عَنْ أَبِي هُرَيْرَةَ رَضِيَ اللَّهُ عَنْهُ أَنَّ النَّبِيَّ صَلَّى اللهُ عَلَيْهِ وَسَلَّمَ قَالَ:
«مَا مِنْ يَوْمٍ يُصْبِحُ العِبَادُ فِيهِ إِلَّا مَلَكَانِ يَنْزِلاَنِ، فَيَقُولُ أَحَدُهُمَا: اللَّهُمَّ أَعْطِ مُنْفِقًا خَلَفًا، وَيَقُولُ الآخَرُ: اللَّهُمَّ أَعْطِ مُمْسِكًا تَلَفًا».
[صحيح] - [متفق عليه] - [صحيح البخاري: 1442]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ದಾಸರು ಬೆಳಗನ್ನು ಪ್ರವೇಶಿಸುವ ಪ್ರತಿ ದಿನವೂ ಎರಡು ದೇವದೂತರುಗಳು ಇಳಿದು ಬರುತ್ತಾರೆ. ಆಗ ಅವರಲ್ಲೊಬ್ಬರು ಹೇಳುವರು: ಓ ಅಲ್ಲಾಹ್! ಖರ್ಚು ಮಾಡುವವರಿಗೆ ಬದಲಿಯನ್ನು ನೀಡು. ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು."
[صحيح] - [متفق عليه] - [صحيح البخاري - 1442]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಸೂರ್ಯ ಉದಯಿಸುವ ಪ್ರತಿದಿನವೂ, ಇಬ್ಬರು ದೇವದೂತರುಗಳು ಇಳಿದು ಬಂದು ಘೋಷಿಸುವರು. ಅವರಲ್ಲೊಬ್ಬರು ಹೇಳುವರು:
ಓ ಅಲ್ಲಾಹ್! ಸತ್ಕರ್ಮಗಳಿಗೆ, ಕುಟುಂಬಕ್ಕೆ, ಅತಿಥಿಗಳಿಗೆ ಮತ್ತು ಸ್ವಯಂಪ್ರೇರಿತ ಉತ್ತಮ ಕಾರ್ಯಗಳಿಗೆ ಖರ್ಚು ಮಾಡುವವರಿಗೆ ಬದಲಿಯನ್ನು ನೀಡು, ಅವರು ಖರ್ಚು ಮಾಡಿದ್ದಕ್ಕೆ ಪ್ರತಿಯಾಗಿ ಅವರಿಗೆ ಒಳಿತು ಮತ್ತು ಸಮೃದ್ಧಿಯನ್ನು ದಯಪಾಲಿಸು.
ಇನ್ನೊಬ್ಬರು ಹೇಳುವರು: ಓ ಅಲ್ಲಾಹ್! (ಖರ್ಚು ಮಾಡದೆ) ತಡೆಹಿಡಿಯುವವರಿಗೆ ಹಾನಿಯನ್ನು ನೀಡು ಮತ್ತು ಹಕ್ಕುದಾರರಿಗೆ ಕೊಡದೆ ಅವರು ತಡೆಹಿಡಿದ ಆ ಸಂಪತ್ತನ್ನು ನಾಶಪಡಿಸು.