عَنْ عَبْدِ اللهِ بنِ مَسْعُودٍ رضي الله عنه قال:
قَالَ النَّبِيُّ صلى الله عليه وسلم كَلِمَةً وَقُلْتُ أُخْرَى، قَالَ النَّبِيُّ صلى الله عليه وسلم: «مَنْ مَاتَ وَهُوَ يَدْعُو مِنْ دُونِ اللهِ نِدًّا دَخَلَ النَّارَ» وَقُلْتُ أَنَا: مَنْ مَاتَ وَهُوَ لَا يَدْعُو لِلهِ نِدًّا دَخَلَ الْجَنَّةَ.
[صحيح] - [متفق عليه] - [صحيح البخاري: 4497]
المزيــد ...
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಒಂದು ಮಾತನ್ನು ಹೇಳಿದರು ಮತ್ತು ನಾನು ಇನ್ನೊಂದು ಮಾತನ್ನು ಹೇಳಿದೆ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: “ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸುವ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ನರಕವನ್ನು ಪ್ರವೇಶಿಸುವರು.” [ಬುಖಾರಿ]. ನಾನು ಹೇಳಿದೆ: "ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸದ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರು ಸ್ವರ್ಗವನ್ನು ಪ್ರವೇಶಿಸುವರು."
[صحيح] - [متفق عليه] - [صحيح البخاري - 4497]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಅಲ್ಲಾಹನಿಗೆ ಮಾತ್ರ ಕಡ್ಡಾಯವಾಗಿ ಅರ್ಪಿಸಬೇಕಾದುದನ್ನು ಅಲ್ಲಾಹನಲ್ಲದವರಿಗೆ ಅರ್ಪಿಸುತ್ತಾರೋ, ಅಂದರೆ ಅಲ್ಲಾಹೇತರರನ್ನು ಕರೆದು ಪ್ರಾರ್ಥಿಸುತ್ತಾರೋ, ಅಥವಾ ಅಲ್ಲಾಹೇತರರಲ್ಲಿ ಸಹಾಯಯಾಚನೆ ಮಾಡುತ್ತಾರೋ, ಅವರು (ಪಶ್ಚಾತ್ತಾಪಪಡದೆ) ಅದೇ ಸ್ಥಿತಿಯಲ್ಲಿ ಸಾವನ್ನಪ್ಪಿದರೆ, ಅವರು ನರಕವಾಸಿಗಳಲ್ಲಿ ಸೇರುತ್ತಾರೆ. ಇದಕ್ಕೆ ತಮ್ಮ ಮಾತನ್ನು ಸೇರಿಸುತ್ತಾ ಇಬ್ನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಹೇಳುತ್ತಾರೆ: "ಯಾರು ಅಲ್ಲಾಹನ ಹೊರತಾಗಿ ಬೇರೆಯವರನ್ನು ಪ್ರಾರ್ಥಿಸದ ಸ್ಥಿತಿಯಲ್ಲಿ ಸಾವನ್ನಪ್ಪುತ್ತಾರೋ ಅವರ ಅಂತಿಮ ವಾಸಸ್ಥಳವು ಸ್ವರ್ಗವಾಗಿದೆ."