عَنْ أَبِي هُرَيْرَةَ رَضِيَ اللَّهُ عَنْهُ قَالَ:
أَوْصَانِي خَلِيلِي صَلَّى اللهُ عَلَيْهِ وَسَلَّمَ بِثَلاَثٍ: صِيَامِ ثَلاَثَةِ أَيَّامٍ مِنْ كُلِّ شَهْرٍ، وَرَكْعَتَيِ الضُّحَى، وَأَنْ أُوتِرَ قَبْلَ أَنْ أَنَامَ.
[صحيح] - [متفق عليه] - [صحيح البخاري: 1981]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ನನ್ನ ಗೆಳೆಯ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನಗೆ ಮೂರು ವಿಷಯಗಳ ಉಪದೇಶ ಮಾಡಿದರು: ಪ್ರತೀ ತಿಂಗಳಲ್ಲಿ ಮೂರು ದಿನ ಉಪವಾಸ ಆಚರಿಸುವುದು, ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು ಮತ್ತು ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್ ನಿರ್ವಹಿಸುವುದು."
[صحيح] - [متفق عليه] - [صحيح البخاري - 1981]
ಅಬೂಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ಇಲ್ಲಿ ತಿಳಿಸುವುದೇನೆಂದರೆ, ಅವರ ಅತ್ಯಂತ ಪ್ರೀತಿಯ ಗೆಳೆಯರಾದ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರಿಗೆ ಮೂರು ವಿಷಯಗಳ ಬಗ್ಗೆ ಉಪದೇಶ ಮಾಡಿದರು.
ಒಂದು: ಪ್ರತಿ ತಿಂಗಳು ಮೂರು ದಿನ ಉಪವಾಸ ಆಚರಿಸುವುದು.
ಎರಡು: ಪ್ರತಿದಿನ ಎರಡು ರಕ್‌ಅತ್ ದುಹಾ ನಮಾಝ್ ನಿರ್ವಹಿಸುವುದು.
ಮೂರು: ಮಲಗುವುದಕ್ಕೆ ಮೊದಲು ವಿತ್ರ್ ನಮಾಝ್ ನಿರ್ವಹಿಸುವುದು. ಇದು ರಾತ್ರಿಯ ಕೊನೆಯ ಭಾಗದಲ್ಲಿ ಏಳಲು ಸಾಧ್ಯವಾಗಲಾರದು ಎಂದು ಭಯಪಡುವವರಿಗೆ.