+ -

عن المِقدام بن معدي كرب رضي الله عنه عن النبي صلى الله عليه وسلم قال:
«إِذَا أَحَبَّ الرَّجُلُ أَخَاهُ فَلْيُخْبِرْهُ أَنَّهُ يُحِبُّهُ».

[صحيح] - [رواه أبو داود والترمذي والنسائي في السنن الكبرى وأحمد] - [سنن أبي داود: 5124]
المزيــد ...

ಮಿಕ್‌ದಾಮ್ ಬಿನ್ ಮಅದೀಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
“ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”

[صحيح] - [رواه أبو داود والترمذي والنسائي في السنن الكبرى وأحمد] - [سنن أبي داود - 5124]

ವಿವರಣೆ

ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸತ್ಯವಿಶ್ವಾಸಿಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮತ್ತು ಅವರ ನಡುವೆ ಪ್ರೀತಿಯನ್ನು ಹಬ್ಬಿಸುವ ಒಂದು ಮಾರ್ಗವನ್ನು ವಿವರಿಸಿದ್ದಾರೆ. ಅದೇನೆಂದರೆ, ಒಬ್ಬ ವ್ಯಕ್ತಿ ತನ್ನ ಮುಸ್ಲಿಂ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸುವುದು.

ಹದೀಸಿನ ಪ್ರಯೋಜನಗಳು

  1. ಭೌತಿಕ ಹಿತಾಸಕ್ತಿಯಿಲ್ಲದೆ, ಕೇವಲ ಅಲ್ಲಾಹನಿಗಾಗಿ ಮಾತ್ರ ಪ್ರೀತಿಸುವುದರ ಶ್ರೇಷ್ಠತೆಯನ್ನು ಈ ಹದೀಸ್ ವ್ಯಕ್ತಪಡಿಸುತ್ತದೆ.
  2. ಒಬ್ಬ ವ್ಯಕ್ತಿ ಅಲ್ಲಾಹನಿಗಾಗಿ ಇನ್ನೊಬ್ಬ ವ್ಯಕ್ತಿಯನ್ನು ಪ್ರೀತಿಸಿದರೆ, ಅದನ್ನು ಅವನಿಗೆ ತಿಳಿಸುವುದು ಅಪೇಕ್ಷಣೀಯವಾಗಿದೆ. ಇದರಿಂದ ಅವರ ನಡುವೆ ಪ್ರೀತಿ ಮತ್ತು ಅನ್ಯೋನ್ಯತೆಯು ಹೆಚ್ಚುತ್ತದೆ.
  3. ಸತ್ಯವಿಶ್ವಾಸಿಗಳ ನಡುವೆ ಪ್ರೀತಿ ಹರಡುವುದರಿಂದ ಸತ್ಯವಿಶ್ವಾಸದ ಆಧಾರದಲ್ಲಿರುವ ಸಹೋದರತೆಯು ಪ್ರಬಲವಾಗುವುದು ಮಾತ್ರವಲ್ಲದೆ, ಮುಸ್ಲಿಂ ಸಮಾಜದಲ್ಲಿ ಒಡಕು ಹಾಗೂ ಭಿನ್ನಮತಗಳು ನಿವಾರಣೆಯಾಗುತ್ತವೆ.
ಅನುವಾದ: ಆಂಗ್ಲ ಉರ್ದು ಸ್ಪ್ಯಾನಿಷ್ ಇಂಡೋನೇಷಿಯನ್ ಉಯ್ಘರ್ ಬಂಗಾಳಿ ಫ್ರೆಂಚ್ ತುರ್ಕಿ ರಷ್ಯನ್ ಬೊಸ್ನಿಯನ್ ಸಿಂಹಳೀಯ ಹಿಂದಿ ಚೀನೀ ಪರ್ಷಿಯನ್ ವಿಯೆಟ್ನಾಮೀಸ್ ಟ್ಯಾಗಲಾಗ್ ಕುರ್ದಿಷ್ ಹೌಸಾ ಪೋರ್ಚುಗೀಸ್ ಮಲಯಾಳಂ ತೆಲುಗು ಸ್ವಾಹಿಲಿ ತಮಿಳು ಬರ್ಮೀ ಥಾಯ್ ಜರ್ಮನ್ ಜಪಾನೀ ಪಶ್ತೋ الأسامية الألبانية السويدية الأمهرية الهولندية الغوجاراتية القيرقيزية النيبالية اليوروبا الليتوانية الدرية الصربية الصومالية الطاجيكية الكينياروندا الرومانية المجرية التشيكية الموري المالاجاشية الفولانية الإيطالية الأورومو الولوف البلغارية الأذربيجانية الأكانية الأوزبكية الأوكرانية الجورجية المقدونية
ಅನುವಾದಗಳನ್ನು ತೋರಿಸಿ
ಇನ್ನಷ್ಟು