عن أبي هريرة رضي الله عنه قال: قال رسول الله صلى الله عليه وسلم:
«مَنْ أَنْظَرَ مُعْسِرًا، أَوْ وَضَعَ لَهُ، أَظَلَّهُ اللهُ يَوْمَ الْقِيَامَةِ تَحْتَ ظِلِّ عَرْشِهِ يَوْمَ لَا ظِلَّ إِلَّا ظِلُّهُ».
[صحيح] - [رواه الترمذي وأحمد] - [سنن الترمذي: 1306]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ಕಷ್ಟದಲ್ಲಿರುವ ವ್ಯಕ್ತಿಗೆ ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಪುನರುತ್ಥಾನ ದಿನದಂದು, ಅಂದರೆ ಅಲ್ಲಾಹನ ನೆರಳಿನ ಹೊರತು ಬೇರೆ ನೆರಳಿಲ್ಲದ ದಿನದಂದು, ಅಲ್ಲಾಹು ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ."
[صحيح] - [رواه الترمذي وأحمد] - [سنن الترمذي - 1306]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಸಾಲಗಾರನಿಗೆ ಸಾಲ ಮರುಪಾವತಿ ಮಾಡಲು ಕಾಲಾವಕಾಶ ನೀಡುತ್ತಾನೋ, ಅಥವಾ ಅವನ ಸಾಲವನ್ನು ಮನ್ನಾ ಮಾಡುತ್ತಾನೋ, ಅವನಿಗೆ ಸಿಗುವ ಪ್ರತಿಫಲವು: ಪುನರುತ್ಥಾನ ದಿನದಂದು ಅಲ್ಲಾಹು ಅವನಿಗೆ ತನ್ನ ಸಿಂಹಾಸನದ ನೆರಳಿನಲ್ಲಿ ನೆರಳು ನೀಡುತ್ತಾನೆ. ಅಂದು ಸೂರ್ಯನು ಜನರ ತಲೆಯ ಹತ್ತಿರದಲ್ಲಿದ್ದು ಅದರ ಶಾಖವು ಬಹಳ ಕಠೋರವಾಗಿರುತ್ತದೆ. ಅಂದು ಅಲ್ಲಾಹು ನೀಡಿದ ನೆರಳಿನ ಹೊರತು ಬೇರೆ ಯಾವುದೇ ನೆರಳೂ ಇರುವುದಿಲ್ಲ.