عَنْ عَائِشَةَ رَضِيَ اللَّهُ عَنْهَا أَنَّ رَسُولَ اللَّهِ صَلَّى اللهُ عَلَيْهِ وَسَلَّمَ قَالَ:
«تَحَرَّوْا لَيْلَةَ القَدْرِ فِي الوِتْرِ مِنَ العَشْرِ الأَوَاخِرِ مِنْ رَمَضَانَ».
[صحيح] - [متفق عليه] - [صحيح البخاري: 2017]
المزيــد ...
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನೀವು ರಮದಾನ್ ತಿಂಗಳ ಕೊನೆಯ ಹತ್ತು ರಾತ್ರಿಗಳಲ್ಲಿರುವ ಬೆಸ ರಾತ್ರಿಗಳಲ್ಲಿ ಲೈಲತುಲ್ ಖದ್ರ್ ಅನ್ನು ಹುಡುಕಿರಿ."
[صحيح] - [متفق عليه] - [صحيح البخاري - 2017]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಲೈಲತುಲ್ ಖದ್ರ್ ಅನ್ನು ಹುಡುಕಲು ಪ್ರಾಮಾಣಿಕ ಪ್ರಯತ್ನಗಳನ್ನು ಮಾಡಲು ಮತ್ತು ಅದರಲ್ಲಿ ಬಹಳಷ್ಟು ಸತ್ಕರ್ಮಗಳನ್ನು ಮಾಡಲು ಪ್ರೇರೇಪಿಸಿದರು. ಪ್ರತಿ ವರ್ಷ ರಮದಾನ್ ತಿಂಗಳ ಕೊನೆಯ ಹತ್ತು ರಾತ್ರಿಗಳಲ್ಲಿರುವ ಬೆಸ ರಾತ್ರಿಗಳಲ್ಲಿ ಅದು ಸಂಭವಿಸುವ ಸಾಧ್ಯತೆ ಹೆಚ್ಚು. ಆ ರಾತ್ರಿಗಳು ಯಾವುದೆಂದರೆ 21ನೇ, 23ನೇ, 25ನೇ, 27ನೇ ಮತ್ತು 29ನೇ ರಾತ್ರಿ.