عَن أَبِي أُمَامَةَ قَالَ: حَدَّثَنِي عَمْرُو بْنُ عَبَسَةَ رضي الله عنه أَنَّهُ سَمِعَ النَّبِيَّ صَلَّى اللَّهُ عَلَيْهِ وَسَلَّمَ يَقُولُ:
«أَقْرَبُ مَا يَكُونُ الرَّبُّ مِنَ العَبْدِ فِي جَوْفِ اللَّيْلِ الآخِرِ، فَإِنْ اسْتَطَعْتَ أَنْ تَكُونَ مِمَّنْ يَذْكُرُ اللَّهَ فِي تِلْكَ السَّاعَةِ فَكُنْ».
[صحيح] - [رواه أبو داود والترمذي والنسائي] - [سنن الترمذي: 3579]
المزيــد ...
ಅಬೂ ಉಮಾಮ ರಿಂದ ವರದಿ. ಅವರು ಹೇಳಿದರು: ಅಮ್ರ್ ಬಿನ್ ಅಬಸ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ನನಗೆ ತಿಳಿಸಿದರು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದ್ದರು:
"ಅಲ್ಲಾಹು ದಾಸನಿಗೆ ಅತಿನಿಕಟನಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ. ಆದ್ದರಿಂದ ಆ ಸಮಯದಲ್ಲಿ ಅಲ್ಲಾಹನನ್ನು ಸ್ಮರಿಸುವವರಲ್ಲಿ ಸೇರಲು ನಿನಗೆ ಸಾಧ್ಯವಾಗುವುದಾದರೆ ಸೇರಿಕೋ."
[صحيح] - [رواه أبو داود والترمذي والنسائي] - [سنن الترمذي - 3579]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಸರ್ವಶಕ್ತನಾದ ಪರಿಪಾಲಕನು (ಅಲ್ಲಾಹು) ದಾಸನಿಗೆ ಅತ್ಯಂತ ಹತ್ತಿರವಾಗುವುದು ರಾತ್ರಿಯ ಕೊನೆಯ ಮೂರನೇ ಭಾಗದಲ್ಲಿ. ಆದ್ದರಿಂದ ಓ ಸತ್ಯವಿಶ್ವಾಸಿಗಳೇ, ಆ ಸಮಯದಲ್ಲಿ ಅಲ್ಲಾಹನನ್ನು ಆರಾಧಿಸುವವರು, ನಮಾಝ್ ಮಾಡುವವರು, ಸ್ಮರಿಸುವವರು, ಪಶ್ಚಾತ್ತಾಪಪಡುವವರು ಮುಂತಾದವರೊಡನೆ ಸೇರಿಕೊಳ್ಳುವ ಭಾಗ್ಯ ಮತ್ತು ಸಾಮರ್ಥ್ಯ ನಿನಗೆ ದೊರಕಿದರೆ ಅವರೊಡನೆ ಸೇರಿಕೋ. ಏಕೆಂದರೆ ಅದು ಅತ್ಯಗತ್ಯವಾಗಿ ಸದುಪಯೋಗಪಡಿಸಬೇಕಾದ ಮತ್ತು ಪರಿಶ್ರಮಪಡಬೇಕಾದ ಸಮಯವಾಗಿದೆ.