عن جرير بن عبد الله رضي الله عنه قال: قال رسول الله صلى الله عليه وسلم:
«مَنْ لَا يَرْحَمِ النَّاسَ لَا يَرْحَمْهُ اللهُ عَزَّ وَجَلَّ».
[صحيح] - [متفق عليه] - [صحيح مسلم: 2319]
المزيــد ...
ಜರೀರ್ ಬಿನ್ ಅಬ್ದುಲ್ಲಾ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
“ಯಾರು ಇತರರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ.”
[صحيح] - [متفق عليه] - [صحيح مسلم - 2319]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಯಾರು ಮನುಷ್ಯರಿಗೆ ದಯೆ ತೋರುವುದಿಲ್ಲವೋ ಅವರಿಗೆ ಸರ್ವಶಕ್ತನಾದ ಅಲ್ಲಾಹು ದಯೆ ತೋರುವುದಿಲ್ಲ. ಅಲ್ಲಾಹನ ದಯೆಯನ್ನು ಪಡೆಯುವ ಅತಿದೊಡ್ಡ ಮಾರ್ಗವು ಸಹಜೀವಿಗಳಿಗೆ ದಯೆ ತೋರುವುದಾಗಿದೆ.