عَنْ أَبِي مُوسَى رضي الله عنه قَالَ:
سُئِلَ رَسُولُ اللهِ صَلَّى اللهُ عَلَيْهِ وَسَلَّمَ عَنِ الرَّجُلِ يُقَاتِلُ شَجَاعَةً، وَيُقَاتِلُ حَمِيَّةً، وَيُقَاتِلُ رِيَاءً، أَيُّ ذَلِكَ فِي سَبِيلِ اللهِ؟ فَقَالَ رَسُولُ اللهِ صَلَّى اللهُ عَلَيْهِ وَسَلَّمَ: «مَنْ قَاتَلَ لِتَكُونَ كَلِمَةُ اللهِ هِيَ الْعُلْيَا، فَهُوَ فِي سَبِيلِ اللهِ».
[صحيح] - [متفق عليه] - [صحيح مسلم: 1904]
المزيــد ...
ಅಬೂ ಮೂಸಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
ಅಲ್ಲಾಹನ ಸಂದೇಶವಾಹಕರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಶೌರ್ಯಕ್ಕಾಗಿ ಹೋರಾಡುವ, ಕೋಮುವಾದಕ್ಕಾಗಿ ಹೋರಾಡುವ, ಮತ್ತು ತೋರಿಕೆಗಾಗಿ ಹೋರಾಡುವ ವ್ಯಕ್ತಿಯ ಬಗ್ಗೆ—ಇವರಲ್ಲಿ ಅಲ್ಲಾಹನ ಮಾರ್ಗದಲ್ಲಿರುವವರು ಯಾರು? ಎಂದು ಕೇಳಲಾಯಿತು. ಆಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: "ಅಲ್ಲಾಹನ ವಚನವು ಸರ್ವೋಚ್ಛವಾಗಬೇಕೆಂದು ಯಾರು ಹೋರಾಡುತ್ತಾರೋ ಅವರೇ ಅಲ್ಲಾಹನ ಮಾರ್ಗದಲ್ಲಿರುವವರು."
[صحيح] - [متفق عليه] - [صحيح مسلم - 1904]
ಪ್ರವಾದಿಯವರೊಡನೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಯೋಧರ ವಿಭಿನ್ನ ಉದ್ದೇಶಗಳ ಬಗ್ಗೆ ಕೇಳಲಾಯಿತು. ಶೌರ್ಯಕ್ಕಾಗಿ ಹೋರಾಡುವ, ಕೋಮುವಾದಕ್ಕಾಗಿ ಹೋರಾಡುವ, ಜನರ ಪ್ರಶಂಸೆಗಾಗಿ ಹೋರಾಡುವ ಮತ್ತು ಇತರ ಉದ್ದೇಶಗಳಿಗಾಗಿ ಹೋರಾಡುವ ಜನರಿರುವಾಗ ಇವರಲ್ಲಿ ಅಲ್ಲಾಹನ ಮಾರ್ಗದಲ್ಲಿರುವವರು ಯಾರು? ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸಿದ್ದೇನೆಂದರೆ, ಅಲ್ಲಾಹನ ವಚನವು ಸರ್ವೋಚ್ಛವಾಗಬೇಕು ಎಂಬ ಉದ್ದೇಶದಿಂದ ಯಾರು ಹೋರಾಡುತ್ತಾರೋ ಅವರೇ ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರು.