عَنْ أَبِي هُرَيْرَةَ رضي الله عنه أَنَّهُ قَالَ:
قِيلَ: يَا رَسُولَ اللهِ، مَنْ أَسْعَدُ النَّاسِ بِشَفَاعَتِكَ يَوْمَ الْقِيَامَةِ؟ قَالَ رَسُولُ اللهِ صَلَّى اللهُ عَلَيْهِ وَسَلَّمَ: «لَقَدْ ظَنَنْتُ يَا أَبَا هُرَيْرَةَ أَنْ لَا يَسْأَلَنِي عَنْ هَذَا الْحَدِيثِ أَحَدٌ أَوَّلُ مِنْكَ؛ لِمَا رَأَيْتُ مِنْ حِرْصِكَ عَلَى الْحَدِيثِ، أَسْعَدُ النَّاسِ بِشَفَاعَتِي يَوْمَ الْقِيَامَةِ، مَنْ قَالَ لَا إِلَهَ إِلَّا اللهُ خَالِصًا مِنْ قَلْبِهِ أَوْ نَفْسِهِ»».
[صحيح] - [رواه البخاري] - [صحيح البخاري: 99]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
“ಓ ಅಲ್ಲಾಹನ ಸಂದೇಶವಾಹಕರೇ! ಜನರ ಪೈಕಿ ಪುನರುತ್ಥಾನ ದಿನ ತಮ್ಮ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರು?” ಎಂದು ಕೇಳಲಾಯಿತು. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಓ ಅಬೂಹುರೈರ! ಹದೀಸಿನ ಬಗ್ಗೆ ತಮಗಿರುವ ಆಸಕ್ತಿಯನ್ನು ಕಂಡು ತಮಗಿಂತ ಮೊದಲು ಯಾರೂ ಈ ಹದೀಸಿನ ಬಗ್ಗೆ ಕೇಳಲಾರರು ಎಂದು ನಾನು ಭಾವಿಸಿದ್ದೆ. ಪುನರುತ್ಥಾನ ದಿನ ಜನರ ಪೈಕಿ ನನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಯಾರೆಂದರೆ, ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ ಎಂದು ತನ್ನ ಹೃದಯ ಮತ್ತು ಮನಸ್ಸಿನಿಂದ ನಿಷ್ಕಳಂಕವಾಗಿ ಹೇಳಿದವನು.”
[صحيح] - [رواه البخاري] - [صحيح البخاري - 99]
ಪುನರುತ್ಥಾನ ದಿನ ಜನರ ಪೈಕಿ ತನ್ನ ಶಿಫಾರಸ್ಸನ್ನು ಪಡೆಯುವ ಅತ್ಯಂತ ಸೌಭಾಗ್ಯವಂತನು ಅಲ್ಲಾಹನ ಹೊರತು ಆರಾಧನೆಗೆ ಅರ್ಹರಾದ ಅನ್ಯರಿಲ್ಲ, ಅಂದರೆ ಅಲ್ಲಾಹನ ಹೊರತು ಯಾವುದೇ ಸತ್ಯ ಆರಾಧ್ಯರಿಲ್ಲ ಎಂದು ತನ್ನ ಹೃದಯದಿಂದ ನಿಷ್ಕಳಂಕವಾಗಿ ಹೇಳಿದವನು ಮತ್ತು ಬಹುದೇವಾರಾಧನೆ ಹಾಗೂ ತೋರಿಕೆಯಿಂದ ಮುಕ್ತನಾಗಿರುವವನು ಎಂದು ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಿಳಿಸುತ್ತಿದ್ದಾರೆ