عن أبي هريرة رضي الله عنه قال: قال رسول الله صلى الله عليه وسلم:
«مَنْ يَقُمْ لَيْلَةَ الْقَدْرِ إِيمَانًا وَاحْتِسَابًا غُفِرَ لَهُ مَا تَقَدَّمَ مِنْ ذَنْبِهِ»
[صحيح] - [متفق عليه] - [صحيح البخاري: 35]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ವಿಶ್ವಾಸ ಮತ್ತು ಪ್ರತಿಫಲಾಪೇಕ್ಷೆಯಿಂದ ಕದರ್‌ನ ರಾತ್ರಿಯಲ್ಲಿ ನಮಾಝ್ ನಿರ್ವಹಿಸುತ್ತಾನೋ, ಅವನಿಗೆ ಅವನ ಹಿಂದಿನ ಪಾಪಗಳನ್ನು ಕ್ಷಮಿಸಲಾಗುವುದು.”
[صحيح] - [متفق عليه] - [صحيح البخاري - 35]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಕದರ್‌ನ ರಾತ್ರಿಯ ಶ್ರೇಷ್ಠತೆಯನ್ನು ತಿಳಿಸುತ್ತಾರೆ. ಅದು ರಮದಾನ್ ತಿಂಗಳ ಕೊನೆಯ ಹತ್ತರಲ್ಲಿ ಬರುತ್ತದೆ. ಯಾರು ಆ ರಾತ್ರಿಯಲ್ಲಿ ವಿಶ್ವಾಸವಿಟ್ಟು, ಅದರ ಶ್ರೇಷ್ಠತೆಯಲ್ಲಿ ನಂಬಿಕೆಯಿಟ್ಟು, ಯಾವುದೇ ತೋರಿಕೆ ಅಥವಾ ಪ್ರಶಂಸೆಯನ್ನು ಬಯಸದೆ ಕೇವಲ ಅಲ್ಲಾಹನ ಪ್ರತಿಫಲವನ್ನು ಮಾತ್ರ ಅಪೇಕ್ಷಿಸುತ್ತಾ, ಆ ರಾತ್ರಿಯಲ್ಲಿ ನಮಾಝ್, ಪ್ರಾರ್ಥನೆ, ಕುರ್‌ಆನ್ ಪಠಣ, ಅಲ್ಲಾಹನ ಸ್ಮರಣೆ, ಮುಂತಾದ ಆರಾಧನಾ ಕರ್ಮಗಳಲ್ಲಿ ಪರಿಶ್ರಮಿಸುತ್ತಾರೋ, ಅವರ ಹಿಂದಿನ ಪಾಪಗಳೆಲ್ಲವನ್ನೂ ಕ್ಷಮಿಸಲಾಗುತ್ತದೆ.