عن أبي بَكرة رضي الله عنه قال: سمعت رسول الله صلى الله عليه وسلم يقول:
«إِذَا الْتَقَى الْمُسْلِمَانِ بِسَيْفَيْهِمَا فَالْقَاتِلُ وَالْمَقْتُولُ فِي النَّارِ»، فَقُلْتُ: يَا رَسُولَ اللهِ هَذَا الْقَاتِلُ، فَمَا بَالُ الْمَقْتُولِ؟ قَالَ: «إِنَّهُ كَانَ حَرِيصًا عَلَى قَتْلِ صَاحِبِهِ».
[صحيح] - [متفق عليه] - [صحيح البخاري: 31]
المزيــد ...
ಅಬೂ ಬಕ್ರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
"ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಪರಸ್ಪರ ಎದುರಾದರೆ, ಕೊಲೆಗಾರನು ಮತ್ತು ಕೊಲೆಯಾದವನು ಇಬ್ಬರೂ ನರಕಕ್ಕೆ ಹೋಗುತ್ತಾರೆ." ನಾನು ಕೇಳಿದೆ: "ಓ ಅಲ್ಲಾಹನ ಸಂದೇಶವಾಹಕರೇ! ಕೊಲೆಗಾರನು ನರಕಕ್ಕೆ ಹೋಗುವುದು ಸರಿ. ಆದರೆ ಕೊಲೆಯಾದವನು ಏಕೆ ನರಕಕ್ಕೆ ಹೋಗಬೇಕು?" ಅವರು ಉತ್ತರಿಸಿದರು: "ಏಕೆಂದರೆ ಅವನಿಗೆ ತನ್ನ ಎದುರಾಳಿಯನ್ನು ಕೊಲ್ಲಬೇಕೆಂಬ ಅತೀವ ಉತ್ಸಾಹವಿತ್ತು."
[صحيح] - [متفق عليه] - [صحيح البخاري - 31]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಇಬ್ಬರು ಮುಸ್ಲಿಮರು ತಮ್ಮ ಖಡ್ಗಗಳ ಮೂಲಕ ಒಬ್ಬರು ಇನ್ನೊಬ್ಬರನ್ನು ಕೊಲ್ಲಬೇಕೆಂಬ ಉದ್ದೇಶದಿಂದ ಪರಸ್ಪರ ಎದುರಾದರೆ, ಕೊಲೆಗಾರನು ಕೊಲೆ ಮಾಡಿದ ಕಾರಣಕ್ಕಾಗಿ ನರಕವಾಸಿಯಾಗುತ್ತಾನೆ. ಆದರೆ ಕೊಲೆಯಾದವನು ಏಕೆ ನರಕವಾಸಿಯಾಗುತ್ತಾನೆಂಬ ವಿಷಯದಲ್ಲಿ ಸಂಗಡಿಗರಿಗೆ (ಸಹಾಬಾಗಳಿಗೆ) ಸಂಶಯವಾಯಿತು. ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಉತ್ತರಿಸಿದರು: ಅವನು ನರಕಕ್ಕೆ ಹೋಗುವುದೇಕೆಂದರೆ, ಅವನು ಕೂಡ ತನ್ನ ಎದುರಾಳಿಯನ್ನು ಕೊಲ್ಲಬೇಕೆಂಬ ಅತೀವ ಉತ್ಸಾಹವನ್ನು ಹೊಂದಿದ್ದ. ಆದರೆ ಎದುರಾಳಿಯೇ ಮೊದಲು ಖಡ್ಗ ಬೀಸಿದ್ದರಿಂದ ಅವನು ಮೊದಲು ಸತ್ತುಹೋದ.