರಿಗೆ ಯಾವುದೇ ತೊಂದರೆ ಮಾಡಲಾರರು, ಅಲ್ಲಾಹನ ಆಜ್ಞೆ ಜಾರಿಗೆ ಬರುವ ತನಕ."
عربي ಆಂಗ್ಲ ಉರ್ದು
"ನಿಶ್ಚಯವಾಗಿಯೂ ಅಲ್ಲಾಹು ದೇವಭಯವುಳ್ಳ, ಸ್ವಾವಲಂಬಿಯಾದ ಮತ್ತು ಗಮನ ಸೆಳೆಯಲು ಬಯಸದ ದಾಸನನ್ನು ಪ್ರೀತಿಸುತ್ತಾನೆ."
عربي ಆಂಗ್ಲ ಉರ್ದು
"ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸುಗಂಧ ದ್ರವ್ಯದ ಉಡುಗೊರೆಯನ್ನು ನಿರಾಕರಿಸುತ್ತಿರಲಿಲ್ಲ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ನಿಶ್ಚಯವಾಗಿಯೂ ಯಾವ ವಿಷಯದಲ್ಲಿ ಮೃದುತ್ವವಿರುತ್ತದೋ ಅದು ಅದನ್ನು ಅಂದಗೊಳಿಸುತ್ತದೆ; ಮತ್ತು ಯಾವ ವಿಷಯದಿಂದ ಅದನ್ನು ತೆಗೆಯಲಾಗುತ್ತದೋ ಅದು ಅದನ್ನು ಅಂದಗೆಡಿಸುತ್ತದೆ."
عربي ಆಂಗ್ಲ ಉರ್ದು
"ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನು ಅಲ್ಲಾಹು ಪ್ರೀತಿಸುತ್ತಾನೆ."
عربي ಆಂಗ್ಲ ಉರ್ದು
"ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್ನು ಪಡೆಯುತ್ತಾನೆ."
عربي ಆಂಗ್ಲ ಉರ್ದು
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಶ್ಲೀಲವಾಗಿರಲಿಲ್ಲ ಮತ್ತು ಅಶ್ಲೀಲ ಭಾಷೆಯನ್ನು ಬಳಸುತ್ತಿರಲಿಲ್ಲ. ಅವರು ಹೇಳುತ್ತಿದ್ದರು: "@ನಿಶ್ಚಯವಾಗಿಯೂ ನಿಮ್ಮಲ್ಲಿ ಅತ್ಯುತ್ತಮರು ಉತ್ತಮ ನಡವಳಿಕೆಯನ್ನು ಹೊಂದಿರುವವರು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಮಹಿಳೆಯರಿಗಿಂತಲೂ ಹೆಚ್ಚು ಹಾನಿ ಮಾಡುವ ಒಂದು ಪರೀಕ್ಷೆಯನ್ನು ನಾನು ನನ್ನ ನಂತರ ಪುರುಷರಿಗೆ ಬಿಟ್ಟು ಹೋಗುವುದಿಲ್ಲ."
عربي ಆಂಗ್ಲ ಉರ್ದು
"ಸುಲಭಗೊಳಿಸಿರಿ, ಕಷ್ಟಗೊಳಿಸಬೇಡಿ; ಸಿಹಿಸುದ್ದಿ ತಿಳಿಸಿರಿ, ಗಾಬರಿಗೊಳಿಸಬೇಡಿ."
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
"ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."
عربي ಆಂಗ್ಲ ಉರ್ದು
"ಸುಬ್‌ಹಾನಲ್ಲಾಹಿ, ವಲ್‌ಹಂದುಲಿಲ್ಲಾಹಿ, ವಲಾಇಲಾಹ ಇಲ್ಲಲ್ಲಾಹು ವಲ್ಲಾಹು ಅಕ್ಬರ್ ಎಂದು ಹೇಳುವುದು ಸೂರ್ಯ ಬೆಳಗಿದ ಎಲ್ಲ ವಸ್ತುಗಳಿಗಿಂತಲೂ ನನಗೆ ಹೆಚ್ಚು ಇಷ್ಟವಾಗಿದೆ."
عربي ಆಂಗ್ಲ ಉರ್ದು
"ಯಾರು ರಾತ್ರಿಯಲ್ಲಿ ಸೂರ ಬಕರದ ಕೊನೆಯ ಎರಡು ಶ್ಲೋಕಗಳನ್ನು ಪಠಿಸುತ್ತಾರೋ, ಅವರಿಗೆ ಅವೆರಡು ಸಾಕು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ತಲೆಯ ಒಂದು ಭಾಗವನ್ನು ಬೋಳಿಸಿ ಇನ್ನೊಂದು ಭಾಗವನ್ನು ಬೋಳಿಸದಿರುವುದನ್ನು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ವಿರೋಧಿಸಿದ್ದಾರೆ."
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
ಒಮ್ಮೆ ಮುಆದ್ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹಿಂಭಾಗದಲ್ಲಿ ಕುಳಿತು ಪ್ರಯಾಣ ಮಾಡುತ್ತಿದ್ದಾಗ ಅವರು ಕರೆದರು: "ಓ ಮುಆದ್ ಬಿನ್ ಜಬಲ್!" ಮುಆದ್ ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಿಮ್ಮ ಸೇವೆ ಮಾಡಲು ನಾನಿಲ್ಲಿದ್ದೇನೆ." ಅವರು ಕರೆದರು: "ಓ ಮುಆದ್!" ಮುಆದ್ ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ನಿಮ್ಮ ಸೇವೆ ಮಾಡಲು ನಾನಿಲ್ಲಿದ್ದೇನೆ." ಹೀಗೆ ಅವರು ಮೂರು ಬಾರಿ ಕರೆದರು. ನಂತರ ಹೇಳಿದರು: "@ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರಾಗಿದ್ದಾರೆ ಎಂದು ಯಾರು ತನ್ನ ಹೃದಯದಿಂದ ಪ್ರಾಮಾಣಿಕವಾಗಿ ಸಾಕ್ಷಿ ವಹಿಸುತ್ತಾನೋ ಅವನನ್ನು ಅಲ್ಲಾಹು ನರಕಾಗ್ನಿಗೆ ನಿಷಿದ್ಧಗೊಳಿಸದೇ ಇರಲಾರ.*" ಮುಆದ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಜನರಿಗೆ ಸಂತೋಷವಾಗುವ ಈ ಸುದ್ದಿಯನ್ನು ನಾನು ಅವರಿಗೆ ತಿಳಿಸಲೇ?" ಅವರು ಹೇಳಿದರು: "ಬೇಡ, ಅವರು ಅದರ ಮೇಲೆ ಅವಲಂಬಿತರಾಗುವರು." (ಜ್ಞಾನವನ್ನು ಬಚ್ಚಿಟ್ಟ) ಪಾಪಕ್ಕೆ ಗುರಿಯಾಗದಿರಲು ಮುಆದ್ ಮರಣದ ಸಮಯದಲ್ಲಿ ಇದನ್ನು ಜನರಿಗೆ ತಿಳಿಸಿದರು.
عربي ಆಂಗ್ಲ ಉರ್ದು
ನಾನು ಮಗುವಾಗಿದ್ದಾಗ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆರೈಕೆಯಲ್ಲಿದ್ದೆ. ನನ್ನ ಕೈ, ಬಟ್ಟಲಲ್ಲಿ ಅತ್ತಿತ್ತ ಹರಿದಾಡುತ್ತಿತ್ತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಮಗೂ, ಅಲ್ಲಾಹನ ಹೆಸರನ್ನು ಉಚ್ಛರಿಸು, ನಿನ್ನ ಬಲಗೈಯಿಂದ ಸೇವಿಸು, ಮತ್ತು ನಿನ್ನ ಹತ್ತಿರದಲ್ಲಿರುವುದನ್ನೇ ಸೇವಿಸು.*" ನಂತರ ಇದೇ ನನ್ನ ಆಹಾರ ಸೇವನೆಯ ವಿಧಾನವಾಯಿತು.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! (ಸ್ವರ್ಗ ಮತ್ತು ನರಕವನ್ನು) ಕಡ್ಡಾಯಗೊಳಿಸುವ ಎರಡು ವಿಷಯಗಳು ಯಾವುವು?" ಅವರು ಉತ್ತರಿಸಿದರು: "@ಅಲ್ಲಾಹನೊಡನೆ ಸಹಭಾಗಿತ್ವ (ಶಿರ್ಕ್) ಮಾಡದ ಸ್ಥಿತಿಯಲ್ಲಿ ನಿಧನರಾಗುವವರು ಸ್ವರ್ಗವನ್ನು ಪ್ರವೇಶಿಸುತ್ತಾರೆ; ಮತ್ತು ಅಲ್ಲಾಹನೊಡನೆ ಸಹಭಾಗಿತ್ವ ಮಾಡಿದ ಸ್ಥಿತಿಯಲ್ಲಿ ನಿಧನರಾಗುವವರು ನರಕವನ್ನು ಪ್ರವೇಶಿಸುತ್ತಾರೆ."
عربي ಆಂಗ್ಲ ಉರ್ದು
. :
عربي ಆಂಗ್ಲ ಉರ್ದು
"ನಿಶ್ಚಯವಾಗಿಯೂ ಪುನರುತ್ಥಾನ ದಿನ ಅಲ್ಲಾಹು ಎಲ್ಲಾ ಸೃಷ್ಟಿಗಳ ಮುಂಭಾಗದಲ್ಲಿ ನನ್ನ ಸಮುದಾಯದಲ್ಲಿ ಸೇರಿದ ಒಬ್ಬ ವ್ಯಕ್ತಿಯನ್ನು ಪ್ರತ್ಯೇಕವಾಗಿ ಕರೆಯುವನು*. ನಂತರ ಅವನ ಮುಂದೆ ತೊಂಬತ್ತೊಂಬತ್ತು ಸುರುಳಿಗಳನ್ನು ಇಡುವನು. ಪ್ರತಿಯೊಂದು ಸುರುಳಿಯೂ ದೃಷ್ಟಿ ತಲುಪುವಷ್ಟು ದೂರದವರೆಗೆ ಹರಡಿಕೊಂಡಿರುವುದು. ನಂತರ ಅವನು (ಅಲ್ಲಾಹು) ಕೇಳುವನು: "ಇವುಗಳಲ್ಲಿ ಯಾವುದನ್ನಾದರೂ ನೀನು ನಿರಾಕರಿಸುವೆಯಾ? ಕರ್ಮಗಳನ್ನು ದಾಖಲಿಸುವ ನನ್ನ ದೂತರು ನಿನಗೇನಾದರೂ ಅನ್ಯಾಯ ಮಾಡಿದ್ದಾರೆಯೇ?" ಆಗ ಅವನು ಹೇಳುವನು: "ಓ ನನ್ನ ಪರಿಪಾಲಕನೇ! ಖಂಡಿತ ಇಲ್ಲ." ಆಗ ಅಲ್ಲಾಹು ಕೇಳುವನು: "ನಿನಗೆ ಹೇಳಲು ಏನಾದರೂ ನೆಪವಿದೆಯೇ?" ಆಗ ಅವನು ಹೇಳುವನು: "ಓ ನನ್ನ ಪರಿಪಾಲಕನೇ! ಖಂಡಿತ ಇಲ್ಲ." ಆಗ ಅಲ್ಲಾಹು ಕೇಳುವನು: "ನಿಶ್ಚಯವಾಗಿಯೂ ನಮ್ಮ ಬಳಿ ನಿನಗೆ ಒಂದು ಒಳಿತಿದೆ. (ಹೆದರಬೇಡ), ಇಂದು ನಿನಗೆ ಯಾವುದೇ ಅನ್ಯಾಯವಾಗುವುದಿಲ್ಲ." ನಂತರ ಅವನು, "ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ನಾನು ಸಾಕ್ಷಿ ವಹಿಸುತ್ತೇನೆ, ಮತ್ತು ಮುಹಮ್ಮದ್ ಅವನ ದಾಸರು ಮತ್ತು ಸಂದೇಶವಾಹಕರೆಂದು ನಾನು ಸಾಕ್ಷಿ ವಹಿಸುತ್ತೇನೆ" ಎಂದು ಬರೆಯಲಾದ ಒಂದು ಚೀಟಿಯನ್ನು ಹೊರತೆಗೆಯುವನು. ನಂತರ ಅವನು ಹೇಳುವನು: "ನಿನ್ನ ತಕ್ಕಡಿಯನ್ನು ಇಲ್ಲಿಗೆ ತಾ." ಆ ವ್ಯಕ್ತಿ ಕೇಳುವನು: "ಓ ನನ್ನ ಪರಿಪಾಲಕನೇ! ಈ ಸುರುಳಿಗಳಿಗೆ ಹೋಲಿಸಿದರೆ ಈ ಚೀಟಿ ಎಷ್ಟು ತೂಗಬಹುದು?" ಆಗ ಅಲ್ಲಾಹು ಹೇಳುವನು: "(ಹೆದರಬೇಡ), ನಿನಗೆ ಯಾವುದೇ ಅನ್ಯಾಯವಾಗುವುದಿಲ್ಲ." ಆ ಸುರಳಿಗಳನ್ನು ತಕ್ಕಡಿಯ ಒಂದು ತಟ್ಟೆಯಲ್ಲಿ ಮತ್ತು ಈ ಚೀಟಿಯನ್ನು ಇನ್ನೊಂದು ತಟ್ಟೆಯಲ್ಲಿ ಇಡಲಾಗುವುದು. ಆಗ ಸುರುಳಿಗಳು ಹಗುರವಾಗಿ ಚೀಟಿ ಭಾರವಾಗುವುದು. ಅಲ್ಲಾಹನ ಹೆಸರಿಗಿಂತಲೂ ಹೆಚ್ಚು ಭಾರವಾದದ್ದು ಯಾವುದೂ ಇಲ್ಲ."
عربي ಆಂಗ್ಲ ಉರ್ದು
"ಅಲ್ಲಾಹು ಸ್ವರ್ಗ ಮತ್ತು ನರಕಗಳನ್ನು ಸೃಷ್ಟಿಸಿದಾಗ ಜಿಬ್ರೀಲರನ್ನು (ಅವರ ಮೇಲೆ ಶಾಂತಿಯಿರಲಿ) ಸ್ವರ್ಗಕ್ಕೆ ಕಳುಹಿಸಿ ಹೇಳಿದನು*: "ಸ್ವರ್ಗವನ್ನು ಮತ್ತು ನಾನು ಅಲ್ಲಿ ಸ್ವರ್ಗವಾಸಿಗಳಿಗೆ ಸಿದ್ಧಗೊಳಿಸಿದ್ದನ್ನು ನೋಡಿ ಬಾ." ಜಿಬ್ರೀಲರು ನೋಡಿ ಮರಳಿ ಬಂದು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಅದರ ಬಗ್ಗೆ ಕೇಳಿದ ಯಾವುದೇ ವ್ಯಕ್ತಿಯೂ ಅದನ್ನು ಪ್ರವೇಶಿಸದೇ ಇರಲಾರ." ನಂತರ ಅಲ್ಲಾಹನ ಆಜ್ಞೆಯ ಮೇರೆಗೆ ಅದನ್ನು ಕಷ್ಟಗಳಿಂದ ಹೊದಿಯಲಾಯಿತು. ನಂತರ ಅಲ್ಲಾಹು ಹೇಳಿದನು: "ಸ್ವರ್ಗಕ್ಕೆ ಹೋಗಿ ನಾನು ಅಲ್ಲಿ ಸ್ವರ್ಗವಾಸಿಗಳಿಗೆ ಸಿದ್ಧಗೊಳಿಸಿದ್ದನ್ನು ನೋಡಿ ಬಾ." ಅವರು ಅದನ್ನು ನೋಡಿದಾಗ, ಅದನ್ನು ಕಷ್ಟಗಳಿಂದ ಹೊದಿಯಲಾಗಿತ್ತು. ಅವರು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಅದನ್ನು ಪ್ರವೇಶಿಸಲು ಯಾರಿಗೂ ಸಾಧ್ಯವಾಗಲಾರದೆಂದು ನಾನು ಭಯಪಡುತ್ತೇನೆ." ಅಲ್ಲಾಹು ಹೇಳಿದನು: "ನರಕಕ್ಕೆ ಹೋಗಿ ಅಲ್ಲಿ ನಾನು ನರಕವಾಸಿಗಳಿಗೆ ಸಿದ್ಧಗೊಳಿಸಿದ್ದನ್ನು ನೋಡಿ ಬಾ." ಅವರು ಅದನ್ನು ನೋಡಿದಾಗ, ಅದರ ಭಾಗಗಳು ಒಂದು ಇನ್ನೊಂದರ ಮೇಲೆ ಏರಿ ಹೋಗುವುದನ್ನು ಕಂಡರು. ಅವರು ಮರಳಿ ಬಂದು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಯಾರೂ ಅದನ್ನು ಪ್ರವೇಶಿಸಲಾರರು." ನಂತರ ಅಲ್ಲಾಹನ ಆಜ್ಞೆಯ ಮೇರೆಗೆ ಅದನ್ನು ಮೋಹಗಳಿಂದ ಹೊದಿಯಲಾಯಿತು. ನಂತರ ಅಲ್ಲಾಹು ಹೇಳಿದನು: "ಹೋಗು, ಅದನ್ನು ಪುನಃ ನೋಡಿ ಬಾ." ಅವರು ಅದನ್ನು ನೋಡಿದಾಗ, ಅದನ್ನು ಮೋಹಗಳಿಂದ ಹೊದಿಯಲಾಗಿತ್ತು. ಅವರು ಹಿಂದಿರುಗಿ ಬಂದು ಹೇಳಿದರು: "ನಿನ್ನ ಪ್ರತಿಷ್ಠೆಯ ಮೇಲಾಣೆ! ಅದನ್ನು ಪ್ರವೇಶಿಸದೇ ಬಚಾವಾಗಲು ಯಾರಿಗೂ ಸಾಧ್ಯವಾಗಲಾರದೆಂದು ನನಗೆ ಭಯವಾಗುತ್ತಿದೆ."
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ ನಿಮ್ಮಲ್ಲೊಬ್ಬರು ಹೃದಯಾಂತರಾಳದಿಂದ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳಿದರೆ*, ಮುಅಝ್ಝಿನ್ 'ಅಶ್‌ಹದು ಅನ್ ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳುವಾಗ 'ಅಶ್‌ಹದು ಅನ್ ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಅಶ್‌ಹದು ಅನ್ನ ಮುಹಮ್ಮದನ್ ರಸೂಲುಲ್ಲಾಹ್' ಎಂದು ಹೇಳುವಾಗ 'ಅಶ್‌ಹದು ಅನ್ನ ಮುಹಮ್ಮದನ್ ರಸೂಲುಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಹಯ್ಯ ಅಲಸ್ಸಲಾಹ್' ಎಂದು ಹೇಳುವಾಗ 'ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಹಯ್ಯ ಅಲಲ್ ಫಲಾಹ್' ಎಂದು ಹೇಳುವಾಗ 'ಲಾ ಹೌಲ ವಲಾ ಕುವ್ವತ ಇಲ್ಲಾ ಬಿಲ್ಲಾಹ್' ಎಂದು ಹೇಳಿದರೆ, ಮುಅಝ್ಝಿನ್ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳುವಾಗ 'ಅಲ್ಲಾಹು ಅಕ್ಬರ್ ಅಲ್ಲಾಹು ಅಕ್ಬರ್' ಎಂದು ಹೇಳಿದರೆ, ಮುಅಝ್ಝಿನ್ 'ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳುವಾಗ 'ಲಾಇಲಾಹ ಇಲ್ಲಲ್ಲಾಹ್' ಎಂದು ಹೇಳಿದರೆ, ಅವರು ಸ್ವರ್ಗವನ್ನು ಪ್ರವೇಶಿಸುತ್ತಾರೆ."
عربي ಆಂಗ್ಲ ಉರ್ದು
: .
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಇಹಲೋಕದಲ್ಲಿ ರೇಷ್ಮೆ ಧರಿಸಿದವನು ಪರಲೋಕದಲ್ಲಿ ಅದನ್ನು ಧರಿಸುವುದಿಲ್ಲ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ನಿಮ್ಮಲ್ಲೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ತನ್ನ ಜನನಾಂಗವನ್ನು ಬಲಗೈಯಲ್ಲಿ ಹಿಡಿಯಬಾರದು, ಬಲಗೈಯಿಂದ ಶೌಚವನ್ನು ಒರೆಸಬಾರದು, ಮತ್ತು ಪಾತ್ರೆಯೊಳಗೆ ಶ್ವಾಸ ಬಿಡಬಾರದು."
عربي ಆಂಗ್ಲ ಉರ್ದು
: :
عربي ಆಂಗ್ಲ ಉರ್ದು
"ಒಳ್ಳೆಯ ಒಡನಾಡಿ ಮತ್ತು ಕೆಟ್ಟ ಒಡನಾಡಿಯ ಉದಾಹರಣೆಯು ಕಸ್ತೂರಿ ಮಾರುವವನ ಮತ್ತು ತಿದಿ ಊದುವವನಂತೆ.* ಕಸ್ತೂರಿ ಮಾರುವವನು ನಿನಗೆ ಸ್ವಲ್ಪ ಕಸ್ತೂರಿಯನ್ನು ಕೊಡಬಹುದು. ಅಥವಾ ನೀನು ಅವನಿಂದ ಅದನ್ನು ಖರೀದಿಸಬಹುದು. ಅಥವಾ ನಿನಗೆ ಅವನಿಂದ ಉತ್ತಮ ಸುವಾಸನೆಯನ್ನು ಅನುಭವಿಸಬಹುದು. ಆದರೆ ತಿದಿ ಊದುವವನು ನಿನ್ನ ಬಟ್ಟೆಯನ್ನು ಸುಟ್ಟು ಹಾಕಬಹುದು. ಅಥವಾ ನಿನಗೆ ಅವನಿಂದ ಕೆಟ್ಟ ವಾಸನೆಯನ್ನು ಅನುಭವಿಸಬೇಕಾಗಬಹುದು."
عربي ಆಂಗ್ಲ ಉರ್ದು
"ಓ ಹೃದಯಗಳನ್ನು ತಿರುಗಿಸುವವನೇ! ನನ್ನ ಹೃದಯವನ್ನು ನಿನ್ನ ಧರ್ಮದಲ್ಲಿ ದೃಢವಾಗಿ ನಿಲ್ಲಿಸು" ಎಂದು ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪದೇ ಪದೇ ಪ್ರಾರ್ಥಿಸುತ್ತಿದ್ದರು.* ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನಾವು ನಿಮ್ಮಲ್ಲಿ ಮತ್ತು ನೀವು ತಂದ ಧರ್ಮದಲ್ಲಿ ವಿಶ್ವಾಸವಿಟ್ಟಿದ್ದೇವೆ. ಆದರೂ ನಿಮಗೆ ನಮ್ಮ ಬಗ್ಗೆ ಭಯವೇ?" ಅವರು ಉತ್ತರಿಸಿದರು: "ಹೌದು, ನಿಶ್ಚಯವಾಗಿಯೂ ಹೃದಯಗಳು ಅಲ್ಲಾಹನ ಬೆರಳುಗಳ ಪೈಕಿ ಎರಡು ಬೆರಳುಗಳ ನಡುವೆ ಇವೆ. ಅವನು ಇಚ್ಛಿಸುವಂತೆ ಅವುಗಳನ್ನು ತಿರುಗಿಸುತ್ತಾನೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಸತ್ಯವಿಶ್ವಾಸಿಗಳು ಮತ್ತು ಸತ್ಯವಿಶ್ವಾಸಿನಿಗಳು, ಅವರು ಅಲ್ಲಾಹನನ್ನು ಭೇಟಿಯಾಗುವವರೆಗೂ ಸ್ವತಃ ಅವರಲ್ಲಿ, ಅವರ ಮಕ್ಕಳಲ್ಲಿ ಮತ್ತು ಅವರ ಸಂಪತ್ತಿನಲ್ಲಿ ಪರೀಕ್ಷೆಗಳು ಸಂಭವಿಸುತ್ತಲೇ ಇರುತ್ತವೆ; ಎಲ್ಲಿಯವರೆಗೆಂದರೆ, ಅವರು ಸಂಪೂರ್ಣ ಪಾಪರಹಿತರಾಗುವ ತನಕ."
عربي ಆಂಗ್ಲ ಉರ್ದು
"ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ.* ಆದ್ದರಿಂದ ಆ ಸಮಯದಲ್ಲಿ ಅಲ್ಲಾಹನನ್ನು ಸ್ಮರಿಸುವವರಲ್ಲಿ ಸೇರಲು ನಿನಗೆ ಸಾಧ್ಯವಾಗುವುದಾದರೆ ಸೇರಿಕೋ."
عربي ಆಂಗ್ಲ ಉರ್ದು
"ಪುರುಷನು ಖರ್ಚು ಮಾಡುವ ಅತಿಶ್ರೇಷ್ಠ ದೀನಾರ್ ಎಂದರೆ ಅವನು ತನ್ನ ಕುಟುಂಬಕ್ಕಾಗಿ ಖರ್ಚು ಮಾಡುವ ದೀನಾರ್, ಪುರುಷನು ಅಲ್ಲಾಹನ ಮಾರ್ಗದಲ್ಲಿ ತನ್ನ ಸವಾರಿಗಾಗಿ ಖರ್ಚು ಮಾಡುವ ದೀನಾರ್, ಮತ್ತು ಅವನು ಅಲ್ಲಾಹನ ಮಾರ್ಗದಲ್ಲಿ ತನ್ನ ಸಹಚರರಿಗಾಗಿ ಖರ್ಚು ಮಾಡುವ ದೀನಾರ್."* ಅಬೂ ಕಿಲಾಬ ಹೇಳಿದರು: "ಅವರು ಕುಟುಂಬದಿಂದ ಆರಂಭಿಸಿದರು." ನಂತರ ಅಬೂ ಕಿಲಾಬ ಹೇಳಿದರು: "ತನ್ನ ಕುಟುಂಬದ ಕಿರಿಯ ಸದಸ್ಯರಿಗಾಗಿ ಖರ್ಚು ಮಾಡುವ ಪುರುಷನಿಗಿಂತ ಹೆಚ್ಚು ಪ್ರತಿಫಲ ಪಡೆಯುವವರು ಯಾರಿದ್ದಾರೆ? ಅವನ ಮೂಲಕ ಅಲ್ಲಾಹು ಅವರನ್ನು ಪರಿಶುದ್ಧರನ್ನಾಗಿ ಮಾಡುತ್ತಾನೆ ಅಥವಾ ಅವರಿಗೆ ಪ್ರಯೋಜನವನ್ನು ನೀಡುತ್ತಾನೆ ಮತ್ತು ಅವರನ್ನು ಶ್ರೀಮಂತಗೊಳಿಸುತ್ತಾನೆ."
عربي ಆಂಗ್ಲ ಉರ್ದು
. . . .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸೀನುವಾಗ ತಮ್ಮ ಕೈಯನ್ನು—ಅಥವಾ ಬಟ್ಟೆಯನ್ನು—ಮುಖದ ಮೇಲಿಡುತ್ತಿದ್ದರು ಮತ್ತು ಶಬ್ದವನ್ನು ಕಡಿಮೆ ಮಾಡುತ್ತಿದ್ದರು—ಅಥವಾ ತಗ್ಗಿಸುತ್ತಿದ್ದರು.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
: . : : . : :
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. : . : . :
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ನಾಳೆ ನಾನು ಈ ಪತಾಕೆಯನ್ನು ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು. ಅವನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುತ್ತಾನೆ ಮತ್ತು ಅಲ್ಲಾಹು ಮತ್ತು ಅವನ ಸಂದೇಶವಾಹಕರು ಅವನನ್ನು ಪ್ರೀತಿಸುತ್ತಾರೆ." ಪತಾಕೆ ಯಾರ ಕೈಗೆ ಕೊಡಲಾಗಬಹುದು ಎಂದು ಮಾತನಾಡುತ್ತಾ ಜನರು ಆ ರಾತ್ರಿಯನ್ನು ಕಳೆದರು. ಬೆಳಗಾದಾಗ, ಜನರೆಲ್ಲರೂ ಅದನ್ನು ತಮ್ಮ ಕೈಗೆ ಕೊಡಲಾಗಬಹುದೆಂಬ ನಿರೀಕ್ಷೆಯಿಂದ ಬೆಳಗ್ಗೆಯೇ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ತೆರಳಿದರು. ಅವರು (ಪ್ರವಾದಿ) ಕೇಳಿದರು: "ಅಲೀ ಬಿನ್ ಅಬೂ ತಾಲಿಬ್ ಎಲ್ಲಿ?" ಅವರು ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ಕಣ್ಣ ನೋವಿನಿಂದ ಬಳಲುತ್ತಿದ್ದಾರೆ." ಅವರು ಹೇಳಿದರು: "ಅವನ ಬಳಿಗೆ ಜನರನ್ನು ಕಳುಹಿಸಿ." ಅವರು ಬಂದಾಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಎರಡು ಕಣ್ಣುಗಳಿಗೆ ಉಗಿದು ಪ್ರಾರ್ಥಿಸಿದರು. ಆಗ ಅವರ ಕಣ್ಣಿನಲ್ಲಿ ಯಾವುದೇ ನೋವಿರಲಿಲ್ಲವೋ ಎಂಬಂತೆ ಅದು ಗುಣವಾಯಿತು. ಅವರು ಪತಾಕೆಯನ್ನು ಅವರಿಗೆ ಕೊಟ್ಟರು. ಅಲಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ನಮ್ಮಂತೆ ಆಗುವ ತನಕ ನಾನು ಅವರೊಂದಿಗೆ ಯುದ್ಧ ಮಾಡಬೇಕೇ?" ಅವರು ಉತ್ತರಿಸಿದರು: "ಅವರ ಅಂಗಳವನ್ನು ತಲುಪುವ ತನಕ ಸಾವಧಾನದಿಂದ ಮುಂದುವರಿಯಿರಿ. ನಂತರ ಅವರನ್ನು ಇಸ್ಲಾಂ ಧರ್ಮಕ್ಕೆ ಕರೆಯಿರಿ. ಅಲ್ಲಾಹನ ಹಕ್ಕಿಗೆ ಸಂಬಂಧಿಸಿದಂತೆ ಅವರಿಗೆ ಏನು ಕಡ್ಡಾಯವಾಗಿದೆಯೆಂಬುದನ್ನು ತಿಳಿಸಿಕೊಡಿ.@ಏಕೆಂದರೆ, ಅಲ್ಲಾಹನಾಣೆ! ಅಲ್ಲಾಹು ನಿನ್ನ ಮೂಲಕ ಒಬ್ಬ ವ್ಯಕ್ತಿಗೆ ಸನ್ಮಾರ್ಗವನ್ನು ಕರುಣಿಸುವುದು ನಿನಗೆ ಕೆಂಪು ಒಂಟೆಗಳಿರುವುದಕ್ಕಿಂತಲೂ ಶ್ರೇಷ್ಠವಾಗಿದೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಅಲ್ಲಾಹು ನಿಮ್ಮ ಪಾಪಗಳನ್ನು ಅಳಿಸುವ ಮತ್ತು ನಿಮ್ಮ ಪದವಿಗಳನ್ನು ಏರಿಸುವ ಒಂದು ವಿಷಯದ ಬಗ್ಗೆ ನಾನು ನಿಮಗೆ ತಿಳಿಸಿಕೊಡಲೇ?*" ಅವರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ತಿಳಿಸಿಕೊಡಿ." ಅವರು ಹೇಳಿದರು: "ಕಷ್ಟ ಕಾಲದಲ್ಲಿ ಅತ್ಯುತ್ತಮವಾಗಿ ವುದೂ ನಿರ್ವಹಿಸುವುದು, ಮಸೀದಿಗೆ ಅತ್ಯಧಿಕ ಹೆಜ್ಜೆ ಹಾಕುವುದು ಮತ್ತು ಒಂದು ನಮಾಝ್ ನಿರ್ವಹಿಸಿದ ಬಳಿಕ ಇನ್ನೊಂದು ನಮಾಝನ್ನು ಕಾಯುವುದು. ಇದೇ ರಿಬಾತ್ ಆಗಿದೆ."
عربي ಆಂಗ್ಲ ಉರ್ದು
"ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?"* ಅವರು ಹೇಳಿದರು: "ತಿಳಿಸಿಕೊಡಿ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹನ ಸ್ಮರಣೆ."
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
: :
عربي ಆಂಗ್ಲ ಉರ್ದು
. :
عربي ಆಂಗ್ಲ ಉರ್ದು
. : :
عربي ಆಂಗ್ಲ ಉರ್ದು
ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾದ ದಾರಿಯಲ್ಲಿ ಚಲಿಸುತ್ತಿದ್ದರು. ಅವರು ಜುಮ್ದಾನ್ ಎಂಬ ಹೆಸರಿನ ಪರ್ವತದ ಬಳಿಯಿಂದ ಸಾಗಿದಾಗ ಹೇಳಿದರು: "ಮುಂದುವರಿಯಿರಿ. ಇದು ಜುಮ್ದಾನ್. @ಮುಫರ್‍ರಿದ್‌ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ.*" ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಮುಫರ್‍ರಿದ್‌ಗಳು ಎಂದರೇನು?" ಅವರು ಉತ್ತರಿಸಿದರು: "ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವ ಪುರುಷರು ಮತ್ತು ಸ್ತ್ರೀಯರು."
عربي ಆಂಗ್ಲ ಉರ್ದು
"ನಿಮ್ಮಲ್ಲೊಬ್ಬನು ಮಲಗಿರುವಾಗ ಶೈತಾನನು ಅವನ ಕತ್ತಿನ ಹಿಂಭಾಗದಲ್ಲಿ ಮೂರು ಗಂಟುಗಳನ್ನು ಹಾಕಿ, ಅವುಗಳಲ್ಲಿ ಪ್ರತಿಯೊಂದು ಗಂಟಿಗೂ ಗುದ್ದುತ್ತಾ, "ರಾತ್ರಿ ಇನ್ನೂ ದೀರ್ಘವಾಗಿದೆ; ಮಲಗು" ಎನ್ನುತ್ತಿರುವನು.* ಅವನೇನಾದರೂ ಎದ್ದು ಅಲ್ಲಾಹನನ್ನು ಸ್ಮರಿಸಿದರೆ, ಒಂದು ಗಂಟು ಬಿಚ್ಚಿಹೋಗುತ್ತದೆ. ಅವನು ವುದೂ ನಿರ್ವಹಿಸಿದರೆ ಇನ್ನೊಂದು ಗಂಟು ಬಿಚ್ಚಿಹೋಗುತ್ತದೆ. ಅವನು ನಮಾಝ್ ಮಾಡಿದರೆ ಮೂರನೆಯ ಗಂಟು ಬಿಚ್ಚಿಹೋಗುತ್ತದೆ. ಆಗ ಅವನು ಉಲ್ಲಾಸದಿಂದ ಶುದ್ಧ ಮನಸ್ಸಿನೊಂದಿಗೆ ಬೆಳಗನ್ನು ಪ್ರವೇಶಿಸುತ್ತಾನೆ. ಇಲ್ಲದಿದ್ದರೆ ಅವನು ಕೆಟ್ಟ ಮನಸ್ಸಿನೊಂದಿಗೆ ಆಲಸ್ಯದಿಂದ ಬೆಳಗನ್ನು ಪ್ರವೇಶಿಸುತ್ತಾನೆ."
عربي ಆಂಗ್ಲ ಉರ್ದು
"ನನ್ನ ಸಮುದಾಯದ ಎಲ್ಲರನ್ನೂ ಕ್ಷಮಿಸಲಾಗುವುದು, ಬಹಿರಂಗವಾಗಿ ಪಾಪ ಮಾಡುವವರ ಹೊರತು.* ಬಹಿರಂಗವಾಗಿ ಪಾಪ ಮಾಡುವ ಒಂದು ರೂಪ ಹೇಗೆಂದರೆ, ಒಬ್ಬ ವ್ಯಕ್ತಿ ರಾತ್ರಿಯಲ್ಲಿ ಒಂದು ಪಾಪವನ್ನು ಮಾಡುತ್ತಾನೆ. ನಂತರ ಅಲ್ಲಾಹು ಅದನ್ನು ಅವನಿಗಾಗಿ ಮುಚ್ಚಿಟ್ಟರೂ, ಮರುದಿನ ಬೆಳಗ್ಗೆ ಅವನು ಹೇಳುತ್ತಾನೆ: "ಓ ಇಂತಿಂತಹವರೇ! ನಾನು ನಿನ್ನೆ ರಾತ್ರಿ ಇಂತಿಂತಹ ಪಾಪ ಮಾಡಿದ್ದೇನೆ. ಅವನ ಪರಿಪಾಲಕನು (ಅಲ್ಲಾಹು) ಅವನ ಪಾಪವನ್ನು ಮುಚ್ಚಿಟ್ಟ ಸ್ಥಿತಿಯಲ್ಲಿ ಅವನು ರಾತ್ರಿಯನ್ನು ಕಳೆದಿದ್ದನು. ಆದರೆ ಬೆಳಗಾದಾಗ ಅವನು ಆ ಮುಚ್ಚಿಗೆಯನ್ನು ತೆರೆದು ಬಿಡುತ್ತಾನೆ."
عربي ಆಂಗ್ಲ ಉರ್ದು
. : .
عربي ಆಂಗ್ಲ ಉರ್ದು
"ಸವಾರಿ ಮಾಡುವವನು ಪಾದಚಾರಿಗೆ ಸಲಾಂ ಹೇಳಬೇಕು, ಪಾದಚಾರಿ ಕುಳಿತಿರುವವನಿಗೆ ಸಲಾಂ ಹೇಳಬೇಕು ಮತ್ತು ಸಣ್ಣ ಗುಂಪಿನ ಜನರು ದೊಡ್ಡ ಗುಂಪಿನ ಜನರಿಗೆ ಸಲಾಂ ಹೇಳಬೇಕು."*
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
"ಇಹಲೋಕದಲ್ಲಿ ಒಬ್ಬ ಅನಿವಾಸಿಯಂತೆ ಅಥವಾ ಒಬ್ಬ ದಾರಿಹೋಕನಂತೆ ಜೀವಿಸು."* ಇಬ್ನ್ ಉಮರ್ ಹೇಳುತ್ತಿದ್ದರು: "ಸಂಜೆಯಾದರೆ ಬೆಳಗನ್ನು ನಿರೀಕ್ಷಿಸಬೇಡಿ ಮತ್ತು ಬೆಳಗಾದರೆ ಸಂಜೆಯನ್ನು ನಿರೀಕ್ಷಿಸಬೇಡಿ. ಅನಾರೋಗ್ಯಕ್ಕೆ ಮುನ್ನ ಆರೋಗ್ಯವನ್ನು ಮತ್ತು ಸಾಯುವುದಕ್ಕೆ ಮುನ್ನ ಜೀವನವನ್ನು ಸದುಪಯೋಗಪಡಿಸಿ."
عربي ಆಂಗ್ಲ ಉರ್ದು
"ನಿಮ್ಮ ನಾಲಗೆಯು ಅಲ್ಲಾಹನ ಸ್ಮರಣೆಯಿಂದ ಸದಾ ಒದ್ದೆಯಾಗಿರಲಿ."
عربي ಆಂಗ್ಲ ಉರ್ದು
"ತನಗಾಗಿ ಇಷ್ಟಪಡುವುದನ್ನು ತನ್ನ ಸಹೋದರನಿಗಾಗಿಯೂ ಇಷ್ಟಪಡುವ ತನಕ ನಿಮ್ಮಲ್ಲಿ ಯಾರೂ (ನಿಜವಾದ) ಸತ್ಯವಿಶ್ವಾಸಿಯಾಗುವುದಿಲ್ಲ."
عربي ಆಂಗ್ಲ ಉರ್ದು
"ಮುಸಲ್ಮಾನನನ್ನು ನಿಂದಿಸುವುದು ಅವಿಧೇಯತೆಯಾಗಿದೆ ಮತ್ತು ಅವನೊಡನೆ ಹೋರಾಡುವುದು ಸತ್ಯನಿಷೇಧವಾಗಿದೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
: .
عربي ಆಂಗ್ಲ ಉರ್ದು
"ಯಾರ ಬಳಿ ನನ್ನ ಹೆಸರು ಹೇಳಲಾಗಿಯೂ ನನ್ನ ಮೇಲೆ ಸಲಾತ್ ಹೇಳುವುದಿಲ್ಲವೋ ಅವನೇ ನಿಜವಾದ ಜಿಪುಣ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಅದಾನ್ ಮತ್ತು ಇಕಾಮತ್‌ನ ನಡುವಿನ ಪ್ರಾರ್ಥನೆ ತಿರಸ್ಕರಿಸಲ್ಪಡುವುದಿಲ್ಲ."
عربي ಆಂಗ್ಲ ಉರ್ದು
"ಅಲ್ಲಾಹುಮ್ಮ ಅಸ್ಲಿಹ್ ಲೀ ದೀನೀ ಅಲ್ಲದೀ ಹುವ ಇಸ್ಮತು ಅಮ್ರೀ,* ವಅಸ್ಲಿಹ್ ಲೀ ದುನ್ಯಾಯಾಯ ಅಲ್ಲತೀ ಫೀಹಾ ಮಆಶೀ, ವಅಸ್ಲಿಹ್ ಲೀ ಆಖಿರತೀ ಅಲ್ಲತೀ ಫೀಹಾ ಮಆದೀ, ವಜ್‌ಅಲಿಲ್ ಹಯಾತ ಝಿಯಾದತನ್ ಲೀ ಫೀ ಕುಲ್ಲಿ ಖೈರಿನ್, ವಜ್‌ಅಲಿಲ್ ಮೌತ ರಾಹತನ್ ಲೀ ಮಿನ್ ಕುಲ್ಲಿ ಶರ‍್ರ್" (ಓ ಅಲ್ಲಾಹ್, ನನ್ನ ಕೆಲಸ-ಕಾರ್ಯಗಳ ಸಂರಕ್ಷಣೆಯಾಗಿರುವ ನನ್ನ ಧರ್ಮವನ್ನು ನನಗೆ ಉತ್ತಮಗೊಳಿಸು, ನಾನು ಜೀವಿಸಬೇಕಾದ ನನ್ನ ಇಹಲೋಕವನ್ನು ನನಗೆ ಉತ್ತಮಗೊಳಿಸು, ನನ್ನ ಮರಳಿ ಹೋಗಬೇಕಾದ ನನ್ನ ಪರಲೋಕವನ್ನು ನನಗೆ ಉತ್ತಮಗೊಳಿಸು. ಜೀವನವನ್ನು ಎಲ್ಲಾ ರೀತಿಯ ಒಳಿತುಗಳಲ್ಲಿ ನನಗೆ ಹೆಚ್ಚಿಸಿಕೊಡು ಮತ್ತು ಮರಣವನ್ನು ಎಲ್ಲ ರೀತಿಯ ಕೆಡುಕುಗಳಿಂದ ನೆಮ್ಮದಿಯಾಗಿ ಮಾಡು).
عربي ಆಂಗ್ಲ ಉರ್ದು
. . . .
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬೆಳಗಾಗುವಾಗ ಮತ್ತು ಸಂಜೆಯಾಗುವಾಗ ಈ ಪ್ರಾರ್ಥನೆಗಳನ್ನು ಪಠಿಸದೆ ಬಿಟ್ಟುಬಿಡುತ್ತಿರಲಿಲ್ಲ: @"ಓ ಅಲ್ಲಾಹ್! ಇಹಲೋಕದಲ್ಲೂ, ಪರಲೋಕದಲ್ಲೂ ನಾನು ನಿನ್ನಲ್ಲಿ ಸೌಖ್ಯವನ್ನು ಬೇಡುತ್ತೇನೆ.* ಓ ಅಲ್ಲಾಹ್! ನನ್ನ ಧರ್ಮದಲ್ಲಿ, ಇಹಲೋಕದಲ್ಲಿ, ಕುಟುಂಬದಲ್ಲಿ ಮತ್ತು ಸಂಪತ್ತಿನಲ್ಲಿ ಕ್ಷಮೆ ಮತ್ತು ಸೌಖ್ಯವನ್ನು ಬೇಡುತ್ತೇನೆ. ಓ ಅಲ್ಲಾಹ್! ನನ್ನ ಕುಂದು-ಕೊರತೆಗಳನ್ನು ಮುಚ್ಚಿಡು ಮತ್ತು ನನ್ನ ಭಯವನ್ನು ನಿವಾರಿಸು. ಓ ಅಲ್ಲಾಹ್! ನನ್ನ ಮುಂಭಾಗದಿಂದ, ನನ್ನ ಹಿಂಭಾಗದಿಂದ, ನನ್ನ ಬಲಭಾಗದಿಂದ, ನನ್ನ ಎಡಭಾಗದಿಂದ, ನನ್ನ ಮೇಲ್ಭಾಗದಿಂದ ನನ್ನನ್ನು ರಕ್ಷಿಸು. ನನ್ನ ಕೆಳಭಾಗದಿಂದ ನನ್ನನ್ನು ಹತ್ಯೆಗೈಯಲಾಗುವುದರಿಂದ ನಾನು ನಿನ್ನ ಮಹಾತ್ಮೆಯ ಮೂಲಕ ನಿನ್ನಲ್ಲಿ ರಕ್ಷೆ ಬೇಡುತ್ತೇನೆ."
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
"ಓ ಅಲ್ಲಾಹ್! ನಿನ್ನ ಅನುಗ್ರಹಗಳ ನಿವಾರಣೆಯಿಂದ, ನಿನ್ನ ಸೌಖ್ಯದ ಬದಲಾವಣೆಯಿಂದ, ನಿನ್ನ ಹಠಾತ್ ಶಿಕ್ಷೆಯಿಂದ ಮತ್ತು ನಿನ್ನ ಸರ್ವ ಕ್ರೋಧಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ."
عربي ಆಂಗ್ಲ ಉರ್ದು
"ಓ ಅಲ್ಲಾಹ್! ನಾನು ನಿನ್ನಲ್ಲಿ ಸಾಲದ ಪ್ರಾಬಲ್ಯದಿಂದ, ಶತ್ರುಗಳ ಪ್ರಾಬಲ್ಯದಿಂದ ಮತ್ತು ಶತ್ರುಗಳು ಸಂಭ್ರಮಿಸುವುದರಿಂದ ರಕ್ಷೆ ಬೇಡುತ್ತೇನೆ."
عربي ಆಂಗ್ಲ ಉರ್ದು
. . . .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
"ಕ್ಷಮೆಯಾಚನೆಯ ಸರದಾರನಂತಿರುವ ಪ್ರಾರ್ಥನೆ* ಯಾವುದೆಂದರೆ ನೀವು ಹೀಗೆ ಪಠಿಸುವುದು: ಓ ಅಲ್ಲಾಹ್! ನೀನೇ ನನ್ನ ಪರಿಪಾಲಕ. ನಿನ್ನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ನೀನು ನನ್ನನ್ನು ಸೃಷ್ಟಿಸಿರುವೆ ಮತ್ತು ನಾನು ನಿನ್ನ ದಾಸನಾಗಿರುವೆ. ನಾನು ನನಗೆ ಸಾಧ್ಯವಾದಷ್ಟು ನಿನ್ನ ಕರಾರು ಮತ್ತು ವಾಗ್ದಾನಕ್ಕೆ ನಿಷ್ಠನಾಗಿರುತ್ತೇನೆ. ನಾನು ಮಾಡಿದ ಪಾಪಗಳ ಕೆಡುಕುಗಳಿಂದ ನಾನು ನಿನ್ನಲ್ಲಿ ರಕ್ಷೆ ಬೇಡುತ್ತೇನೆ. ನನ್ನ ಮೇಲಿರುವ ನಿನ್ನ ಅನುಗ್ರಹಗಳನ್ನು ಒಪ್ಪಿಕೊಳ್ಳುತ್ತೇನೆ ಮತ್ತು ನಾನು ಮಾಡಿದ ಪಾಪಗಳನ್ನೂ ಒಪ್ಪಿಕೊಳ್ಳುತ್ತೇನೆ. ಆದ್ದರಿಂದ ನನ್ನನ್ನು ಕ್ಷಮಿಸು. ಏಕೆಂದರೆ, ನಿಶ್ಚಯವಾಗಿಯೂ ನೀನಲ್ಲದೆ ಪಾಪಗಳನ್ನು ಕ್ಷಮಿಸುವವರಿಲ್ಲ." ಅವರು (ಪ್ರವಾದಿ) ಮುಂದುವರಿದು ಹೇಳಿದರು: "ಯಾರಾದರೂ ಇದರಲ್ಲಿ ಪೂರ್ಣ ನಂಬಿಕೆಯಿಟ್ಟು ಇದನ್ನು ಹಗಲಿನಲ್ಲಿ ಪಠಿಸಿ, ನಂತರ ಅದೇ ದಿನ ಸಂಜೆಯಾಗುವ ಮುನ್ನ ನಿಧನನಾದರೆ, ಅವನು ಸ್ವರ್ಗವಾಸಿಗಳಲ್ಲಿ ಸೇರುತ್ತಾನೆ. ಯಾರಾದರೂ ಇದರಲ್ಲಿ ಪೂರ್ಣ ನಂಬಿಕೆಯಿಟ್ಟು ಇದನ್ನು ರಾತ್ರಿಯಲ್ಲಿ ಪಠಿಸಿ, ನಂತರ ಬೆಳಗಾಗುವ ಮುನ್ನ ನಿಧನನಾದರೆ, ಅವನು ಸ್ವರ್ಗವಾಸಿಗಳಲ್ಲಿ ಸೇರುತ್ತಾನೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
: :
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?"* ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ ಮತ್ತು ಝಕಾತ್‌ಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇತರರನ್ನು ನಿಂದಿಸಿ, ಇತರರ ಮೇಲೆ ಸುಳ್ಳಾರೋಪ ಹೊರಿಸಿ, ಇತರರ ರಕ್ತ ಚೆಲ್ಲಿ ಮತ್ತು ಇತರರಿಗೆ ಥಳಿಸಿದಂತಹ ಪಾಪಗಳೊಂದಿಗೂ ಬರುತ್ತಾನೆ. ಆಗ ಅವನ ಸತ್ಕರ್ಮಗಳಿಂದ ಕೆಲವನ್ನು ನೀಡಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅವರ ಕೆಲವು ಪಾಪಗಳನ್ನು ತೆಗೆದು ಇವನ ಮೇಲೆ ಹೊರಿಸಲಾಗುವುದು. ನಂತರ ಅವನನ್ನು ನರಕಕ್ಕೆ ಎಸೆಯಲಾಗುವುದು."
عربي ಆಂಗ್ಲ ಉರ್ದು
: . . . . . . .
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
. . .
عربي ಆಂಗ್ಲ ಉರ್ದು
"ಒಬ್ಬ ಪುರುಷನು ಇನ್ನೊಬ್ಬ ಪುರುಷನ ಖಾಸಗಿ ಭಾಗಗಳನ್ನು ಮತ್ತು ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಖಾಸಗಿ ಭಾಗಗಳನ್ನು ನೋಡಬಾರದು.* ಒಬ್ಬ ಪುರುಷನು ಇನ್ನೊಬ್ಬ ಪುರುಷನ ಜೊತೆಗೆ ಒಂದೇ ಬಟ್ಟೆಯಲ್ಲಿ ಮಲಗಬಾರದು. ಒಬ್ಬ ಮಹಿಳೆ ಇನ್ನೊಬ್ಬ ಮಹಿಳೆಯ ಜೊತೆಗೆ ಒಂದೇ ಬಟ್ಟೆಯಲ್ಲಿ ಮಲಗಬಾರದು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. :
عربي ಆಂಗ್ಲ ಉರ್ದು
: .
عربي ಆಂಗ್ಲ ಉರ್ದು
. . . .
عربي ಆಂಗ್ಲ ಉರ್ದು
“ನಿಶ್ಚಯವಾಗಿಯೂ ಜ್ಞಾನ ಎತ್ತಲಾಗುವುದು, ಅಜ್ಞಾನ ಹೆಚ್ಚಾಗುವುದು, ವ್ಯಭಿಚಾರ ಹೆಚ್ಚಾಗುವುದು, ಮಧ್ಯಪಾನ ಹೆಚ್ಚಾಗುವುದು, ಪುರುಷರು ಕಡಿಮೆಯಾಗಿ ಮಹಿಳೆಯರು ಹೆಚ್ಚಾಗುವುದು, ಎಲ್ಲಿಯವರೆಗೆಂದರೆ ಐವತ್ತು ಮಹಿಳೆಯರನ್ನು ನೋಡಿಕೊಳ್ಳಲು ಒಬ್ಬ ಪುರುಷ ಮಾತ್ರವಿರುವುದು ಪ್ರಳಯದ ಚಿಹ್ನೆಗಳಾಗಿವೆ."
عربي ಆಂಗ್ಲ ಉರ್ದು
"ಮನುಷ್ಯನು ಒಬ್ಬ ವ್ಯಕ್ತಿಯ ಸಮಾಧಿಯ ಮೂಲಕ ಹಾದುಹೋಗುವಾಗ, 'ನಾನು ಅವನ ಸ್ಥಾನದಲ್ಲಿದ್ದರೆ ಎಷ್ಟು ಚೆನ್ನಾಗಿತ್ತು!' ಎಂದು ಹೇಳುವವರೆಗೆ ಅಂತ್ಯಸಮಯವು ಸಂಭವಿಸುವುದಿಲ್ಲ."
عربي ಆಂಗ್ಲ ಉರ್ದು
"(ಪುನರುತ್ಥಾನ ದಿನದಂದು) ಸಾವನ್ನು ಕಪ್ಪು ಮತ್ತು ಬಿಳಿ ಬಣ್ಣವಿರುವ ಟಗರಿನ ರೂಪದಲ್ಲಿ ತರಲಾಗುವುದು.* ಆಗ ಒಬ್ಬರು, "ಓ ಸ್ವರ್ಗವಾಸಿಗಳೇ!" ಎಂದು ಕೂಗಿ ಕರೆಯುವರು. ಆಗ ಸ್ವರ್ಗವಾಸಿಗಳು ತಮ್ಮ ಕತ್ತುಗಳನ್ನೆತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ಸ್ವರ್ಗವಾಸಿಗಳು ಉತ್ತರಿಸುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿದ ಬಳಿಕ ಅವರು, "ಓ ನರಕವಾಸಿಗಳೇ" ಎಂದು ಕೂಗಿ ಕರೆಯುವರು. ಆಗ ನರಕವಾಸಿಗಳು ತಮ್ಮ ಕತ್ತುಗಳನ್ನೆತ್ತಿ ನೋಡುವರು. ಅವರು ಕೇಳುವರು: "ಇದೇನೆಂದು ನಿಮಗೆ ತಿಳಿದಿದೆಯೇ?" ನರಕವಾಸಿಗಳು ಉತ್ತರಿಸುವರು: "ತಿಳಿದಿದೆ; ಅದು ಸಾವು." ಅವರೆಲ್ಲರೂ ಅದನ್ನು ನೋಡಿದ ಬಳಿಕ ಅದನ್ನು ಕೊಯ್ಯಲಾಗುವುದು. ನಂತರ ಅವರು ಹೇಳುವರು: "ಓ ಸ್ವರ್ಗವಾಸಿಗಳೇ, ನೀವು ಶಾಶ್ವತರು. ಇನ್ನು ನಿಮಗೆ ಸಾವಿಲ್ಲ. ಓ ನರಕವಾಸಿಗಳೇ, ನೀವು ಶಾಶ್ವತರು. ಇನ್ನು ನಿಮಗೆ ಸಾವಿಲ್ಲ." ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: “ಮತ್ತು ಎಲ್ಲಾ ಕಾರ್ಯಗಳಿಗೂ ತೀರ್ಪು ನೀಡಲಾಗುವ ಆ ವ್ಯಥೆಯ ದಿನದ ಬಗ್ಗೆ ಅವರಿಗೆ ಎಚ್ಚರಿಕೆ ನೀಡಿರಿ. ಆದರೆ ಅವರು ನಿರ್ಲಕ್ಷ್ಯದಲ್ಲಿದ್ದಾರೆ.” [ಮರ್ಯಮ್ 39] ಇಹಲೋಕದ ಈ ಜನರು ನಿರ್ಲಕ್ಷ್ಯದಲ್ಲಿದ್ದಾರೆ. "ಮತ್ತು ಅವರ ವಿಶ್ವಾಸವಿಡುವುದಿಲ್ಲ." [ಮರ್ಯಮ್ 39]
عربي ಆಂಗ್ಲ ಉರ್ದು
"ನೀವು ಉರಿಸುವ ಬೆಂಕಿ ನರಕದ ಬೆಂಕಿಯ ಎಪ್ಪತ್ತನೇ ಒಂದು ಭಾಗವಾಗಿದೆ.*" ಆಗ ಒಬ್ಬರು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಈ ಬೆಂಕಿಯೇ ಸಾಕಷ್ಟು ಬಿಸಿಯಾಗಿದೆ." ಅವರು ಹೇಳಿದರು: "ಈ ಬೆಂಕಿಗೆ ಅರುವತ್ತೊಂಬತ್ತು ಭಾಗಗಳನ್ನು ಸೇರಿಸಲಾಗುತ್ತದೆ. ಪ್ರತಿಯೊಂದು ಭಾಗವೂ ಅದರಷ್ಟೇ ಉರಿಯನ್ನು ಹೊಂದಿದೆ."
عربي ಆಂಗ್ಲ ಉರ್ದು
"ನನ್ನ ಮೇಲೆ ಮನಃಪೂರ್ವಕ ಸುಳ್ಳು ಹೇಳುವವರು ನರಕಾಗ್ನಿಯಲ್ಲಿ ಅವರ ಆಸನವನ್ನು ಸಿದ್ಧಪಡಿಸಿಕೊಳ್ಳಲಿ."
عربي ಆಂಗ್ಲ ಉರ್ದು
:
عربي ಆಂಗ್ಲ ಉರ್ದು
"ವಿದ್ವಾಂಸರ ನಡುವೆ ಮೆರೆಯಲು, ಅಥವಾ ಅವಿವೇಕಿಗಳೊಡನೆ ತರ್ಕಿಸಲು, ಅಥವಾ ಸಭೆಗಳಲ್ಲಿ ಶ್ರೇಷ್ಠ ಸ್ಥಾನಮಾನ ಪಡೆಯಲು ಜ್ಞಾನವನ್ನು ಕಲಿಯಬೇಡಿ.* ಈ ಉದ್ದೇಶಗಳಿಗಾಗಿ ಕಲಿಯುವವನಿಗೆ ನರಕವೇ ಗತಿ, ನರಕವೇ ಗತಿ."
عربي ಆಂಗ್ಲ ಉರ್ದು
"ಅಲ್ಲಾಹು ನೇರ ಮಾರ್ಗದ ಒಂದು ಉದಾಹರಣೆಯನ್ನು ನೀಡುತ್ತಾನೆ.* ಆ ನೇರ ಮಾರ್ಗದ ಎರಡು ಬದಿಗಳಲ್ಲೂ ಗೋಡೆಗಳಿವೆ. ಆ ಗೋಡೆಗಳಲ್ಲಿ ತೆರೆದುಕೊಂಡಿರುವ ಅನೇಕ ಬಾಗಿಲುಗಳಿವೆ. ಆ ಬಾಗಿಲುಗಳಲ್ಲಿ ಪರದೆಗಳನ್ನು ಹಾಕಲಾಗಿದೆ. ಆ ನೇರ ಮಾರ್ಗದಲ್ಲಿ ಒಬ್ಬ ವ್ಯಕ್ತಿ ಕೂಗಿ ಹೇಳುತ್ತಿರುತ್ತಾನೆ: "ಓ ಜನರೇ! ನೀವೆಲ್ಲರೂ ನೇರ ಮಾರ್ಗವನ್ನು ಪ್ರವೇಶಿರಿ. ಅತ್ತಿತ್ತ ತಿರುಗದೆ ನೇರವಾಗಿ ನಡೆಯಿರಿ." ಆ ಮಾರ್ಗದ ಮೇಲ್ಭಾಗದಲ್ಲಿ ಒಬ್ಬ ವ್ಯಕ್ತಿಯಿದ್ದು, ಆ ಬಾಗಿಲುಗಳಲ್ಲಿ ಯಾವುದಾದರೂ ಬಾಗಿಲನ್ನು ತೆರೆಯಲು ಪ್ರಯತ್ನಿಸಿದರೆ, ಅವನು ಕೂಗಿ ಹೇಳುತ್ತಾನೆ: "ನಿನಗೆ ದುರದೃಷ್ಟ ಕಾದಿದೆ! ಆ ಬಾಗಿಲನ್ನು ತೆರೆಯಬೇಡ. ನೀನು ಅದನ್ನು ತೆರೆದರೆ ಅದರ ಒಳಗೆ ಪ್ರವೇಶಿಸಿ ಬಿಡುವೆ." ಆ ನೇರ ಮಾರ್ಗವು ಇಸ್ಲಾಂ ಧರ್ಮವಾಗಿದೆ. ಆ ಎರಡು ಗೋಡೆಗಳು ಅಲ್ಲಾಹನ ಎಲ್ಲೆಗಳಾಗಿವೆ. ತೆರೆದುಕೊಂಡಿರುವ ಬಾಗಿಲುಗಳು ಅಲ್ಲಾಹು ನಿಷೇಧಿತ ವಲಯಗಳಾಗಿವೆ. ಆ ನೇರ ಮಾರ್ಗದ ಪ್ರವೇಶದ್ವಾರದಲ್ಲಿ ಕೂಗಿ ಕರೆಯುವುದು ಅಲ್ಲಾಹನ ಗ್ರಂಥವಾಗಿದೆ. ಆ ಮಾರ್ಗದ ಮೇಲ್ಭಾಗದಿಂದ ಕೂಗಿ ಕರೆಯುವುದು ಪ್ರತಿಯೊಬ್ಬ ಮುಸಲ್ಮಾನನ ಹೃದಯದಲ್ಲಿರುವ ಅಲ್ಲಾಹನ ಉಪದೇಶಕವಾಗಿದೆ."
عربي ಆಂಗ್ಲ ಉರ್ದು
"ನಿಮ್ಮಲ್ಲೊಬ್ಬನು ತನ್ನ ಮನೆಗೆ ಹಿಂದಿರುಗಿ ಬರುವಾಗ ಅಲ್ಲಿ ಮೂರು ದೊಡ್ಡ ಕೊಬ್ಬಿದ ಗರ್ಭಿಣಿ ಹೆಣ್ಣು ಒಂಟೆಗಳನ್ನು ಕಾಣಲು ಇಷ್ಟಪಡುತ್ತಾನೆಯೇ?*" ನಾವು ಹೇಳಿದೆವು: "ಹೌದು." ಅವರು ಹೇಳಿದರು: "ನಿಮ್ಮಲ್ಲೊಬ್ಬನು ನಮಾಝ್ ಮಾಡುವಾಗ ಪಠಿಸುವ ಮೂರು ವಚನಗಳು ಮೂರು ದೊಡ್ಡ ಕೊಬ್ಬಿದ ಗರ್ಭಿಣಿ ಹೆಣ್ಣು ಒಂಟೆಗಳಿಗಿಂತಲೂ ಉತ್ತಮವಾಗಿವೆ."
عربي ಆಂಗ್ಲ ಉರ್ದು
: . .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
: : . :
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ವಚನವನ್ನು ಪಠಿಸಿದರು: "ತಮಗೆ ಗ್ರಂಥವನ್ನು ಅವತೀರ್ಣಗೊಳಿಸಿದ್ದು ಅವನೇ. ಅದರಲ್ಲಿ ಸ್ಪಷ್ಟ ವಚನಗಳಿವೆ. ಅವು ಗ್ರಂಥದ ಮೂಲಗಳಾಗಿವೆ. (ಅದರಲ್ಲಿ) ಹೋಲಿಕೆಯಿರುವ ಕೆಲವು ವಚನಗಳೂ ಇವೆ. ಹೃದಯದಲ್ಲಿ ವಕ್ರತೆಯಿರುವವರು, ಗೊಂದಲವನ್ನು ಸೃಷ್ಟಿಸಲು ಮತ್ತು ತಪ್ಪಾಗಿ ವ್ಯಾಖ್ಯಾನಿಸಲು ಹೋಲಿಕೆಯಿರುವ ವಚನಗಳ ಹಿಂದೆ ಹೋಗುತ್ತಾರೆ. ಆದರೆ, ಅಲ್ಲಾಹನ ಹೊರತು ಯಾರೂ ಅದರ ವ್ಯಾಖ್ಯಾನವನ್ನು ತಿಳಿದಿಲ್ಲ. ಜ್ಞಾನದಲ್ಲಿ ಸದೃಢರಾಗಿರುವವರು ಹೇಳುತ್ತಾರೆ: ನಾವು ಅದರಲ್ಲಿ ವಿಶ್ವಾಸವಿಟ್ಟಿದ್ದೇವೆ. ಎಲ್ಲವೂ ನಮ್ಮ ಪರಿಪಾಲಕನ ಕಡೆಯಿಂದಾಗಿದೆ. ಬುದ್ಧಿವಂತರ ಹೊರತು ಇನ್ನಾರೂ ಉಪದೇಶವನ್ನು ಸ್ವೀಕರಿಸುವುದಿಲ್ಲ." [ಆಲು ಇಮ್ರಾನ್:7] ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಹೋಲಿಕೆಯಿರುವ ವಚನಗಳ ಹಿಂದೆ ಹೋಗುವವರನ್ನು ಕಂಡರೆ, ಅವರೇ ಅಲ್ಲಾಹು (ಈ ವಚನದಲ್ಲಿ) ಹೇಳಿದ ಜನರು (ಎಂದು ತಿಳಿಯಿರಿ); ಮತ್ತು ಅವರ ಬಗ್ಗೆ ಎಚ್ಚರವಾಗಿರಿ.*"
عربي ಆಂಗ್ಲ ಉರ್ದು
"ಯಾವುದೇ ಒಬ್ಬ ವ್ಯಕ್ತಿ ಒಂದು ತಪ್ಪು ಮಾಡಿ, ನಂತರ ಎದ್ದು ವುದೂ ನಿರ್ವಹಿಸಿ, ನಮಾಝ್ ಮಾಡಿ, ನಂತರ ಅಲ್ಲಾಹನಲ್ಲಿ ಕ್ಷಮೆಯಾಚಿಸಿದರೆ, ಅಲ್ಲಾಹು ಅವನಿಗೆ ಕ್ಷಮಿಸದೇ ಇರಲಾರ."* ನಂತರ ಅವರು ಈ ವಚನವನ್ನು ಪಠಿಸಿದರು: "ಅವರು ಏನಾದರೂ ನೀಚಕಾರ್ಯ ಮಾಡಿದರೆ ಅಥವಾ ಸ್ವಯಂ ಅಕ್ರಮವೆಸಗಿದರೆ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆಯಾಚಿಸುತ್ತಾರೆ." [ಆಲು ಇಮ್ರಾನ್:135] "
عربي ಆಂಗ್ಲ ಉರ್ದು
ಒಮ್ಮೆ ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮುಂದೆ ಕುಳಿತುಕೊಂಡು ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ, ನನ್ನ ಅಧೀನದಲ್ಲಿ ಇಬ್ಬರು ಗುಲಾಮರಿದ್ದಾರೆ. ಅವರು ನನ್ನಲ್ಲಿ ಸುಳ್ಳು ಹೇಳುತ್ತಾರೆ, ನನಗೆ ಮೋಸ ಮಾಡುತ್ತಾರೆ ಮತ್ತು ನನ್ನ ಮಾತನ್ನು ಕೇಳುವುದಿಲ್ಲ. ನಾನು ಅವರಿಗೆ ಗದರಿಸುತ್ತೇನೆ ಮತ್ತು ಹೊಡೆಯುತ್ತೇನೆ. ಅವರಿಗೆ ಸಂಬಂಧಿಸಿದಂತೆ ನನ್ನ ಸ್ಥಿತಿಯೇನು?" ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "@ಅವರು ಮೋಸ ಮಾಡಿದ್ದು, ತಮ್ಮ ಮಾತನ್ನು ಕೇಳದೇ ಇದ್ದದ್ದು ಮತ್ತು ತಮ್ಮಲ್ಲಿ ಸುಳ್ಳು ಹೇಳಿದ್ದನ್ನು ನೀವು ಅವರಿಗೆ ನೀಡಿದ ಶಿಕ್ಷೆಯೊಂದಿಗೆ ಅಳೆಯಲಾಗುತ್ತದೆ*. ನೀವು ನೀಡುವ ಶಿಕ್ಷೆಯು ಅವರು ಮಾಡಿದ ಪಾಪಗಳಷ್ಟೇ ಇದ್ದರೆ ಎರಡೂ ಸಮಾನವಾಗುತ್ತದೆ. ಅದರಲ್ಲಿ ನಿಮಗೆ ಪ್ರತಿಫಲ ಅಥವಾ ಶಿಕ್ಷೆಯಿಲ್ಲ. ನೀವು ನೀಡುವ ಶಿಕ್ಷೆಯು ಅವರ ಪಾಪಗಳಿಗಿಂತ ಕಡಿಮೆ ಇದ್ದರೆ ನಿಮಗೆ ಪ್ರತಿಫಲವಿದೆ. ನೀವು ನೀಡುವ ಶಿಕ್ಷೆಯು ಅವರ ಪಾಪಗಳಿಗಿಂತ ಹೆಚ್ಚಿದ್ದರೆ ಪ್ರತೀಕಾರವಾಗಿ ನಿಮ್ಮ ಕೆಲವು ಪುಣ್ಯಕಾರ್ಯಗಳನ್ನು ಅವರಿಗೆ ನೀಡಲಾಗುತ್ತದೆ." ಆ ವ್ಯಕ್ತಿ ಸ್ವಲ್ಪ ದೂರ ಹೋಗಿ ಗಟ್ಟಿಯಾಗಿ ಅಳತೊಡಗಿದರು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "ನೀವು ಅಲ್ಲಾಹನ ಗ್ರಂಥದಲ್ಲಿ ಈ ವಚನವನ್ನು ಪಠಿಸಿಲ್ಲವೇ? "ಪುನರುತ್ಥಾನ ದಿನದಂದು ನಾವು ನ್ಯಾಯಬದ್ಧವಾದ ತಕ್ಕಡಿಗಳನ್ನು ಸ್ಥಾಪಿಸುವೆವು. ಆಗ ಯಾರಿಗೂ ಸ್ವಲ್ಪವೂ ಅನ್ಯಾಯವಾಗುವುದಿಲ್ಲ." ಆಗ ಆ ವ್ಯಕ್ತಿ ಹೇಳಿದರು: "ಅಲ್ಲಾಹನಾಣೆ! ಓ ಅಲ್ಲಾಹನ ಸಂದೇಶವಾಹಕರೇ, ಅವರನ್ನು ಸ್ವತಂತ್ರಗೊಳಿಸುವುದಲ್ಲದೆ ನನಗಾಗಲಿ ಅವರಿಗಾಗಲಿ ಯಾವುದೇ ಒಳಿತನ್ನು ನಾನು ಕಾಣುತ್ತಿಲ್ಲ. ನಾನು ನಿಮ್ಮನ್ನು ಸಾಕ್ಷಿಯಾಗಿಸಿ ಅವರೆಲ್ಲರನ್ನೂ ಸ್ವತಂತ್ರಗೊಳಿಸುತ್ತಿದ್ದೇನೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"@ನಂತರ ಆ ದಿನದಂದು (ನಿಮಗೆ ದಯಪಾಲಿಸಲಾದ) ಎಲ್ಲಾ ಅನುಗ್ರಹಗಳ ಬಗ್ಗೆ ನಿಮ್ಮೊಡನೆ ಖಂಡಿತವಾಗಿಯೂ ಪ್ರಶ್ನಿಸಲಾಗುವುದು.*" [ಅತ್ತಕಾಸುರ್ 102:8] ಎಂಬ ವಚನವು ಅವತೀರ್ಣವಾದಾಗ, ಝುಬೈರ್ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಯಾವ ಅನುಗ್ರಹದ ಬಗ್ಗೆ ನಮ್ಮೊಡನೆ ಪ್ರಶ್ನಿಸಲಾಗುತ್ತದೆ? ನಮ್ಮಲ್ಲಿರುವುದು ಎರಡು ಕಪ್ಪು ವಸ್ತುಗಳು—،ಖರ್ಜೂರ ಮತ್ತು ನೀರು ಮಾತ್ರವಲ್ಲವೇ? ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅದು ಖಂಡಿತವಾಗಿಯೂ ಸಂಭವಿಸುತ್ತದೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. .
عربي ಆಂಗ್ಲ ಉರ್ದು
"ಯಾವುದೇ ಮುಸ್ಲಿಂ ಮಹಿಳೆ ತನ್ನ ಮಹ್ರಮ್ (ಹತ್ತಿರದ ಪುರುಷ ಸಂಬಂಧಿ) ಇಲ್ಲದೆ ಒಂದು ರಾತ್ರಿಯ ದೂರ ಪ್ರಯಾಣಿಸುವುದು ಅನು ಮತಿಸಲಾಗುವುದಿಲ್ಲ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಯಾರು ಒಬ್ಬ ಸತ್ಯವಿಶ್ವಾಸಿಯಿಂದ ಇಹಲೋಕದ ಕಷ್ಟಗಳಲ್ಲಿ ಒಂದು ಕಷ್ಟವನ್ನು ನಿವಾರಿಸುತ್ತಾನೋ, ಅಲ್ಲಾಹು ಪುನರುತ್ಥಾನದ ದಿನದ ಕಷ್ಟಗಳಲ್ಲಿ ಒಂದು ಕಷ್ಟವನ್ನು ಅವನಿಂದ ನಿವಾರಿಸುತ್ತಾನೆ.* ಯಾರು ಕಷ್ಟದಲ್ಲಿರುವವರಿಗೆ ಸುಲಭಗೊಳಿಸುತ್ತಾನೋ, ಅಲ್ಲಾಹು ಅವನಿಗೆ ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಸುಲಭಗೊಳಿಸುತ್ತಾನೆ. ಯಾರು ಒಬ್ಬ ಮುಸ್ಲಿಮನ ನ್ಯೂನತೆಗಳನ್ನು ಮುಚ್ಚಿಡುತ್ತಾನೋ, ಅಲ್ಲಾಹು ಅವನ ನ್ಯೂನತೆಗಳನ್ನು ಇಹಲೋಕದಲ್ಲಿ ಮತ್ತು ಪರಲೋಕದಲ್ಲಿ ಮುಚ್ಚಿಡುತ್ತಾನೆ. ದಾಸನು ತನ್ನ ಸಹೋದರನಿಗೆ ಸಹಾಯ ಮಾಡುತ್ತಿರುವ ತನಕ ಅಲ್ಲಾಹನು ದಾಸನಿಗೆ ಸಹಾಯ ಮಾಡುತ್ತಾನೆ. ಯಾರು ಜ್ಞಾನವನ್ನು ಹುಡುಕುತ್ತಾ ಒಂದು ದಾರಿಯನ್ನು ತುಳಿಯುತ್ತಾನೋ, ಅಲ್ಲಾಹು ಅವನಿಗೆ ಸ್ವರ್ಗಕ್ಕೆ ದಾರಿಯನ್ನು ಸುಲಭಗೊಳಿಸುತ್ತಾನೆ. ಒಂದು ಗುಂಪು ಜನರು ಅಲ್ಲಾಹನ ಮನೆಗಳ (ಮಸೀದಿಗಳ) ಪೈಕಿ ಒಂದರಲ್ಲಿ ಅಲ್ಲಾಹನ ಗ್ರಂಥವನ್ನು ಪಠಿಸಲು, ಮತ್ತು ಅದನ್ನು ತಮ್ಮ ನಡುವೆ ಅಧ್ಯಯನ ಮಾಡಲು ಒಟ್ಟುಗೂಡುತ್ತಾರೆ ಎಂದಾದರೆ, ಅವರ ಮೇಲೆ ಶಾಂತಿ ಇಳಿಯುತ್ತದೆ, ಕರುಣೆಯು ಅವರನ್ನು ಆವರಿಸುತ್ತದೆ, ದೇವದೂತರುಗಳು ಅವರನ್ನು ಸುತ್ತುವರಿಯುತ್ತಾರೆ ಮತ್ತು ಅಲ್ಲಾಹು ತನ್ನ ಹತ್ತಿರವಿರುವವರಿಗೆ ಅವರ ಬಗ್ಗೆ ತಿಳಿಸುತ್ತಾನೆ. ಯಾರ ಕರ್ಮಗಳು ಅವನನ್ನು ನಿಧಾನಗೊಳಿಸುತ್ತವೆಯೋ, ಅವನ ವಂಶವು ಅವನನ್ನು ಮುಂದಕ್ಕೆ ಒಯ್ಯುವುದಿಲ್ಲ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಅಶಾಂತಿಯ ಸಮಯದಲ್ಲಿ ಆರಾಧನೆ ಮಾಡುವುದು ಎಂದರೆ ನನ್ನ ಬಳಿಗೆ ಹಿಜ್ರ (ವಲಸೆ) ಮಾಡಿದಂತೆ."
عربي ಆಂಗ್ಲ ಉರ್ದು
: . : . :
عربي ಆಂಗ್ಲ ಉರ್ದು
: . .
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
. . :
عربي ಆಂಗ್ಲ ಉರ್ದು
"ಯಾರು ಅಹಂಕಾರದಿಂದ ತನ್ನ ಉಡುಪನ್ನು (ನೆಲದಲ್ಲಿ) ಎಳೆಯುತ್ತಾನೋ ಅವನ ಕಡೆಗೆ ಅಲ್ಲಾಹು ನೋಡುವುದಿಲ್ಲ."
عربي ಆಂಗ್ಲ ಉರ್ದು