عن عبد الله بن مسعود رضي الله عنه قال: قال رسول الله صلى الله عليه وسلم:
«مَنْ قَرَأَ حَرْفًا مِنْ كِتَابِ اللهِ فَلَهُ بِهِ حَسَنَةٌ، وَالْحَسَنَةُ بِعَشْرِ أَمْثَالِهَا، لَا أَقُولُ {الم} حَرْفٌ، وَلَكِنْ {أَلِفٌ} حَرْفٌ، وَ{لَامٌ} حَرْفٌ، وَ{مِيمٌ} حَرْفٌ».
[حسن] - [رواه الترمذي] - [سنن الترمذي: 2910]
المزيــد ...
ಅಬ್ದುಲ್ಲಾ ಬಿನ್ ಮಸ್‌ಊದ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅವರು ಹೇಳಿದರು: ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ಯಾರು ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುತ್ತಾರೋ ಅವರಿಗೆ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಒಂದು ಒಳಿತು ಅದರ ಹತ್ತು ಪಟ್ಟು ಒಳಿತುಗಳ ಪ್ರತಿಫಲವನ್ನು ಒಳಗೊಂಡಿದೆ. ಅಲಿಫ್-ಲಾಮ್-ಮೀಮ್ ಒಂದೇ ಅಕ್ಷರವೆಂದು ನಾನು ಹೇಳುವುದಿಲ್ಲ. ಆದರೆ, ಅಲಿಫ್ ಒಂದು ಅಕ್ಷರವಾಗಿದೆ, ಲಾಮ್ ಒಂದು ಅಕ್ಷರವಾಗಿದೆ ಮತ್ತು ಮೀಮ್ ಒಂದು ಅಕ್ಷರವಾಗಿದೆ."
[حسن] - [رواه الترمذي] - [سنن الترمذي - 2910]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿ ಇರಲಿ) ಇಲ್ಲಿ ತಿಳಿಸುವುದೇನೆಂದರೆ, ಅಲ್ಲಾಹನ ಗ್ರಂಥದಿಂದ ಒಂದು ಅಕ್ಷರವನ್ನು ಪಠಿಸುವ ಪ್ರತಿಯೊಬ್ಬ ಮುಸಲ್ಮಾನನಿಗೂ ಒಂದು ಒಳಿತು ಮಾಡಿದ ಪ್ರತಿಫಲವಿದೆ. ಅವನಿಗೆ ಹತ್ತು ಒಳಿತುಗಳನ್ನು ಮಾಡಿದಷ್ಟು ಆ ಪ್ರತಿಫಲವನ್ನು ದ್ವಿಗುಣಗೊಳಿಸಲಾಗುತ್ತದೆ.
ನಂತರ ಅವರು ಅದನ್ನು ವಿವರಿಸುತ್ತಾ ಹೀಗೆ ಹೇಳುತ್ತಾರೆ: "ಅಲಿಫ್-ಲಾಮ್-ಮೀಮ್ ಒಂದೇ ಅಕ್ಷರವೆಂದು ನಾನು ಹೇಳುವುದಿಲ್ಲ. ಆದರೆ, ಅಲಿಫ್ ಒಂದು ಅಕ್ಷರವಾಗಿದೆ, ಲಾಮ್ ಒಂದು ಅಕ್ಷರವಾಗಿದೆ ಮತ್ತು ಮೀಮ್ ಒಂದು ಅಕ್ಷರವಾಗಿದೆ." ಅಲಿಫ್-ಲಾಮ್-ಮೀಮ್ ಮೂರು ಅಕ್ಷರಗಳಾಗಿದ್ದು ಅದನ್ನು ಪಠಿಸಿದರೆ ಮೂವತ್ತು ಒಳಿತುಗಳನ್ನು ಮಾಡಿದ ಪ್ರತಿಫಲ ದೊರಕುತ್ತದೆ.