عَن عُمَرَ بنِ الخَطَّابِ رَضِيَ اللَّهُ عَنْهُ قال: سَمِعْتُ النَّبِيَّ صَلَّى اللَّهُ عَلَيْهِ وَسَلَّمَ يَقُولُ:
«لَا تُطْرُونِي كَمَا أَطْرَتِ النَّصَارَى ابْنَ مَرْيَمَ؛ فَإِنَّمَا أَنَا عَبْدُهُ، فَقُولُوا: عَبْدُ اللهِ وَرَسُولُهُ».
[صحيح] - [رواه البخاري] - [صحيح البخاري: 3445]
المزيــد ...
ಉಮರ್ ಬಿನ್ ಖತ್ತಾಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
“ಕ್ರೈಸ್ತರು ಮರ್ಯಮರ ಮಗನನ್ನು ಮಿತಿಮೀರಿ ಪ್ರಶಂಸಿಸಿದಂತೆ ನೀವು ನನ್ನನ್ನು ಮಿತಿಮೀರಿ ಪ್ರಶಂಸಿಸಬೇಡಿ. ಏಕೆಂದರೆ ನಾನು ಅಲ್ಲಾಹನ ಒಬ್ಬ ದಾಸ ಮಾತ್ರ. ಆದ್ದರಿಂದ ನೀವು ಅಲ್ಲಾಹನ ದಾಸ ಮತ್ತು ಸಂದೇಶವಾಹಕ ಎಂದು ಹೇಳಿರಿ.”
[صحيح] - [رواه البخاري] - [صحيح البخاري - 3445]
ತನ್ನನ್ನು ಪ್ರಶಂಸಿಸುವಾಗ ಮಿತಿಮೀರುವುದು ಮತ್ತು ಧರ್ಮವು ವಿಧಿಸಿದ ಎಲ್ಲೆಯನ್ನು ಮೀರುವುದು, ಅಲ್ಲಾಹನಿಗೆ ಮಾತ್ರ ಸೀಮಿತವಾಗಿರುವ ಗುಣಲಕ್ಷಣಗಳನ್ನು ಅಥವಾ ಅವನು ಮಾತ್ರ ಮಾಡುವ ಕ್ರಿಯೆಗಳನ್ನು ತನಗೆ ಸೇರಿಸಿ ಹೇಳುವುದು, ತನಗೆ ಆಗೋಚರ ಜ್ಞಾನವಿದೆಯೆಂದು ಹೇಳುವುದು, ಅಥವಾ ಅಲ್ಲಾಹನೊಂದಿಗೆ ತನ್ನನ್ನು ಕೂಡ ಕರೆದು ಪ್ರಾರ್ಥಿಸುವುದು ಮುಂತಾದ ಕ್ರಿಶ್ಚಿಯನ್ನರು ಈಸಾ ಬಿನ್ ಮರ್ಯಮ್ (ಅವರ ಮೇಲೆ ಶಾಂತಿಯಿರಲಿ) ರೊಡನೆ ಮಾಡಿದ್ದನ್ನು ತನ್ನೊಡನೆ ಮಾಡುವುದನ್ನು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿರೋಧಿಸುತ್ತಿದ್ದಾರೆ ನಂತರ, ತಾನು ಅಲ್ಲಾಹನ ಒಬ್ಬ ದಾಸ ಮಾತ್ರ ಎಂದು ಅವರು ವಿವರಿಸುತ್ತಾರೆ. ಅವರನ್ನು ಅಲ್ಲಾಹನ ದಾಸ ಮತ್ತು ಸಂದೇಶವಾಹಕ ಎಂದು ಕರೆಯಬೇಕೆಂದು ಆದೇಶಿಸುತ್ತಾರೆ.