عن عائشة رضي الله عنها قالت: سمعت رسول الله صلى الله عليه وسلم يقول:
«إنَّ المُؤْمِنَ ليُدرِكُ بِحُسْنِ خُلُقِهِ دَرَجَةَ الصَّائِمِ القَائِمِ».
[صحيح بشواهده] - [رواه أبو داود وأحمد] - [سنن أبي داود: 4798]
المزيــد ...
ಆಯಿಶ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ನಾನು ಕೇಳಿದ್ದೇನೆ:
"ನಿಶ್ಚಯವಾಗಿಯೂ ಒಬ್ಬ ಸತ್ಯವಿಶ್ವಾಸಿ ತನ್ನ ಒಳ್ಳೆಯ ನಡವಳಿಕೆಯಿಂದ, ಉಪವಾಸ ಆಚರಿಸುವವನ ಮತ್ತು ರಾತ್ರಿಯಲ್ಲಿ ನಮಾಝ್ ಮಾಡುವವನ ಪದವಿಯನ್ನು ಪಡೆಯುತ್ತಾನೆ."
[صحيح بشواهده] - [رواه أبو داود وأحمد] - [سنن أبي داود - 4798]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ವಿವರಿಸುವುದೇನೆಂದರೆ, ಉತ್ತಮ ನಡವಳಿಕೆಯು ಹಗಲಿನಲ್ಲಿ ನಿರಂತರವಾಗಿ ಉಪವಾಸ ಆಚರಿಸುವ ಮತ್ತು ರಾತ್ರಿಯಲ್ಲಿ ನಮಾಝ್ ನಿರ್ವಹಿಸುವ ವ್ಯಕ್ತಿಯ ಪದವಿಯನ್ನು ತಲುಪಲು ಅನುವು ಮಾಡಿಕೊಡುತ್ತದೆ. ಉತ್ತಮ ನಡವಳಿಕೆ ಎಂದರೆ ಜನರಿಗೆ ಒಳಿತು ಮಾಡುವುದು, ಒಳ್ಳೆಯ ಮಾತುಗಳನ್ನಾಡುವುದು, ಮಂದಹಾಸ ಬೀರುವುದು, ಜನರಿಗೆ ತೊಂದರೆ ಕೊಡದಿರುವುದು ಮತ್ತು ಜನರಿಂದ ಉಂಟಾಗುವ ತೊಂದರೆಗಳನ್ನು ಸಹಿಸುವುದು.