عن سهل بن سعد رضي الله عنه عن رسول الله صلى الله عليه وسلم قال:
«مَنْ يَضْمَنْ لِي مَا بَيْنَ لَحْيَيْهِ وَمَا بَيْنَ رِجْلَيْهِ أَضْمَنْ لَهُ الْجَنَّةَ».
[صحيح] - [رواه البخاري] - [صحيح البخاري: 6474]
المزيــد ...
ಸಹ್ಲ್ ಬಿನ್ ಸಅದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ತನ್ನ ಎರಡು ದವಡೆಗಳ ನಡುವೆ ಮತ್ತು ತನ್ನ ಎರಡು ಕಾಲುಗಳ ನಡುವೆ ಇರುವುದನ್ನು ನಿಯಂತ್ರಿಸುತ್ತೇನೆಂದು ಯಾರು ನನಗೆ ಖಾತ್ರಿ ನೀಡುತ್ತಾನೋ, ಅವನಿಗೆ ನಾನು ಸ್ವರ್ಗದ ಖಾತ್ರಿ ನೀಡುತ್ತೇನೆ."
[صحيح] - [رواه البخاري] - [صحيح البخاري - 6474]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ಎರಡು ವಿಷಯಗಳನ್ನು ತಿಳಿಸುತ್ತಿದ್ದಾರೆ. ಮುಸಲ್ಮಾನನು ಅವೆರಡನ್ನು ಸರಿಯಾಗಿ ಉಪಯೋಗಿಸಿದರೆ ಅವನು ಸ್ವರ್ಗವನ್ನು ಪ್ರವೇಶಿಸುತ್ತಾನೆ.
ಮೊದಲನೆಯದು: ಸರ್ವಶಕ್ತನಾದ ಅಲ್ಲಾಹು ಕೋಪಗೊಳ್ಳುವಂತಹ ಮಾತುಗಳನ್ನು ಆಡದಂತೆ ನಾಲಿಗೆಯನ್ನು ಹದ್ದುಬಸ್ತಿನಲ್ಲಿಡುವುದು.
ಎರಡನೆಯದು: ಅಶ್ಲೀಲ ಕೃತ್ಯಗಳಲ್ಲಿ ತೊಡಗದಂತೆ ಗುಪ್ತಾಂಗವನ್ನು ಹದ್ದುಬಸ್ತಿನಲ್ಲಿಡುವುದು.
ಏಕೆಂದರೆ, ಪಾಪಗಳು ಹೆಚ್ಚಾಗಿ ಈ ಎರಡು ಅಂಗಗಳಿಂದಲೇ ಸಂಭವಿಸುತ್ತವೆ.