عن المِقدام بن معدي كرب رضي الله عنه عن النبي صلى الله عليه وسلم قال:
«إِذَا أَحَبَّ الرَّجُلُ أَخَاهُ فَلْيُخْبِرْهُ أَنَّهُ يُحِبُّهُ».
[صحيح] - [رواه أبو داود والترمذي والنسائي في السنن الكبرى وأحمد] - [سنن أبي داود: 5124]
المزيــد ...
ಮಿಕ್‌ದಾಮ್ ಬಿನ್ ಮಅದೀಕರಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
“ಒಬ್ಬ ವ್ಯಕ್ತಿ ತನ್ನ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸಬೇಕು.”
[صحيح] - [رواه أبو داود والترمذي والنسائي في السنن الكبرى وأحمد] - [سنن أبي داود - 5124]
ಈ ಹದೀಸಿನಲ್ಲಿ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸತ್ಯವಿಶ್ವಾಸಿಗಳ ನಡುವಿನ ಬಾಂಧವ್ಯವನ್ನು ಬಲಪಡಿಸುವ ಮತ್ತು ಅವರ ನಡುವೆ ಪ್ರೀತಿಯನ್ನು ಹಬ್ಬಿಸುವ ಒಂದು ಮಾರ್ಗವನ್ನು ವಿವರಿಸಿದ್ದಾರೆ. ಅದೇನೆಂದರೆ, ಒಬ್ಬ ವ್ಯಕ್ತಿ ತನ್ನ ಮುಸ್ಲಿಂ ಸಹೋದರನನ್ನು ಪ್ರೀತಿಸಿದರೆ, ತಾನು ಅವನನ್ನು ಪ್ರೀತಿಸುತ್ತೇನೆಂದು ಅವನಿಗೆ ತಿಳಿಸುವುದು.