عَنْ أَبِي الدَّرْدَاءِ رضي الله عنه أَنَّ النَّبِيَّ صَلَّى اللَّهُ عَلَيْهِ وَسَلَّمَ قَالَ:
«مَا شَيْءٌ أَثْقَلُ فِي مِيزَانِ الْمُؤْمِنِ يَوْمَ القِيَامَةِ مِنْ خُلُقٍ حَسَنٍ، وَإِنَّ اللَّهَ لَيُبْغِضُ الفَاحِشَ البَذِيءَ».
[صحيح] - [رواه أبو داود والترمذي] - [سنن الترمذي: 2002]
المزيــد ...
ಅಬೂ ದರ್ದಾಅ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಉತ್ತಮ ಗುಣಕ್ಕಿಂತಲೂ ಹೆಚ್ಚು ಭಾರವಿರುವ ಯಾವುದೇ ವಸ್ತುವಿಲ್ಲ. ಅಶ್ಲೀಲ ಮತ್ತು ಅಸಭ್ಯವಾಗಿ ಮಾತನಾಡುವವರನ್ನು ಅಲ್ಲಾಹು ದ್ವೇಷಿಸುತ್ತಾನೆ."
[صحيح] - [رواه أبو داود والترمذي] - [سنن الترمذي - 2002]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಪುನರುತ್ಥಾನ ದಿನದಂದು ಸತ್ಯವಿಶ್ವಾಸಿಯ ತಕ್ಕಡಿಯಲ್ಲಿ ಕರ್ಮಗಳು ಮತ್ತು ಮಾತುಗಳ ಪೈಕಿ ಅತ್ಯಂತ ಹೆಚ್ಚು ಭಾರವಿರುವ ವಸ್ತು ಉತ್ತಮ ನಡವಳಿಕೆಯಾಗಿದೆ. ಮಂದಹಾಸ ಬೀರುವುದು, ತೊಂದರೆ ನೀಡದಿರುವುದು ಮತ್ತು ಒಳಿತು ಮಾಡುವುದು ಇದರಲ್ಲಿ ಒಳಪಡುತ್ತವೆ. ಮಾತಿನಲ್ಲಿ ಮತ್ತು ಕ್ರಿಯೆಯಲ್ಲಿ ದುರ್ವರ್ತನೆ ತೋರುವವನನ್ನು ಮತ್ತು ಅಸಭ್ಯವಾಗಿ ಮಾತನಾಡುವವನನ್ನು ಅಲ್ಲಾಹು ದ್ವೇಷಿಸುತ್ತಾನೆ.