عن حذيفة رضي الله عنه قال: سمعت النبي صلى الله عليه وسلم يقول:
«لَا يَدْخُلُ الْجَنَّةَ قَتَّاتٌ».
[صحيح] - [متفق عليه] - [صحيح البخاري: 6056]
المزيــد ...
ಹುದೈಫ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
“ಚಾಡಿಕೋರ ಸ್ವರ್ಗವನ್ನು ಪ್ರವೇಶಿಸುವುದಿಲ್ಲ.”
[صحيح] - [متفق عليه] - [صحيح البخاري - 6056]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಜನರ ನಡುವಿನ ಸಂಬಂಧಗಳಿಗೆ ಹುಳಿ ಹಿಂಡಲು ಯಾರು ಒಬ್ಬರ ಮಾತನ್ನು ಇನ್ನೊಬ್ಬರಿಗೆ ತಲುಪಿಸುತ್ತಾರೋ ಅವರು ಶಿಕ್ಷಾರ್ಹರಾಗಿದ್ದು ಸ್ವರ್ಗವನ್ನು ಪ್ರವೇಶಿಸುವುದಿಲ್ಲ.