عَنْ أَبِي هُرَيْرَةَ رضي الله عنه أَنَّ رَسُولَ اللهِ صَلَّى اللهُ عَلَيْهِ وَسَلَّمَ قَالَ:
«أَتَدْرُونَ مَا الْمُفْلِسُ؟» قَالُوا: الْمُفْلِسُ فِينَا مَنْ لَا دِرْهَمَ لَهُ وَلَا مَتَاعَ، فَقَالَ: «إِنَّ الْمُفْلِسَ مِنْ أُمَّتِي يَأْتِي يَوْمَ الْقِيَامَةِ بِصَلَاةٍ وَصِيَامٍ وَزَكَاةٍ، وَيَأْتِي قَدْ شَتَمَ هَذَا، وَقَذَفَ هَذَا، وَأَكَلَ مَالَ هَذَا، وَسَفَكَ دَمَ هَذَا، وَضَرَبَ هَذَا، فَيُعْطَى هَذَا مِنْ حَسَنَاتِهِ، وَهَذَا مِنْ حَسَنَاتِهِ، فَإِنْ فَنِيَتْ حَسَنَاتُهُ قَبْلَ أَنْ يُقْضَى مَا عَلَيْهِ أُخِذَ مِنْ خَطَايَاهُمْ فَطُرِحَتْ عَلَيْهِ، ثُمَّ طُرِحَ فِي النَّارِ».
[صحيح] - [رواه مسلم] - [صحيح مسلم: 2581]
المزيــد ...
ಅಬೂ ಹುರೈರ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ರಿಂದ ವರದಿ. ಅಲ್ಲಾಹನ ಸಂದೇಶವಾಹಕರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದರು:
"ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?" ಅವರು (ಸ್ವಹಾಬಗಳು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ ಮತ್ತು ಝಕಾತ್‌ಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇತರರನ್ನು ನಿಂದಿಸಿ, ಇತರರ ಮೇಲೆ ಸುಳ್ಳಾರೋಪ ಹೊರಿಸಿ, ಇತರರ ರಕ್ತ ಚೆಲ್ಲಿ ಮತ್ತು ಇತರರಿಗೆ ಥಳಿಸಿದಂತಹ ಪಾಪಗಳೊಂದಿಗೂ ಬರುತ್ತಾನೆ. ಆಗ ಅವನ ಸತ್ಕರ್ಮಗಳಿಂದ ಕೆಲವನ್ನು ನೀಡಿ ಅವರಿಗೆ ನ್ಯಾಯ ಒದಗಿಸಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅವರ ಕೆಲವು ಪಾಪಗಳನ್ನು ತೆಗೆದು ಇವನ ಮೇಲೆ ಹೊರಿಸಲಾಗುವುದು. ನಂತರ ಅವನನ್ನು ನರಕಕ್ಕೆ ಎಸೆಯಲಾಗುವುದು."
[صحيح] - [رواه مسلم] - [صحيح مسلم - 2581]
ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ತಮ್ಮ ಸಹಚರರೊಡನೆ ಕೇಳಿದರು: "ದಿವಾಳಿ ಯಾರೆಂದು ನಿಮಗೆ ತಿಳಿದಿದೆಯೇ?" ಅವರು (ಸಹಚರರು) ಹೇಳಿದರು: "ನಮ್ಮಲ್ಲಿ ದಿವಾಳಿ ಯಾರೆಂದರೆ ಹಣ ಅಥವಾ ಸಾಮಾನುಗಳು ಇಲ್ಲದವನು." ಅವರು ಹೇಳಿದರು: "ಖಂಡಿತವಾಗಿಯೂ, ನನ್ನ ಸಮುದಾಯದಲ್ಲಿ ದಿವಾಳಿ ಯಾರೆಂದರೆ, ಪುನರುತ್ಥಾನದ ದಿನದಂದು ನಮಾಝ್, ಉಪವಾಸ, ಝಕಾತ್ ಮುಂತಾದ ಸತ್ಕರ್ಮಗಳೊಂದಿಗೆ ಬರುವವನು. ಆದರೆ, ಅದೇ ಸಮಯ ಅವನು ಇನ್ನೊಬ್ಬರನ್ನು ನಿಂದಿಸಿರುತ್ತಾನೆ ಮತ್ತು ಅವಹೇಳನ ಮಾಡಿರುತ್ತಾನೆ. ಇನ್ನೊಬ್ಬರ ಮೇಲೆ ಸುಳ್ಳಾರೋಪ ಹೊರಿಸಿ ಗೌರವಚ್ಯುತಿ ಮಾಡಿರುತ್ತಾನೆ. ಇನ್ನೊಬ್ಬರ ಹಣವನ್ನು ತಿಂದು ಅದನ್ನು ವಾಪಸು ಕೊಡಲು ನಿರಾಕರಿಸಿರುತ್ತಾನೆ. ಇನ್ನೊಬ್ಬರ ರಕ್ತವನ್ನು ಚೆಲ್ಲಿ ಅವರ ಮೇಲೆ ದಬ್ಬಾಳಿಕೆ ಮಾಡಿರುತ್ತಾನೆ. ಇನ್ನೊಬ್ಬರನ್ನು ಥಳಿಸಿ ಅವಮಾನ ಮಾಡಿರುತ್ತಾನೆ. ಆದ್ದರಿಂದ ಅನ್ಯಾಯಕ್ಕೊಳಗಾದವರಲ್ಲಿ ಎಲ್ಲರಿಗೂ ಇವನ ಸತ್ಕರ್ಮಗಳಲ್ಲಿ ಕೆಲವನ್ನು ನೀಡಲಾಗುವುದು. ಅವರೆಲ್ಲರಿಗೂ ನ್ಯಾಯ ಒದಗಿಸುವ ಮೊದಲೇ ಇವನ ಸತ್ಕರ್ಮಗಳು ಮುಗಿದು ಬಿಟ್ಟರೆ, ಅನ್ಯಾಯಕ್ಕೊಳಗಾದವರ ಕೆಲವು ಪಾಪಗಳನ್ನು ತೆಗೆದು ಇವನ ಹೆಸರಲ್ಲಿ ದಾಖಲಿಸಲಾಗುವುದು. ನಂತರ, ಅವನಲ್ಲಿ ಯಾವುದೇ ಸತ್ಕರ್ಮಗಳು ಇಲ್ಲದಿರುವ ಕಾರಣ ಅವನನ್ನು ನರಕಕ್ಕೆ ಎಸೆಯಲಾಗುವುದು.