عَنْ أَبِي الدَّرْدَاءِ رضي الله عنه قَالَ: قَالَ النَّبِيُّ صَلَّى اللَّهُ عَلَيْهِ وَسَلَّمَ:
«أَلاَ أُنَبِّئُكُمْ بِخَيْرِ أَعْمَالِكُمْ، وَأَزْكَاهَا عِنْدَ مَلِيكِكُمْ، وَأَرْفَعِهَا فِي دَرَجَاتِكُمْ وَخَيْرٌ لَكُمْ مِنْ إِنْفَاقِ الذَّهَبِ وَالوَرِقِ، وَخَيْرٌ لَكُمْ مِنْ أَنْ تَلْقَوْا عَدُوَّكُمْ فَتَضْرِبُوا أَعْنَاقَهُمْ وَيَضْرِبُوا أَعْنَاقَكُمْ؟» قَالُوا: بَلَى. قَالَ: «ذِكْرُ اللهِ تَعَالَى».
[صحيح] - [رواه الترمذي وابن ماجه وأحمد] - [سنن الترمذي: 3377]
المزيــد ...
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಿಮ್ಮ ಕರ್ಮಗಳಲ್ಲಿ ಶ್ರೇಷ್ಠವಾದ, ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿ ಪರಿಶುದ್ಧವಾದ, ನಿಮ್ಮ ಪದವಿಗಳಲ್ಲಿ ಅತಿ ಎತ್ತರವಾದ, ಚಿನ್ನ ಮತ್ತು ಬೆಳ್ಳಿಯನ್ನು ವ್ಯಯಿಸುವುದಕ್ಕಿಂತಲೂ ಉತ್ತಮವಾದ, ನೀವು ನಿಮ್ಮ ಶತ್ರುವಿನೊಂದಿಗೆ ಹೋರಾಡಿ ನೀವು ಅವರನ್ನು ಮತ್ತು ಅವರು ನಿಮ್ಮನ್ನು ಕೊಲ್ಲುವುದಕ್ಕಿಂತಲೂ ಉತ್ತಮವಾದ ಒಂದು ವಿಷಯವನ್ನು ನಾನು ನಿಮಗೆ ತಿಳಿಸಿಕೊಡಲೇ?" ಅವರು ಹೇಳಿದರು: "ತಿಳಿಸಿಕೊಡಿ." ಅವರು (ಪ್ರವಾದಿ) ಹೇಳಿದರು: "ಅಲ್ಲಾಹನ ಸ್ಮರಣೆ."
[صحيح] - [رواه الترمذي وابن ماجه وأحمد] - [سنن الترمذي - 3377]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸಹಚರರೊಡನೆ ಕೇಳಿದರು: .
ನಾನು ಒಂದು ಕರ್ಮದ ಬಗ್ಗೆ ನಿಮಗೆ ತಿಳಿಸಿಕೊಡುವುದನ್ನು ನೀವು ಬಯಸುತ್ತೀರಾ? ಅಂದರೆ ಯಜಮಾನನಾದ ಅಲ್ಲಾಹನ ದೃಷ್ಟಿಯಲ್ಲಿ ಅತಿಶ್ರೇಷ್ಠವಾದ, ಅತ್ಯಂತ ಗಣ್ಯವಾದ, ಅತ್ಯಂತ ಫಲವತ್ತಾದ ಮತ್ತು ಅತ್ಯಂತ ಶುದ್ಧವಾದ ಒಂದು ಕರ್ಮದ ಬಗ್ಗೆ? .
ಸ್ವರ್ಗದಲ್ಲಿ ನಿಮಗೆ ದೊರೆಯುವ ಸ್ಥಾನಮಾನಗಳಲ್ಲಿ ಅತ್ಯುನ್ನತವಾದ ಕರ್ಮದ ಬಗ್ಗೆ?
ನೀವು ಚಿನ್ನ ಮತ್ತು ಬೆಳ್ಳಿಯನ್ನು ದಾನ ಮಾಡುವುದಕ್ಕಿಂತಲೂ ಶ್ರೇಷ್ಠವಾದ ಕರ್ಮದ ಬಗ್ಗೆ?
ನೀವು ಸತ್ಯನಿಷೇಧಿಗಳೊಂದಿಗೆ ಹೋರಾಡಿ, ನೀವು ಅವರ ಕೊರಳು ಕೊಯ್ಯುವುದಕ್ಕಿಂತಲೂ ಮತ್ತು ಅವರು ನಿಮ್ಮ ಕೊರಳು ಕೊಯ್ಯುವುದಕ್ಕಿಂತಲೂ ಶ್ರೇಷ್ಠವಾದ ಕರ್ಮದ ಬಗ್ಗೆ?
ಸಹಾಬಿಗಳು ಹೇಳಿದರು: ಹೌದು, ನಾವು ಅದನ್ನು ಬಯಸುತ್ತೇವೆ.
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು: ಅದು ಎಲ್ಲಾ ಸಮಯಗಳಲ್ಲೂ, ಎಲ್ಲಾ ಸಂದರ್ಭಗಳಲ್ಲೂ ಪರಿಸ್ಥಿತಿಗಳಲ್ಲೂ ಅಲ್ಲಾಹನನ್ನು ಸ್ಮರಿಸುವುದು.