عن أبي هريرة رضي الله عنه قال: قال رسول الله صلى الله عليه وسلم:
«مَنْ صَامَ رَمَضَانَ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
[صحيح] - [متفق عليه] - [صحيح البخاري: 38]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
[صحيح] - [متفق عليه] - [صحيح البخاري - 38]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಯಾರು ಅಲ್ಲಾಹನಲ್ಲಿ ವಿಶ್ವಾಸವಿಟ್ಟು, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವುದು ಕಡ್ಡಾಯವೆಂದು ಅಂಗೀಕರಿಸಿ, ರಮದಾನ್ ತಿಂಗಳಲ್ಲಿ ಉಪವಾಸ ಆಚರಿಸುವವರಿಗೆ ಅಲ್ಲಾಹು ಹೇರಳ ಪ್ರತಿಫಲಗಳನ್ನು ಸಿದ್ಧಪಡಿಸಿದ್ದಾನೆಂಬ ನಂಬಿಕೆಯಿಂದ, ಯಾವುದೇ ತೋರಿಕೆ ಅಥವಾ ಪ್ರಶಂಸೆಯನ್ನು ಬಯಸದೆ ಕೇವಲ ಅಲ್ಲಾಹನ ಸಂಪ್ರೀತಿಯನ್ನು ಮಾತ್ರ ಉದ್ದೇಶಿಸುತ್ತಾ, ಉಪವಾಸ ಆಚರಿಸುತ್ತಾರೋ ಅವರ ಹಿಂದಿನ ಪಾಪಗಳೆಲ್ಲವನ್ನೂ ಕ್ಷಮಿಸಲಾಗುತ್ತದೆ.