عَنْ عَبْدِ اللهِ بْنِ بُسْرٍ رضي الله عنه أَنَّ رَجُلاً قَالَ: يَا رَسُولَ اللهِ إِنَّ شَرَائِعَ الإِسْلاَمِ قَدْ كَثُرَتْ عَلَيَّ، فَأَخْبِرْنِي بِشَيْءٍ أَتَشَبَّثُ بِهِ، قَالَ:
«لاَ يَزَالُ لِسَانُكَ رَطْبًا مِنْ ذِكْرِ اللَّهِ».
[صحيح] - [رواه الترمذي وابن ماجه وأحمد] - [سنن الترمذي: 3375]
المزيــد ...
ಅಬ್ದುಲ್ಲಾಹ್ ಇಬ್ನ್ ಬುಸ್ರ್(ರ) ರಿಂದ ವರದಿ. ಒಬ್ಬ ವ್ಯಕ್ತಿ ಹೇಳಿದರು: "ಓ ಅಲ್ಲಾಹನ ಸಂದೇಶವಾಹಕರೇ! ಇಸ್ಲಾಮಿನ ನಿಯಮಗಳು ನನಗೆ ಹೆಚ್ಚಾಗಿವೆ. ಆದ್ದರಿಂದ ನಾನು ಬಿಗಿಯಾಗಿ ಹಿಡಿದುಕೊಳ್ಳಬಹುದಾದ ಒಂದು ವಿಷಯವನ್ನು ನನಗೆ ತಿಳಿಸಿಕೊಡಿ." ಅವರು ಹೇಳಿದರು:
"ನಿಮ್ಮ ನಾಲಗೆಯು ಅಲ್ಲಾಹನ ಸ್ಮರಣೆಯಿಂದ ಸದಾ ಒದ್ದೆಯಾಗಿರಲಿ."
[صحيح] - [رواه الترمذي وابن ماجه وأحمد] - [سنن الترمذي - 3375]
ಒಬ್ಬ ವ್ಯಕ್ತಿ ಪ್ರವಾದಿಯವರ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬಳಿಗೆ ಬಂದು, ಐಚ್ಛಿಕ ಆರಾಧನೆಗಳು ಹೆಚ್ಚಾದ ಕಾರಣ ಅವುಗಳನ್ನು ನಿರ್ವಹಿಸಲು ತನಗೆ ಸಾಧ್ಯವಾಗುವುದಿಲ್ಲವೆಂದು ದೂರಿಕೊಂಡರು. ನಂತರ ಅವರು, ಹೆಚ್ಚು ಪ್ರತಿಫಲವನ್ನು ಹೊಂದಿರುವ ಮತ್ತು ಸರಳವಾಗಿರುವ, ತನಗೆ ಮಾಡಲು ಸಾಧ್ಯವಾಗುವ ಮತ್ತು ಬಿಗಿಯಾಗಿ ಹಿಡಿದುಕೊಳ್ಳಬಹುದಾದ ಒಂದು ಕಾರ್ಯದ ಬಗ್ಗೆ ತಿಳಿಸಿಕೊಡಬೇಕೆಂದು ಪ್ರವಾದಿಯವರೊಂದಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ)ವಿನಂತಿಸಿದರು.
ಆಗ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಆ ವ್ಯಕ್ತಿಯೊಂದಿಗೆ, ಅವರ ನಾಲಗೆಯು ಎಲ್ಲಾ ಸಮಯ ಮತ್ತು ಎಲ್ಲಾ ಪರಿಸ್ಥಿತಿಗಳಲ್ಲಿ ತಸ್ಬೀಹ್, ತಹ್ಮೀದ್, ಇಸ್ತಿಗ್ಫಾರ್, ದುಆ ಮುಂತಾದ ಅಲ್ಲಾಹನ ಸ್ಮರಣೆಗಳ ಮೂಲಕ ಸದಾ ಹಸಿಯಾಗಿ, ಅಲುಗಾಡುತ್ತಾ ಇರಬೇಕೆಂದು ಸೂಚಿಸಿದರು.