عَنْ عَائِشَةَ أُمِّ المؤْمنينَ رَضيَ اللهُ عنها قَالَت: قَالَ النَّبِيُّ صَلَّى اللهُ عَلَيْهِ وَسَلَّمَ:
«تُقْطَعُ اليَدُ فِي رُبُعِ دِينَارٍ فَصَاعِدًا».
[صحيح] - [متفق عليه] - [صحيح البخاري: 6789]
المزيــد ...
ಸತ್ಯವಿಶ್ವಾಸಿಗಳ ಮಾತೆ ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಕಾಲು ದೀನಾರ್ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯವನ್ನು ಕದ್ದರೆ ಕೈಯನ್ನು ಕತ್ತರಿಸಲಾಗುವುದು."
[صحيح] - [متفق عليه] - [صحيح البخاري - 6789]
ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಕಳ್ಳನು ಕಾಲು ದೀನಾರ್ ಚಿನ್ನ ಅಥವಾ ಅದಕ್ಕಿಂತ ಹೆಚ್ಚಿನ ಮೌಲ್ಯದ ವಸ್ತುವನ್ನು ಕದ್ದರೆ ಅವನ ಕೈಯನ್ನು ಕತ್ತರಿಸಲಾಗುವುದು. ಇದು 1.06 ಗ್ರಾಂ ಚಿನ್ನದ ಮೌಲ್ಯಕ್ಕೆ ಸಮಾನವಾಗಿದೆ.