عَنْ أَبِي قَتَادَةَ رضي الله عنه قَالَ: قَالَ رَسُولُ اللهِ صَلَّى اللهُ عَلَيْهِ وَسَلَّمَ:
«لَا يُمْسِكَنَّ أَحَدُكُمْ ذَكَرَهُ بِيَمِينِهِ وَهُوَ يَبُولُ، وَلَا يَتَمَسَّحْ مِنَ الْخَلَاءِ بِيَمِينِهِ، وَلَا يَتَنَفَّسْ فِي الْإِنَاءِ».
[صحيح] - [متفق عليه] - [صحيح مسلم: 267]
المزيــد ...
ಅಬೂ ಕತಾದ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಿಮ್ಮಲ್ಲೊಬ್ಬರು ಮೂತ್ರ ವಿಸರ್ಜನೆ ಮಾಡುವಾಗ ತನ್ನ ಜನನಾಂಗವನ್ನು ಬಲಗೈಯಲ್ಲಿ ಹಿಡಿಯಬಾರದು, ಬಲಗೈಯಿಂದ ಶೌಚವನ್ನು ಒರೆಸಬಾರದು, ಮತ್ತು ಪಾತ್ರೆಯೊಳಗೆ ಶ್ವಾಸ ಬಿಡಬಾರದು."
[صحيح] - [متفق عليه] - [صحيح مسلم - 267]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಕೆಲವು ಶಿಷ್ಟಾಚಾರಗಳನ್ನು ವಿವರಿಸಿದ್ದಾರೆ. ಪುರುಷರು ಮೂತ್ರ ವಿಸರ್ಜನೆ ಮಾಡುವಾಗ ತಮ್ಮ ಜನನಾಂಗವನ್ನು ಬಲಗೈಯಲ್ಲಿ ಹಿಡಿಯುವುದನ್ನು ನಿಷೇಧಿಸಿದರು. ಮುಂದ್ವಾರದ ಅಥವಾ ಗುದದ್ವಾರದ ಮಾಲಿನ್ಯವನ್ನು ಬಲಗೈಯಿಂದ ಸ್ವಚ್ಛಗೊಳಿಸುವುದನ್ನು ನಿಷೇಧಿಸಿದರು. ಏಕೆಂದರೆ, ಬಲಗೈ ಗೌರವಾರ್ಹ ವಿಷಯಗಳಿಗೆ ಇರುವುದಾಗಿದೆ. ಅದೇ ರೀತಿ, ಮನುಷ್ಯನು ಕುಡಿಯುವ ಪಾತ್ರೆಯೊಳಗೆ ಶ್ವಾಸ ಬಿಡುವುದನ್ನು ನಿಷೇಧಿಸಿದರು.