عَنْ أَبِي هُرَيْرَةَ رضي الله عنه عَنِ النَّبِيِّ صَلَّى اللهُ عَلَيْهِ وَسَلَّمَ قَالَ:
«رَغِمَ أَنْفُ، ثُمَّ رَغِمَ أَنْفُ، ثُمَّ رَغِمَ أَنْفُ»، قِيلَ: مَنْ؟ يَا رَسُولَ اللهِ قَالَ: «مَنْ أَدْرَكَ أَبَوَيْهِ عِنْدَ الْكِبَرِ، أَحَدَهُمَا أَوْ كِلَيْهِمَا فَلَمْ يَدْخُلِ الْجَنَّةَ».
[صحيح] - [رواه مسلم] - [صحيح مسلم: 2551]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ, ನಂತರ ಮೂಗು ಮಣ್ಣಾಗಲಿ." ಅವರೊಡನೆ ಕೇಳಲಾಯಿತು: “ಓ ಅಲ್ಲಾಹನ ಸಂದೇಶವಾಹಕರೇ! ಯಾರು?" ಅವರು ಉತ್ತರಿಸಿದರು: "ಯಾರು ಬದುಕಿರುವಾಗ ಅವನ ತಂದೆ-ತಾಯಿಗಳಲ್ಲಿ ಒಬ್ಬರು ಅಥವಾ ಇಬ್ಬರು ವೃದ್ಧಾಪ್ಯವನ್ನು ತಲುಪಿಯೂ ಸ್ವರ್ಗವನ್ನು ಪ್ರವೇಶಿಸಲಾಗದವನು."
[صحيح] - [رواه مسلم] - [صحيح مسلم - 2551]
ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಅವಮಾನ ಮತ್ತು ತಿರಸ್ಕಾರದಿಂದ—ಎಲ್ಲಿಯವರೆಗೆಂದರೆ ಆತ ತನ್ನ ಮೂಗನ್ನು ಮಣ್ಣಿಗೆ ತಾಗಿಸುವಂತಾಗುವ ತನಕ—ಪ್ರಾರ್ಥಿಸಿದರು. ಅವರು ಇದನ್ನು ಮೂರು ಬಾರಿ ಪುನರುಚ್ಛರಿಸಿದರು. ಆಗ ಅವರೊಡನೆ ಕೇಳಲಾಯಿತು: "ಓ ಅಲ್ಲಾಹನ ಸಂದೇಶವಾಹಕರೇ! ನೀವು ಯಾರ ವಿರುದ್ಧವಾಗಿ ಪ್ರಾರ್ಥಿಸಿದಿರೋ ಆ ವ್ಯಕ್ತಿ ಯಾರು?"
ಅವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಉತ್ತರಿಸಿದರು: ಯಾರು ಬದುಕಿರುವಾಗ ಅವನ ತಂದೆ-ತಾಯಿಗಳಲ್ಲಿ ಒಬ್ಬರು ಅಥವಾ ಇಬ್ಬರು ವೃದ್ಧಾಪ್ಯವನ್ನು ತಲುಪಿ, ಅವರ ಕಾರಣದಿಂದ ಸ್ವರ್ಗವನ್ನು ಪ್ರವೇಶಿಸಲಾಗದವನು. ಅಂದರೆ, ಅವರಿಗೆ ಒಳಿತು ಮಾಡದ ಮತ್ತು ಅವರಿಗೆ ಅವಿಧೇಯತೆ ತೋರಿದ ಕಾರಣದಿಂದ ಅವನಿಗೆ ಸ್ವರ್ಗ ಪ್ರವೇಶಿಸಲಾಗಲಿಲ್ಲ.