عَنْ عَمْرِو بْنُ سُلَيْمٍ الأَنْصَارِيُّ قَالَ: أَشْهَدُ عَلَى أَبِي سَعِيدٍ قَالَ: أَشْهَدُ عَلَى رَسُولِ اللَّهِ صَلَّى اللهُ عَلَيْهِ وَسَلَّمَ قَالَ:
«الغُسْلُ يَوْمَ الجُمُعَةِ وَاجِبٌ عَلَى كُلِّ مُحْتَلِمٍ، وَأَنْ يَسْتَنَّ، وَأَنْ يَمَسَّ طِيبًا إِنْ وَجَدَ».
[صحيح] - [متفق عليه] - [صحيح البخاري: 880]
المزيــد ...
ಅಮ್ರ್ ಬಿನ್ ಸುಲೈಮ್ ಅನ್ಸಾರಿ ರಿಂದ ವರದಿ. ಅವರು ಹೇಳಿದರು: ಅಬೂ ಸಈದ್ ಹೀಗೆ ಹೇಳಿದ್ದರು ಎಂಬುದಕ್ಕೆ ನಾನು ಸಾಕ್ಷಿಯಾಗಿದ್ದೇನೆ. ಅವರು (ಅಬೂ ಸಈದ್) ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳಿದ್ದರು ಎಂಬುದಕ್ಕೆ ನಾನು ಸಾಕ್ಷಿಯಾಗಿದ್ದೇನೆ:
"ಹರೆಯ ತಲುಪಿದ ಎಲ್ಲರಿಗೂ ಶುಕ್ರವಾರ ಸ್ನಾನ ಮಾಡುವುದು, ಹಲ್ಲು ಸ್ವಚ್ಛ ಮಾಡುವುದು ಮತ್ತು ಲಭ್ಯವಿದ್ದರೆ ಸುಗಂಧ ದ್ರವ್ಯವನ್ನು ಹಚ್ಚುವುದು ಕಡ್ಡಾಯವಾಗಿದೆ."
[صحيح] - [متفق عليه] - [صحيح البخاري - 880]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಜುಮಾ ನಮಾಝ್ ಕಡ್ಡಾಯವಿರುವ, ಪುರುಷರು ಮತ್ತು ಪ್ರೌಢರಾದ ಎಲ್ಲಾ ಮುಸ್ಲಿಮರಿಗೂ ಶುಕ್ರವಾರ ಸ್ನಾನ ಮಾಡುವುದು ಕಡ್ಡಾಯದಂತೆ ಪ್ರಬಲವಾಗಿದೆ. ಅದೇ ರೀತಿ ಹಲ್ಲುಜ್ಜುವ ಕಡ್ಡಿ ಮುಂತಾದವುಗಳಿಂದ ಹಲ್ಲುಗಳನ್ನು ಸ್ವಚ್ಛ ಮಾಡುವುದು ಕೂಡ. ಅದೇ ರೀತಿ ಯಾವುದೇ ಉತ್ತಮ ಪರಿಮಳವಿರುವ ಸುಗಂಧ ದ್ರವ್ಯವನ್ನು ಹಚ್ಚುವುದು ಕೂಡ.