عن جُندب بن عبد الله القَسْرِِي رضي الله عنه قال: قال رسول الله صلى الله عليه وسلم:
«مَنْ صَلَّى صَلَاةَ الصُّبْحِ فَهُوَ فِي ذِمَّةِ اللهِ، فَلَا يَطْلُبَنَّكُمُ اللهُ مِنْ ذِمَّتِهِ بِشَيْءٍ، فَإِنَّهُ مَنْ يَطْلُبْهُ مِنْ ذِمَّتِهِ بِشَيْءٍ يُدْرِكْهُ، ثُمَّ يَكُبَّهُ عَلَى وَجْهِهِ فِي نَارِ جَهَنَّمَ».
[صحيح] - [رواه مسلم] - [صحيح مسلم: 657]
المزيــد ...
ಜುಂದುಬ್ ಬಿನ್ ಅಬ್ದುಲ್ಲಾ ಕಸ್ರಿ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಫಜ್ರ್ ನಮಾಝ್ ಮಾಡುವವನು ಅಲ್ಲಾಹನ ರಕ್ಷಣೆಯಲ್ಲಿದ್ದಾನೆ. ಆದ್ದರಿಂದ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ನಿಮ್ಮನ್ನು ಪ್ರಶ್ನಿಸುವಂತೆ ಮಾಡಬೇಡಿ. ಏಕೆಂದರೆ, ತನ್ನ ರಕ್ಷಣೆಯನ್ನು ಮುರಿದದ್ದಕ್ಕಾಗಿ ಅಲ್ಲಾಹು ಯಾರನ್ನಾದರೂ ಪ್ರಶ್ನೆ ಮಾಡಿದರೆ ಅವನನ್ನು ಹಿಡಿದು ತಲೆಕೆಳಗಾಗಿ ನರಕಕ್ಕೆ ಎಸೆಯುತ್ತಾನೆ."
[صحيح] - [رواه مسلم] - [صحيح مسلم - 657]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಫಜ್ರ್ ನಮಾಝ್ ಮಾಡಿದವನು ಅಲ್ಲಾಹನ ರಕ್ಷಣೆ ಮತ್ತು ಭದ್ರತೆಯಲ್ಲಿರುತ್ತಾನೆ; ಅಲ್ಲಾಹು ಅವನನ್ನು ರಕ್ಷಿಸುತ್ತಾನೆ ಮತ್ತು ಬೆಂಬಲಿಸುತ್ತಾನೆ.
ನಂತರ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ), ಫಜ್ರ್ ನಮಾಝನ್ನು ತೊರೆಯುವ ಮೂಲಕ ಅಥವಾ ಅದನ್ನು ನಿರ್ವಹಿಸಲು ಹೋಗುವವರಿಗೆ ಅಡ್ಡಿಪಡಿಸುವುದು ಅಥವಾ ಅವರ ಮೇಲೆ ಆಕ್ರಮಣ ಮಾಡುವುದು ಮುಂತಾದವುಗಳ ಮೂಲಕ ಈ ಕರಾರಿನಲ್ಲಿ ಕೊರತೆ ಮಾಡುವವರ ಮತ್ತು ಅದನ್ನು ಮುರಿಯುವವರ ಬಗ್ಗೆ ಎಚ್ಚರಿಕೆ ನೀಡುತ್ತಾರೆ. ಹೀಗೆ ಮಾಡುವವರು ಈ ರಕ್ಷಣೆಯನ್ನು ಮುರಿದಿದ್ದಾರೆ ಮತ್ತು ಅಲ್ಲಾಹನ ವಿಷಯದಲ್ಲಿ ಕೊರತೆ ಮಾಡಿದವರನ್ನು ಅವನು ಪ್ರಶ್ನಿಸುತ್ತಾನೆ ಎಂಬ ಎಚ್ಚರಿಕೆಗೆ ಅರ್ಹರಾಗುತ್ತಾರೆ. ಅಲ್ಲಾಹು ಯಾರನ್ನಾದರೂ ಪ್ರಶ್ನಿಸಿದರೆ ಅವನು ಅವನನ್ನು ಹಿಡಿದು ತಲೆಕೆಳಗಾಗಿ ನರಕಕ್ಕೆ ಎಸೆಯುತ್ತಾನೆ.