عن أنس بن مالك رضي الله عنه قال: قال رسول الله صلى الله عليه وسلم:
«إِنَّ اللهَ لَيَرْضَى عَنِ الْعَبْدِ أَنْ يَأْكُلَ الْأَكْلَةَ فَيَحْمَدَهُ عَلَيْهَا، أَوْ يَشْرَبَ الشَّرْبَةَ فَيَحْمَدَهُ عَلَيْهَا».
[صحيح] - [رواه مسلم] - [صحيح مسلم: 2734]
المزيــد ...
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಆಹಾರವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ಮತ್ತು ಪಾನೀಯವನ್ನು ಸೇವಿಸಿ ಅದಕ್ಕಾಗಿ ಅಲ್ಲಾಹನಿಗೆ ಕೃತಜ್ಞತೆ ಸಲ್ಲಿಸುವ ದಾಸನನ್ನು ಅಲ್ಲಾಹು ಪ್ರೀತಿಸುತ್ತಾನೆ."
[صحيح] - [رواه مسلم] - [صحيح مسلم - 2734]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ದಾಸನು ಅಲ್ಲಾಹನ ಅನುಗ್ರಹಗಳಿಗೆ ಕೃತಜ್ಞತೆ ಸಲ್ಲಿಸಲು ಅಲ್ಲಾಹನನ್ನು ಸ್ತುತಿಸುವುದು ಅಲ್ಲಾಹನ ಸಂಪ್ರೀತಿಯನ್ನು ಪಡೆಯುವ ಮಾರ್ಗಗಳಲ್ಲಿ ಒಂದಾಗಿದೆ. ಆದ್ದರಿಂದ ದಾಸನು ಆಹಾರ ಸೇವಿಸಿದರೆ ಅಲ್‌ಹಮ್ದುಲಿಲ್ಲಾಹ್ ಎಂದು ಹೇಳಬೇಕು ಮತ್ತು ಪಾನೀಯವನ್ನು ಸೇವಿಸಿದರೆ ಅಲ್‌ಹಮ್ದುಲಿಲ್ಲಾಹ್ ಎಂದು ಹೇಳಬೇಕು.