ಉಪವರ್ಗಗಳು

ಹದೀಸ್‌ಗಳ ಪಟ್ಟಿ

ನಿಶ್ಚಯವಾಗಿಯೂ ನೀವು ಗ್ರಂಥದವರ ಬಳಿಗೆ ಹೋಗುತ್ತಿದ್ದೀರಿ. ಆದ್ದರಿಂದ ನೀವು ಅವರ ಬಳಿಗೆ ಹೋದರೆ, ಅವರನ್ನು “ಅಲ್ಲಾಹನ ಹೊರತು ಆರಾಧನೆಗೆ ಯಾರೂ ಅರ್ಹರಲ್ಲ ಮತ್ತು ನಾನು ಅಲ್ಲಾಹನ ಸಂದೇಶವಾಹಕನಾಗಿದ್ದೇನೆಂದು” ಸಾಕ್ಷಿ ವಹಿಸಲು ಆಹ್ವಾನಿಸಿರಿ
عربي ಆಂಗ್ಲ ಉರ್ದು
ಇಸ್ಲಾಂ ಧರ್ಮವನ್ನು ಐದು (ಸ್ತಂಭಗಳ) ಮೇಲೆ ನಿರ್ಮಿಸಲಾಗಿದೆ
عربي ಆಂಗ್ಲ ಉರ್ದು
ಯಾರು ಇಸ್ಲಾಂ ಧರ್ಮದಲ್ಲಿ ಒಳಿತು ಮಾಡುತ್ತಾನೋ, ಅವನನ್ನು ಅಜ್ಞಾನ ಕಾಲದಲ್ಲಿ ಮಾಡಿದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುವುದಿಲ್ಲ. ಆದರೆ ಯಾರು ಇಸ್ಲಾಂ ಧರ್ಮದಲ್ಲಿ ಕೆಡುಕು ಮಾಡುತ್ತಾನೋ, ಅವನನ್ನು ಹಿಂದಿನ ಮತ್ತು ನಂತರದ ದುಷ್ಕರ್ಮಗಳಿಗಾಗಿ ಶಿಕ್ಷಿಸಲಾಗುತ್ತದೆ
عربي ಆಂಗ್ಲ ಉರ್ದು
ಅವನು ಹೇಳಿದ್ದು ಸತ್ಯವಾಗಿದ್ದರೆ ಅವನು ಯಶಸ್ವಿಯಾದನು
عربي ಆಂಗ್ಲ ಉರ್ದು
ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ಸಾಕ್ಷ್ಯ ವಹಿಸುವ, ನಮಾಝ್ ಸಂಸ್ಥಾಪಿಸುವ ಮತ್ತು ಝಕಾತ್ ನೀಡುವ ತನಕ ಜನರೊಂದಿಗೆ ಹೋರಾಡಲು ನನಗೆ ಆಜ್ಞಾಪಿಸಲಾಗಿದೆ
عربي ಆಂಗ್ಲ ಉರ್ದು
ಪರಸ್ಪರ ಪ್ರೀತಿ, ಕರುಣೆ ಮತ್ತು ಸಹಾನುಭೂತಿ ತೋರುವುದರಲ್ಲಿ ಸತ್ಯವಿಶ್ವಾಸಿಗಳ ಉದಾಹರಣೆಯು ಒಂದು ದೇಹದಂತೆ. ಅದರ ಒಂದು ಅಂಗವು ನೋವಿನಿಂದ ಬಳಲುವಾಗ, ದೇಹದ ಉಳಿದೆಲ್ಲಾ ಭಾಗಗಳು ನಿದ್ರಾಹೀನತೆ ಮತ್ತು ಜ್ವರದ ಮೂಲಕ ಅದಕ್ಕೆ ಸ್ಪಂದಿಸುತ್ತವೆ
عربي ಆಂಗ್ಲ ಉರ್ದು
ಅವರು ಒಂದು ದಿನವೂ, 'ಓ ನನ್ನ ಪರಿಪಾಲಕನೇ! ಪ್ರತಿಫಲ ದಿನದಂದು ನನ್ನ ಪಾಪಗಳನ್ನು ಕ್ಷಮಿಸು' ಎಂದು ಹೇಳಿಲ್ಲ
عربي ಆಂಗ್ಲ ಉರ್ದು
ಶೈತಾನನು ನಿಮ್ಮಲ್ಲೊಬ್ಬನ ಬಳಿಗೆ ಬಂದು ಕೇಳುತ್ತಾನೆ: "ಇದನ್ನು ಸೃಷ್ಟಿಸಿದ್ದು ಯಾರು? ಇದನ್ನು ಸೃಷ್ಟಿಸಿದ್ದು ಯಾರು?" ಹೀಗೆ ಅವನು "ನಿನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಸೃಷ್ಟಿಸಿದ್ದು ಯಾರು?" ಎಂದು ಕೇಳುವ ತನಕ ಮುಂದುವರಿಯುತ್ತಾನೆ. ಯಾರಿಗಾದರೂ ಇಂತಹ ಅನುಭವವಾದರೆ ಅವನು ಅಲ್ಲಾಹನಲ್ಲಿ ಅಭಯ ಯಾಚಿಸಿ ಅಲ್ಲಿಯೇ ನಿಂತುಬಿಡಲಿ
عربي ಆಂಗ್ಲ ಉರ್ದು
ನಿಶ್ಚಯವಾಗಿಯೂ, ಒಳಿತಿನ ವಿಷಯದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗೆ ಅನ್ಯಾಯ ಮಾಡುವುದಿಲ್ಲ. ಒಳಿತು ಮಾಡಿದ್ದಕ್ಕಾಗಿ ಅವನಿಗೆ ಇಹಲೋಕದಲ್ಲಿ (ಜೀವನೋಪಾಯವನ್ನು) ನೀಡಲಾಗುತ್ತದೆ ಮತ್ತು ಪರಲೋಕದಲ್ಲೂ ಪ್ರತಿಫಲ ನೀಡಲಾಗುತ್ತದೆ
عربي ಆಂಗ್ಲ ಉರ್ದು
ನೀನು ಹಿಂದೆ ಮಾಡಿದ ಒಳಿತುಗಳೊಂದಿಗೇ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವೆ
عربي ಆಂಗ್ಲ ಉರ್ದು
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)—ಅವರು ಸತ್ಯವಂತರು ಮತ್ತು ಸತ್ಯವಂತರೆಂದು ಅಂಗೀಕರಿಸಲ್ಪಟ್ಟವರು—ತಿಳಿಸಿದರು: ನಿಶ್ಚಯವಾಗಿಯೂ, ನಿಮ್ಮಲ್ಲಿ ಪ್ರತಿಯೊಬ್ಬನ ಸೃಷ್ಟಿಯನ್ನು ಅವನ ತಾಯಿಯ ಉದರದಲ್ಲಿ ನಲ್ವತ್ತು ದಿನ-ರಾತ್ರಿಗಳ ಕಾಲ 'ನುತ್ಫ'ದ (ವೀರ್ಯದ) ರೂಪದಲ್ಲಿ ಜೋಡಿಸಿಡಲಾಗುತ್ತದೆ
عربي ಆಂಗ್ಲ ಉರ್ದು
ನಾನು ಬನೂ ಸಅದ್ ಗೋತ್ರಕ್ಕೆ ಸೇರಿದ ದಿಮಾಮ್ ಬಿನ್ ಸಅಲಬ
عربي ಆಂಗ್ಲ ಉರ್ದು
ಯಹೂದಿಗಳು (ಅಲ್ಲಾಹನ) ಕೋಪಕ್ಕೆ ಪಾತ್ರರಾದವರು ಮತ್ತು ಕ್ರೈಸ್ತರು ದಾರಿತಪ್ಪಿದವರು
عربي ಆಂಗ್ಲ ಉರ್ದು
ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯ ಆರಾಧ್ಯರಿಲ್ಲ ಎಂದು ಹೇಳಿರಿ. ಪುನರುತ್ಥಾನ ದಿನದಂದು ನಾನು ಅದರ ಮೂಲಕ ನಿಮ್ಮ ಪರವಾಗಿ ಸಾಕ್ಷಿ ಹೇಳುವೆನು
عربي ಆಂಗ್ಲ ಉರ್ದು
ನೀವು ಏನು ಹೇಳುತ್ತಿದ್ದೀರೋ ಮತ್ತು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಬಹಳ ಸುಂದರವಾಗಿದೆ. ನಾವು ಮಾಡಿದ ತಪ್ಪುಗಳಿಗೆ ಏನಾದರೂ ಪರಿಹಾರವಿದೆಯೇ ಎಂದು ತಿಳಿಸಿ
عربي ಆಂಗ್ಲ ಉರ್ದು