عَنْ أَبِي هُرَيْرَةَ رضي الله عنه عَنِ النَّبِيِّ صَلَّى اللهُ عَلَيْهِ وَسَلَّمَ قَالَ:
«أَمَا يَخْشَى أَحَدُكُمْ - أَوْ: لاَ يَخْشَى أَحَدُكُمْ - إِذَا رَفَعَ رَأْسَهُ قَبْلَ الإِمَامِ، أَنْ يَجْعَلَ اللَّهُ رَأْسَهُ رَأْسَ حِمَارٍ، أَوْ يَجْعَلَ اللَّهُ صُورَتَهُ صُورَةَ حِمَارٍ».
[صحيح] - [متفق عليه] - [صحيح البخاري: 691]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಇಮಾಮರು ತಲೆ ಎತ್ತುವುದಕ್ಕಿಂತ ಮೊದಲು ತಲೆ ಎತ್ತುವವರು, ಅಲ್ಲಾಹು ಅವರ ತಲೆಯನ್ನು ಕತ್ತೆಯ ತಲೆಯಾಗಿ, ಅಥವಾ ಅವರ ರೂಪವನ್ನು ಕತ್ತೆಯ ರೂಪವಾಗಿ ಮಾರ್ಪಡಿಸುವನು ಎಂದು ಭಯಪಡುವುದಿಲ್ಲವೇ?"
[صحيح] - [متفق عليه] - [صحيح البخاري - 691]
ಇಮಾಮರು ತಲೆ ಎತ್ತುವುದಕ್ಕಿಂತ ಮೊದಲು ತಲೆ ಎತ್ತುವವರಿಗೆ, ಅಲ್ಲಾಹು ಅವರ ತಲೆಯನ್ನು ಕತ್ತೆಯ ತಲೆಯಾಗಿ, ಅಥವಾ ಅವರ ರೂಪವನ್ನು ಕತ್ತೆಯ ರೂಪವಾಗಿ ಪರಿವರ್ತಿಸುವನು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಉಗ್ರ ಎಚ್ಚರಿಕೆಯನ್ನು ನೀಡುತ್ತಿದ್ದಾರೆ.