عن أنس رضي الله عنه قال: قال النبي صلى الله عليه وسلم:
«لَا يُؤْمِنُ أَحَدُكُمْ حَتَّى أَكُونَ أَحَبَّ إِلَيْهِ مِنْ وَالِدِهِ وَوَلَدِهِ وَالنَّاسِ أَجْمَعِينَ».
[صحيح] - [متفق عليه] - [صحيح البخاري: 15]
المزيــد ...
ಅನಸ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ನಿಮ್ಮ ತಂದೆ-ತಾಯಿ, ಮಕ್ಕಳು ಮತ್ತು ಇತರೆಲ್ಲಾ ಜನರಿಗಿಂತ ನಾನು ನಿಮಗೆ ಹೆಚ್ಚು ಪ್ರೀತಿಯುಳ್ಳವನಾಗುವ ತನಕ ನಿಮ್ಮಲ್ಲಿ ಯಾರೂ ಸಂಪೂರ್ಣ ಸತ್ಯವಿಶ್ವಾಸಿಯಾಗುವುದಿಲ್ಲ."
[صحيح] - [متفق عليه] - [صحيح البخاري - 15]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇಲ್ಲಿ ತಿಳಿಸುವುದೇನೆಂದರೆ, ಎಲ್ಲಿಯ ತನಕ ಒಬ್ಬ ಮುಸಲ್ಮಾನನು ತನ್ನ ತಾಯಿ, ತಂದೆ, ಮಗ, ಮಗಳು ಮತ್ತು ಇತರೆಲ್ಲ ಜನರಲ್ಲಿರುವ ಪ್ರೀತಿಗಿಂತ ಪ್ರವಾದಿಯವರಲ್ಲಿರುವ ಪ್ರೀತಿಗೆ ಪ್ರಾಶಸ್ತ್ಯ ನೀಡುವುದಿಲ್ಲವೋ ಅಲ್ಲಿಯ ತನಕ ಅವನು ಪೂರ್ಣ ರೀತಿಯಲ್ಲಿ ಸತ್ಯವಿಶ್ವಾಸಿಯಾಗುವುದಿಲ್ಲ. ಪ್ರವಾದಿಯವರಲ್ಲಿರುವ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಪ್ರೀತಿಯು ಅವರನ್ನು ಅನುಸರಿಸಲು, ಅವರಿಗೆ ಸಹಾಯ ಮಾಡಲು ಮತ್ತು ಅವರಿಗೆ ಅವಿಧೇಯತೆ ತೋರದಿರಲು ಕಾರಣವಾಗಬೇಕು.