عن عمران بن حصين رضي الله عنه قال: كَانَتْ بِي بَوَاسِيرُ، فَسَأَلْتُ النَّبِيَّ صَلَّى اللهُ عَلَيْهِ وَسَلَّمَ عَنِ الصَّلَاةِ، فَقَالَ:
«صَلِّ قَائِمًا، فَإِنْ لَمْ تَسْتَطِعْ فَقَاعِدًا، فَإِنْ لَمْ تَسْتَطِعْ فَعَلَى جَنْبٍ».
[صحيح] - [رواه البخاري] - [صحيح البخاري: 1117]
المزيــد ...
ಇಮ್ರಾನ್ ಬಿನ್ ಹುಸೈನ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:ನನಗೆ ಮೂಲವ್ಯಾಧಿ ಇತ್ತು ಆದ್ದರಿಂದ ನಾನು ನಮಾಝ್ ನಿರ್ವಹಿಸುವ ಬಗ್ಗೆ ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೇಳಿದಾಗ, ಅವರು ಹೇಳಿದರು:
"ನಿಂತು ನಮಾಝ್ ನಿರ್ವಹಿಸಿ, ಅದು ಸಾಧ್ಯವಾಗದಿದ್ದರೆ ಕುಳಿತು ನಿರ್ವಹಿಸಿ, ಅದು ಕೂಡ ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಿ."
[صحيح] - [رواه البخاري] - [صحيح البخاري - 1117]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ನಮಾಝನ್ನು ಮೂಲವಾಗಿ ನಿಂತುಕೊಂಡೇ ನಿರ್ವಹಿಸಬೇಕಾಗಿದೆ. ಆದರೆ ನಿಂತು ನಮಾಝ್ ನಿರ್ವಹಿಸಲು ಸಾಧ್ಯವಾಗದಿದ್ದರೆ, ಕುಳಿತು ನಿರ್ವಹಿಸಬೇಕು. ಕುಳಿತು ನಮಾಝ್ ನಿರ್ವಹಿಸಲು ಸಾಧ್ಯವಾಗದಿದ್ದರೆ ಮಲಗಿ ನಿರ್ವಹಿಸಬೇಕು.