عَنْ أَبِي هُرَيْرَةَ رضي الله عنه قَالَ:
كَانَ رَسُولُ اللهِ صَلَّى اللهُ عَلَيْهِ وَسَلَّمَ، إِذَا كَبَّرَ فِي الصَّلَاةِ، سَكَتَ هُنَيَّةً قَبْلَ أَنْ يَقْرَأَ، فَقُلْتُ: يَا رَسُولَ اللهِ بِأَبِي أَنْتَ وَأُمِّي أَرَأَيْتَ سُكُوتَكَ بَيْنَ التَّكْبِيرِ وَالْقِرَاءَةِ، مَا تَقُولُ؟ قَالَ «أَقُولُ: اللهُمَّ بَاعِدْ بَيْنِي وَبَيْنَ خَطَايَايَ كَمَا بَاعَدْتَ بَيْنَ الْمَشْرِقِ وَالْمَغْرِبِ، اللهُمَّ نَقِّنِي مِنْ خَطَايَايَ كَمَا يُنَقَّى الثَّوْبُ الْأَبْيَضُ مِنَ الدَّنَسِ، اللهُمَّ اغْسِلْنِي مِنْ خَطَايَايَ بِالثَّلْجِ وَالْمَاءِ وَالْبَرَدِ».
[صحيح] - [متفق عليه] - [صحيح مسلم: 598]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಕುರ್‌ಆನ್ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ನಾನು ಹೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ನನ್ನ ತಂದೆ-ತಾಯಿಗಳನ್ನು ನಿಮಗೆ ಅರ್ಪಿಸುತ್ತಿದ್ದೇನೆ. ತಕ್ಬೀರ್ ಮತ್ತು ಕುರ್‌ಆನ್ ಪಠಣದ ನಡುವೆ ನೀವು ಮೌನವಾಗಿರುತ್ತೀರಿ. ಆಗ ನೀವು ಏನು ಪಠಿಸುತ್ತೀರಿ? ಅವರು ಉತ್ತರಿಸಿದರು: "ನಾನು ಹೀಗೆ ಹೇಳುತ್ತೇನೆ: ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು. ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನ ಪಾಪಗಳಿಂದ ನನ್ನನ್ನು ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು."
[صحيح] - [متفق عليه] - [صحيح مسلم - 598]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನಮಾಝಿಗಾಗಿ ತಕ್ಬೀರ್ ಹೇಳಿದರೆ, ಸೂರ ಫಾತಿಹ ಪಠಿಸುವುದಕ್ಕೆ ಮೊದಲು ಸ್ವಲ್ಪ ಹೊತ್ತು ಮೌನವಾಗಿರುತ್ತಿದ್ದರು. ಅವರು ಕೆಲವು ಪ್ರಾರ್ಥನೆಗಳನ್ನು ಪಠಿಸುವ ಮೂಲಕ ತಮ್ಮ ನಮಾಝನ್ನು ಆರಂಭಿಸುತ್ತಿದ್ದರು. ಈ ಪ್ರಾರ್ಥನೆಗಳಲ್ಲಿ ಒಂದು ಹೀಗಿದೆ: "ಓ ಅಲ್ಲಾಹ್! ಪೂರ್ವ ಮತ್ತು ಪಶ್ಚಿಮಗಳ ನಡುವೆ ಅಂತರವಿಟ್ಟಂತೆ ನನ್ನ ಮತ್ತು ನನ್ನ ಪಾಪಗಳ ನಡುವೆ ಅಂತರವಿಡು. ಓ ಅಲ್ಲಾಹ್! ಬಿಳಿಬಟ್ಟೆಯನ್ನು ಕೊಳೆಯಿಂದ ಶುಚಿಗೊಳಿಸುವಂತೆ ನನ್ನನ್ನು ನನ್ನ ಪಾಪಗಳಿಂದ ಶುಚಿಗೊಳಿಸು. ಓ ಅಲ್ಲಾಹ್! ಮಂಜು, ನೀರು ಮತ್ತು ಹಿಮದ ಮೂಲಕ ನನ್ನ ಪಾಪಗಳಿಂದ ನನ್ನನ್ನು ತೊಳೆದುಬಿಡು." ಅವರು ಅಲ್ಲಾಹನಲ್ಲಿ ಪ್ರಾರ್ಥಿಸುವುದೇನೆಂದರೆ, ಅವರ ಮತ್ತು ಪಾಪಗಳ ನಡುವೆ, ಅವರು ಅವುಗಳಲ್ಲಿ ಬಿದ್ದುಬಿಡದಂತೆ ಅಂತರವಿರಿಸಬೇಕು. ಅದು ಎಂತಹ ಅಂತರವಾಗಿರಬೇಕೆಂದರೆ, ಪೂರ್ವ ಮತ್ತು ಪಶ್ಚಿಮಗಳು ಹೇಗೆ ಎಂದೆಂದಿಗೂ ಸಂಧಿಸುವುದಿಲ್ಲವೋ ಹಾಗೆಯೇ ಇದು ಕೂಡ ಸಂಧಿಸಬಾರದು. ಇನ್ನು ಪಾಪದಲ್ಲಿ ಬಿದ್ದುಬಿಟ್ಟರೂ, ಬಿಳಿ ಬಟ್ಟೆಯಿಂದ ಕೊಳೆಯನ್ನು ನಿವಾರಿಸುವಂತೆ ಅವರನ್ನು ಅದರಿಂದ ಶುಚೀಕರಿಸಬೇಕು ಮತ್ತು ಅದನ್ನು ತೊಲಗಿಸಬೇಕು. ಅದೇ ರೀತಿ, ಅವರನ್ನು ಅವರ ಪಾಪಗಳಿಂದ ತೊಳೆಯಬೇಕು ಮತ್ತು ನೀರು, ಮಂಜು ಮತ್ತು ಹಿಮದಂತಹ ಶೈತ್ಯ ಶುದ್ಧೀಕರಣಗಳಿಂದ ಅದರ ಉಷ್ಣ ಮತ್ತು ತಾಪವನ್ನು ತಣ್ಣಗಾಗಿಸಬೇಕು.