عن أبي ذر رضي الله عنه قال: قال لي النبي صلى الله عليه وسلم:
«لَا تَحْقِرَنَّ مِنَ الْمَعْرُوفِ شَيْئًا، وَلَوْ أَنْ تَلْقَى أَخَاكَ بِوَجْهٍ طَلْقٍ».
[صحيح] - [رواه مسلم] - [صحيح مسلم: 2626]
المزيــد ...
ಅಬೂ ದರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ನನ್ನೊಂದಿಗೆ ಹೇಳಿದರು:
"ಒಳಿತಿನ ಕಾರ್ಯಗಳಲ್ಲಿ ಯಾವುದನ್ನೂ ಕೀಳಾಗಿ ಕಾಣಬೇಡ. ಅದು ನಿನ್ನ ಸಹೋದರನನ್ನು ಮಂದಹಾಸದ ಮುಖದಿಂದ ಭೇಟಿಯಾಗುವುದಾಗಿದ್ದರೂ ಸಹ.”
[صحيح] - [رواه مسلم] - [صحيح مسلم - 2626]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ಒಳಿತಿನ ಕಾರ್ಯಗಳನ್ನು ಮಾಡಲು ಪ್ರೋತ್ಸಾಹಿಸಿದ್ದಾರೆ ಮತ್ತು ಅದರಲ್ಲಿ ಯಾವುದನ್ನೂ ಕೀಳಾಗಿ ಕಾಣಬಾರದು; ಅದೊಂದು ಚಿಕ್ಕ ಸಂಗತಿಯಾಗಿದ್ದರೂ ಸಹ ಎಂದು ಹೇಳಿದ್ದಾರೆ. ಭೇಟಿಯಾಗುವಾಗ ಮುಖದಲ್ಲಿ ಮುಗುಳ್ನಗೆ ಬೀರುವುದು ಒಂದು ಚಿಕ್ಕ ಒಳಿತಿನ ಕಾರ್ಯವಾಗಿದೆ. ಮುಸಲ್ಮಾನರು ಇದರಲ್ಲಿ ಉತ್ಸಾಹ ತೋರಬೇಕು. ಏಕೆಂದರೆ ಇದರಿಂದ ಮುಸಲ್ಮಾನರ ನಡುವೆ ಅನ್ಯೋನ್ಯತೆ ಹೆಚ್ಚಾಗುತ್ತದೆ ಮತ್ತು ಅವರ ಮನಸ್ಸಿಗೆ ಸಂತೋಷವನ್ನು ನೀಡಿದಂತಾಗುತ್ತದೆ.