ಉಪವರ್ಗಗಳು

ಹದೀಸ್‌ಗಳ ಪಟ್ಟಿ

"ಓ ಅಲ್ಲಾಹ್, ನನ್ನ ಸಮಾಧಿಯನ್ನು ವಿಗ್ರಹವನ್ನಾಗಿ ಮಾಡಬೇಡ*. ತಮ್ಮ ಪ್ರವಾದಿಗಳ ಸಮಾಧಿಗಳನ್ನು ಆರಾಧನಾಲಯಗಳನ್ನಾಗಿ ಮಾಡಿಕೊಂಡ ಜನರನ್ನು ಅಲ್ಲಾಹು ಶಪಿಸಿದ್ದಾನೆ."
عربي ಆಂಗ್ಲ ಉರ್ದು
ಒಮ್ಮೆ ಉಮ್ಮು ಸಲಮ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಅಬಿಸೀನಿಯಾದಲ್ಲಿ ನೋಡಿದ ಮಾರಿಯ ಎಂಬ ಹೆಸರಿನ ಇಗರ್ಜಿಯ ಬಗ್ಗೆ ಮತ್ತು ಅದರಲ್ಲಿ ಅವರು ನೋಡಿದ ಚಿತ್ರಗಳ ಬಗ್ಗೆ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಗಮನ ಸೆಳೆದಾಗ, ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: "@ಅವರು ಎಂತಹ ಜನರೆಂದರೆ, ಅವರಲ್ಲಿ ಒಬ್ಬ ನೀತಿವಂತ ದಾಸ ಅಥವಾ ಒಬ್ಬ ನೀತಿವಂತ ವ್ಯಕ್ತಿ ಮರಣಹೊಂದಿದರೆ, ಅವರು ಅವನ ಸಮಾಧಿಯ ಮೇಲೆ ಆರಾಧನಾಲಯವನ್ನು ನಿರ್ಮಿಸುತ್ತಿದ್ದರು* ಮತ್ತು ಅದರಲ್ಲಿ ಆ ಚಿತ್ರಗಳನ್ನು ರಚಿಸುತ್ತಿದ್ದರು. ಅವರು ಅಲ್ಲಾಹನ ದೃಷ್ಟಿಯಲ್ಲಿ ಸೃಷ್ಟಿಗಳಲ್ಲೇ ಅತ್ಯಂತ ನಿಕೃಷ್ಟರು."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ಉಸ್ಮಾನ್ ಬಿನ್ ಅಫ್ಫಾನ್ ಮಸೀದಿಯನ್ನು ಪುನರ್ ನಿರ್ಮಿಸಲು ಬಯಸಿದರು. ಆದರೆ ಜನರಿಗೆ ಅದು ಇಷ್ಟವಿರಲಿಲ್ಲ. ಮಸೀದಿ ಹೇಗಿತ್ತೋ ಹಾಗೆಯೇ ಇರುವುದು ಅವರಿಗೆ ಇಷ್ಟವಾಗಿತ್ತು. ಆಗ ಉಸ್ಮಾನ್ ಹೇಳಿದರು: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ: "@ಯಾರು ಅಲ್ಲಾಹನಿಗೋಸ್ಕರ ಒಂದು ಮಸೀದಿಯನ್ನು ನಿರ್ಮಿಸುತ್ತಾರೋ ಅವರಿಗೆ ಅಲ್ಲಾಹು ಸ್ವರ್ಗದಲ್ಲಿ ಅದಕ್ಕೆ ಸಮಾನವಾದುದನ್ನು ನಿರ್ಮಿಸುತ್ತಾನೆ."
عربي ಆಂಗ್ಲ ಉರ್ದು
.
عربي ಆಂಗ್ಲ ಉರ್ದು
"ನಿಮ್ಮಲ್ಲೊಬ್ಬರು ಮಸೀದಿಯೊಳಗೆ ಪ್ರವೇಶ ಮಾಡಿದರೆ ಕುಳಿತುಕೊಳ್ಳುವುದಕ್ಕೆ ಮೊದಲು ಎರಡು ರಕಅತ್ ನಮಾಝ್ ನಿರ್ವಹಿಸಲಿ."
عربي ಆಂಗ್ಲ ಉರ್ದು
"ನಿಮ್ಮಲ್ಲೊಬ್ಬರು ಮಸೀದಿಯನ್ನು ಪ್ರವೇಶಿಸುವಾಗ, 'ಅಲ್ಲಾಹುಮ್ಮಫ್ತಹ್ ಲೀ ಅಬ್ವಾಬ ರಹ್ಮತಿಕ್' (ಓ ಅಲ್ಲಾಹ್! ನಿನ್ನ ದಯೆಯ ಬಾಗಿಲುಗಳನ್ನು ನನಗೆ ತೆರೆದುಕೊಡು) ಎಂದು ಹೇಳಬೇಕು ಮತ್ತು ಹೊರಬರುವಾಗ, 'ಅಲ್ಲಾಹುಮ್ಮ ಇನ್ನೀ ಅಸ್‌ಅಲುಕ ಮಿನ್ ಫದ್ಲಿಕ್' (ಓ ಅಲ್ಲಾಹ್! ನಿನ್ನ ಔದಾರ್ಯದಿಂದ ನಾನು ನಿನ್ನಲ್ಲಿ ಬೇಡುತ್ತೇನೆ) ಎಂದು ಹೇಳಬೇಕು."
عربي ಆಂಗ್ಲ ಉರ್ದು