عن أنس بن مالك رضي الله عنه قال:
كَانَ رَسُولُ اللهِ صَلَّى اللهُ عَلَيْهِ وَسَلَّمَ أَحْسَنَ النَّاسِ خُلُقًا.
[صحيح] - [متفق عليه] - [صحيح مسلم: 2310]
المزيــد ...
ಅನಸ್ ಬಿನ್ ಮಾಲಿಕ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು:
"ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯುತ್ತಮ ನಡವಳಿಕೆಯನ್ನು ಹೊಂದಿದವರಾಗಿದ್ದರು."
[صحيح] - [متفق عليه] - [صحيح مسلم - 2310]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಜನರಲ್ಲೇ ಅತ್ಯಂತ ಪರಿಪೂರ್ಣವಾದ ನಡವಳಿಕೆಯನ್ನು ಹೊಂದಿದ್ದರು. ಉತ್ತಮ ರೀತಿಯಲ್ಲಿ ಮಾತನಾಡುವುದು, ಜನರಿಗೆ ಒಳಿತು ಮಾಡುವುದು, ಮಂದಹಾಸ ಬೀರುವುದು, ಜನರಿಗೆ ತೊಂದರೆ ಕೊಡದಿರುವುದು, ಜನರಿಂದ ಉಂಟಾಗುವ ತೊಂದರೆಗಳನ್ನು ಸಹಿಸುವುದು ಮುಂತಾದ ಎಲ್ಲಾ ಉತ್ತಮ ನಡವಳಿಕೆಗಳಲ್ಲೂ ಅವರು ಮುಂಚೂಣಿಯಲ್ಲಿದ್ದರು.