عَنْ سَهْلُ بْنُ سَعْدٍ رَضِيَ اللَّهُ عَنْهُ أَنَّ رَسُولَ اللَّهِ صَلَّى اللهُ عَلَيْهِ وَسَلَّمَ قَالَ يَوْمَ خَيْبَرَ:
«لَأُعْطِيَنَّ هَذِهِ الرَّايَةَ غَدًا رَجُلًا يَفْتَحُ اللَّهُ عَلَى يَدَيْهِ، يُحِبُّ اللَّهَ وَرَسُولَهُ وَيُحِبُّهُ اللَّهُ وَرَسُولُهُ»، قَالَ: فَبَاتَ النَّاسُ يَدُوكُونَ لَيْلَتَهُمْ أَيُّهُمْ يُعْطَاهَا، فَلَمَّا أَصْبَحَ النَّاسُ غَدَوْا عَلَى رَسُولِ اللَّهِ صَلَّى اللهُ عَلَيْهِ وَسَلَّمَ كُلُّهُمْ يَرْجُو أَنْ يُعْطَاهَا، فَقَالَ: «أَيْنَ عَلِيُّ بْنُ أَبِي طَالِبٍ؟» فَقِيلَ: هُوَ يَا رَسُولَ اللَّهِ يَشْتَكِي عَيْنَيْهِ، قَالَ: «فَأَرْسِلُوا إِلَيْهِ»، فَأُتِيَ بِهِ فَبَصَقَ رَسُولُ اللَّهِ صَلَّى اللهُ عَلَيْهِ وَسَلَّمَ فِي عَيْنَيْهِ وَدَعَا لَهُ، فَبَرَأَ حَتَّى كَأَنْ لَمْ يَكُنْ بِهِ وَجَعٌ، فَأَعْطَاهُ الرَّايَةَ، فَقَالَ عَلِيٌّ: يَا رَسُولَ اللَّهِ، أُقَاتِلُهُمْ حَتَّى يَكُونُوا مِثْلَنَا؟ فَقَالَ: «انْفُذْ عَلَى رِسْلِكَ حَتَّى تَنْزِلَ بِسَاحَتِهِمْ، ثُمَّ ادْعُهُمْ إِلَى الإِسْلاَمِ، وَأَخْبِرْهُمْ بِمَا يَجِبُ عَلَيْهِمْ مِنْ حَقِّ اللَّهِ فِيهِ، فَوَاللَّهِ لَأَنْ يَهْدِيَ اللَّهُ بِكَ رَجُلًا وَاحِدًا، خَيْرٌ لَكَ مِنْ أَنْ يَكُونَ لَكَ حُمْرُ النَّعَمِ».
[صحيح] - [متفق عليه] - [صحيح البخاري: 4210]
المزيــد ...
ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಾಳೆ ನಾನು ಈ ಪತಾಕೆಯನ್ನು ಒಬ್ಬ ವ್ಯಕ್ತಿಗೆ ಕೊಡುವೆನು. ಅವನ ಕೈಯಿಂದ ಅಲ್ಲಾಹು ವಿಜಯವನ್ನು ದಯಪಾಲಿಸುವನು. ಅವನು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುತ್ತಾನೆ ಮತ್ತು ಅಲ್ಲಾಹು ಮತ್ತು ಅವನ ಸಂದೇಶವಾಹಕರು ಅವನನ್ನು ಪ್ರೀತಿಸುತ್ತಾರೆ." ಪತಾಕೆ ಯಾರ ಕೈಗೆ ಕೊಡಲಾಗಬಹುದು ಎಂದು ಮಾತನಾಡುತ್ತಾ ಜನರು ಆ ರಾತ್ರಿಯನ್ನು ಕಳೆದರು. ಬೆಳಗಾದಾಗ, ಜನರೆಲ್ಲರೂ ಅದನ್ನು ತಮ್ಮ ಕೈಗೆ ಕೊಡಲಾಗಬಹುದೆಂಬ ನಿರೀಕ್ಷೆಯಿಂದ ಬೆಳಗ್ಗೆಯೇ ಅಲ್ಲಾಹನ ಸಂದೇಶವಾಹಕರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ತೆರಳಿದರು. ಅವರು (ಪ್ರವಾದಿ) ಕೇಳಿದರು: "ಅಲೀ ಬಿನ್ ಅಬೂ ತಾಲಿಬ್ ಎಲ್ಲಿ?" ಅವರು ಉತ್ತರಿಸಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ಕಣ್ಣ ನೋವಿನಿಂದ ಬಳಲುತ್ತಿದ್ದಾರೆ." ಅವರು ಹೇಳಿದರು: "ಅವನ ಬಳಿಗೆ ಜನರನ್ನು ಕಳುಹಿಸಿ." ಅವರು ಬಂದಾಗ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಎರಡು ಕಣ್ಣುಗಳಿಗೆ ಉಗಿದು ಪ್ರಾರ್ಥಿಸಿದರು. ಆಗ ಅವರ ಕಣ್ಣಿನಲ್ಲಿ ಯಾವುದೇ ನೋವಿರಲಿಲ್ಲವೋ ಎಂಬಂತೆ ಅದು ಗುಣವಾಯಿತು. ಅವರು ಪತಾಕೆಯನ್ನು ಅವರಿಗೆ ಕೊಟ್ಟರು. ಅಲಿ ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಅವರು ನಮ್ಮಂತೆ ಆಗುವ ತನಕ ನಾನು ಅವರೊಂದಿಗೆ ಯುದ್ಧ ಮಾಡಬೇಕೇ?" ಅವರು ಉತ್ತರಿಸಿದರು: "ಅವರ ಅಂಗಳವನ್ನು ತಲುಪುವ ತನಕ ಸಾವಧಾನದಿಂದ ಮುಂದುವರಿಯಿರಿ. ನಂತರ ಅವರನ್ನು ಇಸ್ಲಾಂ ಧರ್ಮಕ್ಕೆ ಕರೆಯಿರಿ. ಅಲ್ಲಾಹನ ಹಕ್ಕಿಗೆ ಸಂಬಂಧಿಸಿದಂತೆ ಅವರಿಗೆ ಏನು ಕಡ್ಡಾಯವಾಗಿದೆಯೆಂಬುದನ್ನು ತಿಳಿಸಿಕೊಡಿ.ಏಕೆಂದರೆ, ಅಲ್ಲಾಹನಾಣೆ! ಅಲ್ಲಾಹು ನಿನ್ನ ಮೂಲಕ ಒಬ್ಬ ವ್ಯಕ್ತಿಗೆ ಸನ್ಮಾರ್ಗವನ್ನು ಕರುಣಿಸುವುದು ನಿನಗೆ ಕೆಂಪು ಒಂಟೆಗಳಿರುವುದಕ್ಕಿಂತಲೂ ಶ್ರೇಷ್ಠವಾಗಿದೆ."
[صحيح] - [متفق عليه] - [صحيح البخاري - 4210]
ನಾಳೆ ಮುಸ್ಲಿಮರು ಖೈಬರ್‌ನಲ್ಲಿರುವ ಯಹೂದಿಗಳ ವಿರುದ್ಧ ಜಯ ಗಳಿಸುವರು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಸಹಾಬಿಗಳಿಗೆ ತಿಳಿಸಿದರು. ಅದು ಅವರು ಪತಾಕೆಯನ್ನು ಕೊಡುವ ಒಬ್ಬ ವ್ಯಕ್ತಿಯ ಮೂಲಕ ಉಂಟಾಗಲಿದೆ. ಪತಾಕೆ ಎಂದರೆ ಸೈನ್ಯವು ತಮ್ಮ ಚಿಹ್ನೆಯಾಗಿ ಸ್ವೀಕರಿಸಿದ ಧ್ವಜ. ಈ ವ್ಯಕ್ತಿಯ ಗುಣಲಕ್ಷಣಗಳೇನೆಂದರೆ, ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರನ್ನು ಪ್ರೀತಿಸುತ್ತಾರೆ, ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರು ಅವರನ್ನು ಪ್ರೀತಿಸುತ್ತಾರೆ. ಆದ್ದರಿಂದ, ಸಹಾಬಿಗಳು ಈ ಮಹಾ ಗೌರವವನ್ನು ಪಡೆಯುವ ಆಸೆಯಿಂದ, ಪತಾಕೆಯನ್ನು ಯಾರಿಗೆ ನೀಡಲಾಗಬಹುದು ಎಂದು ಹರಟುತ್ತಾ ರಾತ್ರಿಯನ್ನು ಕಳೆದರು. ಬೆಳಗಾದಾಗ, ಈ ಗೌರವಕ್ಕೆ ಪಾತ್ರರಾಗಬಹುದೆಂಬ ನಿರೀಕ್ಷೆಯಿಂದ ಅವರೆಲ್ಲರೂ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ತೆರಳಿದರು.
ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಲೀ ಬಿನ್ ಅಬೂ ತಾಲಿಬ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರ ಬಗ್ಗೆ ವಿಚಾರಿಸಿದರು.
ಆಗ ಅವರು ಕಣ್ಣು ನೋವಿನಿಂದ ಬಳಲುತ್ತಿದ್ದಾರೆಂಬ ಉತ್ತರಿಸಲಾಯಿತು.
ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಬಳಿಗೆ ದೂತರನ್ನು ಕಳುಹಿಸಿ ಅವರನ್ನು ಕರೆ ತರಿಸಿದರು. ನಂತರ ಪ್ರವಾದಿಯವರು ತಮ್ಮ ಪವಿತ್ರ ಉಗುಳಿನಿಂದ ಅವರ ಕಣ್ಣುಗಳಿಗೆ ಉಗಿದು ಪ್ರಾರ್ಥಿಸಿದರು. ಆಗ ಅವರಿಗೆ ನೋವೇ ಇರಲಿಲ್ಲವೇನೋ ಎಂಬಂತೆ ಆ ಕಾಯಿಲೆಯಿಂದ ಚೇತರಿಸಿದರು. ಅವರ ಕೈಗೆ ಪತಾಕೆಯನ್ನು ಕೊಟ್ಟು, ಶತ್ರುಗಳ ಕೋಟೆ ತಲುಪುವ ತನಕ ಎಚ್ಚರಿಕೆಯಿಂದ ಚಲಿಸಿ, ನಂತರ ಇಸ್ಲಾಂ ಧರ್ಮವನ್ನು ಸ್ವೀಕರಿಸುವ ಕೊಡುಗೆಯನ್ನು ಅವರ ಮುಂದಿಡಬೇಕೆಂದು ಆದೇಶಿಸಿದರು. ಅವರು ಆ ಕೊಡುಗೆಯನ್ನು ಸ್ವೀಕರಿಸಿದರೆ, ಅವರಿಗೆ ಏನು ಕಡ್ಡಾಯವಾಗಿದೆಯೆಂಬುದನ್ನು ತಿಳಿಸಿಕೊಡಬೇಕು.
ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅಲಿಯವರಿಗೆ ಜನರನ್ನು ಅಲ್ಲಾಹನ ಕಡೆಗೆ ಕರೆಯುವುದರ ಶ್ರೇಷ್ಠತೆಯನ್ನು ತಿಳಿಸಿದರು. ಅದೇನೆಂದರೆ, ಒಬ್ಬ ವ್ಯಕ್ತಿ ಸನ್ಮಾರ್ಗ ಸ್ವೀಕರಿಸಲು ಅವರು ಕಾರಣವಾದರೆ, ಅದು ಅವರಿಗೆ ಕೆಂಪು ಒಂಟೆಗಳಿರುವುದಕ್ಕಿಂತಲೂ ಶ್ರೇಷ್ಠವಾಗಿದೆ. ಕೆಂಪು ಒಂಟೆಗಳು ಅರಬ್ಬರು ಸಾಕುವ ಅಥವಾ ದಾನ ಮಾಡುವ ಅತ್ಯಮೂಲ್ಯ ಸಂಪತ್ತಾಗಿದೆ.