عَنْ عَبْدِ اللَّهِ بْنِ عَمْرٍو رَضِيَ اللَّهُ عَنْهُمَا عَنِ النَّبِيِّ صَلَّى اللهُ عَلَيْهِ وَسَلَّمَ قَالَ:
«المُسْلِمُ مَنْ سَلِمَ المُسْلِمُونَ مِنْ لِسَانِهِ وَيَدِهِ، وَالمُهَاجِرُ مَنْ هَجَرَ مَا نَهَى اللَّهُ عَنْهُ».
[صحيح] - [متفق عليه] - [صحيح البخاري: 10]
المزيــد ...
ಅಬ್ದುಲ್ಲಾ ಬಿನ್ ಅಮ್ರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
“ಯಾರ ನಾಲಗೆ ಮತ್ತು ಕೈಯಿಂದ ಇತರ ಮುಸಲ್ಮಾನರು ಸುರಕ್ಷಿತರೋ ಅವನೇ ಮುಸ್ಲಿಮ್. ಯಾರು ಅಲ್ಲಾಹು ನಿಷೇಧಿಸಿದ್ದನ್ನು ತೊರೆಯುತ್ತಾನೋ ಅವನೇ ಮುಹಾಜಿರ್."
[صحيح] - [متفق عليه] - [صحيح البخاري - 10]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರ ನಾಲಗೆಯಿಂದ ಇತರ ಮುಸಲ್ಮಾನರು ಸುರಕ್ಷಿತರೋ, ಅವನೇ ಇಸ್ಲಾಮನ್ನು ಪೂರ್ಣವಾಗಿ ಅಳವಡಿಸಿಕೊಂಡ ಮುಸ್ಲಿಂ. ಅಂದರೆ ಅವನು ಯಾರನ್ನೂ ನಿಂದಿಸುವುದಿಲ್ಲ, ಶಪಿಸುವುದಿಲ್ಲ, ದೂಷಿಸುವುದಿಲ್ಲ, ಅಥವಾ ನಾಲಗೆಯ ಮೂಲಕ ಅವರಿಗೆ ಯಾವುದೇ ರೀತಿಯ ತೊಂದರೆ ಕೊಡುವುದಿಲ್ಲ. ಹಾಗೆಯೇ ಅವರು ಅವನ ಕೈಯಿಂದಲೂ ಸುರಕ್ಷಿತರಾಗಿರುತ್ತಾರೆ. ಅಂದರೆ ಅವನು ಇತರರ ಮೇಲೆ ಅತಿರೇಕವೆಸಗುವುದು, ಇತರರ ಸಂಪತ್ತನ್ನು ಅನ್ಯಾಯವಾಗಿ ತಿನ್ನುವುದು ಮುಂತಾದ ಯಾವುದನ್ನೂ ಮಾಡುವುದಿಲ್ಲ. ಮುಹಾಜಿರ್ (ಅಲ್ಲಾಹನ ಮಾರ್ಗದಲ್ಲಿ ವಲಸೆ ಹೋದವನು) ಯಾರೆಂದರೆ ಅಲ್ಲಾಹು ನಿಷೇಧಿಸಿದ್ದನ್ನು ತೊರೆದವನು.