عَنْ أَبِي هُرَيْرَةَ رضي الله عنه قَالَ:
كَانَ رَسُولُ اللهِ صَلَّى اللهُ عَلَيْهِ وَسَلَّمَ يَسِيرُ فِي طَرِيقِ مَكَّةَ، فَمَرَّ عَلَى جَبَلٍ يُقَالُ لَهُ جُمْدَانُ، فَقَالَ: «سِيرُوا هَذَا جُمْدَانُ، سَبَقَ الْمُفَرِّدُونَ» قَالُوا: وَمَا الْمُفَرِّدُونَ يَا رَسُولَ اللهِ؟ قَالَ: «الذَّاكِرُونَ اللهَ كَثِيرًا وَالذَّاكِرَاتُ».
[صحيح] - [رواه مسلم] - [صحيح مسلم: 2676]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
ಒಮ್ಮೆ ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮಕ್ಕಾದ ದಾರಿಯಲ್ಲಿ ಚಲಿಸುತ್ತಿದ್ದರು. ಅವರು ಜುಮ್ದಾನ್ ಎಂಬ ಹೆಸರಿನ ಪರ್ವತದ ಬಳಿಯಿಂದ ಸಾಗಿದಾಗ ಹೇಳಿದರು: "ಮುಂದುವರಿಯಿರಿ. ಇದು ಜುಮ್ದಾನ್. ಮುಫರ್‍ರಿದ್‌ಗಳು (ಅನನ್ಯರು) ಮುಂಚೂಣಿಯಲ್ಲಿದ್ದಾರೆ." ಅವರು ಕೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಮುಫರ್‍ರಿದ್‌ಗಳು ಎಂದರೇನು?" ಅವರು ಉತ್ತರಿಸಿದರು: "ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವ ಪುರುಷರು ಮತ್ತು ಸ್ತ್ರೀಯರು."
[صحيح] - [رواه مسلم] - [صحيح مسلم - 2676]
ಅಲ್ಲಾಹನನ್ನು ಅತ್ಯಧಿಕ ಸ್ಮರಿಸುವವರ ಬಗ್ಗೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸಿದ್ದಾರೆ. ಅವರು ಯಾರೆಂದರೆ, ಅನನ್ಯರಾಗಿರುವವರು ಮತ್ತು ಸುಖ ಸಮೃದ್ಧವಾದ ಸ್ವರ್ಗಗಳಲ್ಲಿ ಅತ್ಯುನ್ನತ ಸ್ಥಾನಮಾನಗಳನ್ನು ಗಳಿಸುವುದರಲ್ಲಿ ಮುಂಚೂಣಿಯಲ್ಲಿರುವವರು. ಅವರನ್ನು ಜುಮ್ದಾನ್ ಪರ್ವತಕ್ಕೆ ಹೋಲಿಸಿದ್ದೇಕೆಂದರೆ, ಅದು ಇತರ ಪರ್ವತಗಳಿಗಿಂತ ಅನನ್ಯವಾಗಿದೆ.