عَنْ أَبِي هُرَيْرَةَ رَضيَ اللهُ عنهُ أَنَّ رَسُولَ اللهِ صَلَّى اللهُ عَلَيْهِ وَسَلَّمَ قَالَ:
«إِذَا تَوَضَّأَ الْعَبْدُ الْمُسْلِمُ -أَوِ الْمُؤْمِنُ- فَغَسَلَ وَجْهَهُ خَرَجَ مِنْ وَجْهِهِ كُلُّ خَطِيئَةٍ نَظَرَ إِلَيْهَا بِعَيْنَيْهِ مَعَ الْمَاءِ -أَوْ مَعَ آخِرِ قَطْرِ الْمَاءِ-، فَإِذَا غَسَلَ يَدَيْهِ خَرَجَ مِنْ يَدَيْهِ كُلُّ خَطِيئَةٍ كَانَ بَطَشَتْهَا يَدَاهُ مَعَ الْمَاءِ -أَوْ مَعَ آخِرِ قَطْرِ الْمَاءِ-، فَإِذَا غَسَلَ رِجْلَيْهِ خَرَجَتْ كُلُّ خَطِيئَةٍ مَشَتْهَا رِجْلَاهُ مَعَ الْمَاءِ -أَوْ مَعَ آخِرِ قَطْرِ الْمَاءِ- حَتَّى يَخْرُجَ نَقِيًّا مِنَ الذُّنُوبِ».
[صحيح] - [رواه مسلم] - [صحيح مسلم: 244]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹುವಿನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಒಬ್ಬ ಮುಸ್ಲಿಂ ದಾಸನು - ಅಥವಾ ಸತ್ಯವಿಶ್ವಾಸಿಯು - ವುಝೂ (ಶುದ್ಧೀಕರಣ) ಮಾಡಿ, ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಮುಖದಿಂದ ಹೊರಬರುತ್ತದೆ. ಅವನು ತನ್ನ ಕೈಗಳನ್ನು ತೊಳೆದಾಗ, ಅವನ ಕೈಗಳಿಂದ ಮಾಡಿದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕೈಗಳಿಂದ ಹೊರಬರುತ್ತದೆ. ಅವನು ತನ್ನ ಕಾಲುಗಳನ್ನು ತೊಳೆದಾಗ, ಅವನ ಕಾಲುಗಳಿಂದ ನಡೆದ ಪ್ರತಿಯೊಂದು ಕಿರಿಯ ಪಾಪವು ನೀರಿನೊಂದಿಗೆ - ಅಥವಾ ನೀರಿನ ಕೊನೆಯ ಹನಿಯೊಂದಿಗೆ - ಅವನ ಕಾಲುಗಳಿಂದ ಹೊರಬರುತ್ತದೆ. ಎಷ್ಟರವರೆಗೆಂದರೆ ಅವನು ಪಾಪಗಳಿಂದ ಶುದ್ಧನಾಗಿ ಹೊರಬರುವವರೆಗೆ."
[صحيح] - [رواه مسلم] - [صحيح مسلم - 244]
ಪ್ರವಾದಿಯವರು (ಅವರ ಮೇಲೆ ಅಲ್ಲಾಹುವಿನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಒಬ್ಬ ಮುಸ್ಲಿಂ ಅಥವಾ ಸತ್ಯವಿಶ್ವಾಸಿ ವುಝೂ ಮಾಡಿದಾಗ ಮತ್ತು ವುಝೂವಿನ ನಡುವೆ ತನ್ನ ಮುಖವನ್ನು ತೊಳೆದಾಗ, ಅವನು ತನ್ನ ಕಣ್ಣುಗಳಿಂದ ನೋಡಿದ ಪ್ರತಿಯೊಂದು ಕಿರಿಯ ಪಾಪವು ಕೆಳಗೆ ಬೀಳುವ ನೀರಿನೊಂದಿಗೆ ಅಥವಾ ನೀರಿನ ಕೊನೆಯ ಹನಿಯೊಂದಿಗೆ ಅವನ ಮುಖದಿಂದ ಹೊರಬರುತ್ತದೆ. ಅವನು ತನ್ನ ಕೈಗಳನ್ನು ತೊಳೆದಾಗ, ಅವನ ಕೈಗಳಿಂದ ಮಾಡಿದ ಪ್ರತಿಯೊಂದು ಕಿರಿಯ ಪಾಪವು ಆ ನೀರಿನೊಂದಿಗೆ ಅಥವಾ ನೀರಿನ ಕೊನೆಯ ಹನಿಯೊಂದಿಗೆ ಅವನ ಕೈಗಳಿಂದ ಹೊರಬರುತ್ತದೆ. ಅವನು ತನ್ನ ಕಾಲುಗಳನ್ನು ತೊಳೆದಾಗ, ಅವನ ಕಾಲುಗಳಿಂದ ನಡೆದ ಪ್ರತಿಯೊಂದು ಕಿರಿಯ ಪಾಪವು ಆ ನೀರಿನೊಂದಿಗೆ ಅಥವಾ ನೀರಿನ ಕೊನೆಯ ಹನಿಯೊಂದಿಗೆ ಅವನ ಕಾಲುಗಳಿಂದ ಹೊರಬರುತ್ತದೆ. ಎಲ್ಲಿಯವರೆಗೆಂದರೆ ವುಝೂ ಮುಗಿದ ನಂತರ ಅವನು ಕಿರಿಯ ಪಾಪಗಳಿಂದ ಶುದ್ಧನಾಗಿ ಬಿಡುತ್ತಾನೆ.