عَنْ ابْنِ عُمَرَ رَضيَ اللهُ عنهُما أَنَّهُ سَمِعَ رَسُولَ اللهِ صَلَّى اللهُ عَلَيْهِ وَسَلَّمَ قَالَ:
«مَا حَقُّ امْرِئٍ مُسْلِمٍ لَهُ شَيْءٌ يُوصِي فِيهِ، يَبِيتُ ثَلَاثَ لَيَالٍ، إِلَّا وَوَصِيَّتُهُ عِنْدَهُ مَكْتُوبَةٌ»، قَالَ عَبْدُ اللهِ بْنُ عُمَرَ رضي الله عنهما: «مَا مَرَّتْ عَلَيَّ لَيْلَةٌ مُنْذُ سَمِعْتُ رَسُولَ اللهِ صَلَّى اللهُ عَلَيْهِ وَسَلَّمَ قَالَ ذَلِكَ إِلَّا وَعِنْدِي وَصِيَّتِي».
المزيد
ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಅವರು ಕೇಳಿದರು:
"ವಸಿಯ್ಯತ್ (ಮರಣಶಾಸನ) ಮಾಡಲು ಏನಾದರೂ (ವಿಷಯ/ಸಂಪತ್ತು) ಇರುವ ಯಾವುದೇ ಮುಸ್ಲಿಂ ವ್ಯಕ್ತಿಗೆ, ತನ್ನ ವಸಿಯ್ಯತ್ ಅನ್ನು ತನ್ನ ಬಳಿ ಬರೆದಿಡದೆ ಮೂರು ರಾತ್ರಿಗಳನ್ನು ಕಳೆಯುವ ಹಕ್ಕಿಲ್ಲ (ಅಥವಾ ಹಾಗೆ ಕಳೆಯುವುದು ಅವನಿಗೆ ತಕ್ಕುದಲ್ಲ)".. ಅಬ್ದುಲ್ಲಾ ಇಬ್ನ್ ಉಮರ್ (ಅಲ್ಲಾಹು ಅವರಿಬ್ಬರ ಬಗ್ಗೆ ಸಂಪ್ರೀತನಾಗಲಿ) ಹೇಳುತ್ತಾರೆ: "ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೀಗೆ ಹೇಳುವುದನ್ನು ಕೇಳಿದ ದಿನದಿಂದ, ನಾನು ನನ್ನ ಬಳಿ ನನ್ನ ವಸಿಯ್ಯತ್ ಬರೆದಿಡದೆ ಒಂದು ರಾತ್ರಿಯನ್ನೂ ಕಳೆದಿಲ್ಲ".